ETV Bharat / state

ಸೀಬರ್ಡ್ ನೌಕಾನೆಲೆ ಯೋಜನೆ: ಸಮಪ್ರಮಾಣದ ಪರಿಹಾರ, ಮನೆಗೊಂದು ಉದ್ಯೋಗ ಮನವಿಗೆ ಸಿಎಂ ಸ್ಪಂದನೆ - ಭೂಸ್ವಾಧೀನ ಪರಿಹಾರ ನಿಗದಿ

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

CM Siddaramaiah and MB Patil
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಂ ಬಿ ಪಾಟೀಲ್​
author img

By ETV Bharat Karnataka Team

Published : Oct 21, 2023, 1:31 PM IST

ಬೆಂಗಳೂರು: ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್‌ ಎನ್‌ಕ್ಲೇವ್‌ ನಿರ್ಮಿಸುವ ಯೋಜನೆಗೆ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2013ರ ಭೂಸ್ವಾಧೀನ ಕಾಯ್ದೆಯ ಅನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಡೆದಿರುವ ತಾರತಮ್ಯ ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಮತ್ತು ಮೋಸ ಸರಿಪಡಿಸಿ ಎಂದು ಸಭೆಯಲ್ಲಿ ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಜ್ಞಾನಿಕವಾಗಿ, ನಿಯಮಬದ್ಧವಾಗಿ ಪರಿಹಾರ ಕೊಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯ ಕಾರ್ಯದರ್ಶಿಗಳು ಮತ್ತು ಸಂಬಂಧಿಸಿದ ಇತರ ಹಿರಿಯ ಅಧಿಕಾರಿಗಳೊಂದಿಗೆ, ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ಕುರಿತು ಹಾಗೂ ಸೂಕ್ತ ನಿವೇಶನ ನೀಡುವ ಕುರಿತಂತೆ ಸಭೆ ನಡೆಸಿ ಚರ್ಚಿಸುವಂತೆ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್​ ಅವರಿಗೆ ಸೂಚಿಸಿದರು. ಸೀಬರ್ಡ್‌ ಮೊದಲ ಹಂತದ ಯೋಜನೆ ಅಡಿ ಭೂಮಿ ಕಳೆದುಕೊಂಡವರ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್​, ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್‌ ಸೈಲ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ. ಸಿ. ಜಾಫರ್‌, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಮತ್ತಿತರ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಏಷ್ಯಾದಲ್ಲಿಯೇ ಅತೀ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಾರವಾರದ ಐಎನ್​ಎಸ್​ ಕದಂಬ ನೌಕಾನೆಲೆಯಲ್ಲಿ ಎರಡನೇ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ದೇಶದ ರಕ್ಷಣಾ ವ್ಯವಸ್ಥೆಗೆ ಕೈಗನ್ನಡಿಯಾಗಿರುವ ಸೀಬರ್ಡ್​ ಯೋಜನೆಗೆ ಇಲ್ಲಿನ ಸ್ಥಳೀಯರು ತಮ್ಮ ಮನೆ, ಜಮೀನುಗಳನ್ನು ನೀಡಿದ್ದಾರೆ. ಆದರೆ ಸೀಬರ್ಡ್​ನಲ್ಲಿ ಗುತ್ತಿಗೆ ಪಡೆದಿರುವ ಕಂಪೆನಿಗಳು ಕಲವರಿಗೆ ಮಾತ್ರ ಉದ್ಯೋಗ ನೀಡಿದೆ. ಜೊತೆಗೆ ಪರಿಹಾರದಲ್ಲೂ ತಾರತಮ್ಯ ಮಾಡಲಾಗಿದೆ ಎನ್ನುವ ಆರೋಪವೂ ಕೇಳಿ ಬಂದಿತ್ತು.

ಇದನ್ನೂ ಓದಿ : ಪಿಆರ್​ಆರ್ ಯೋಜನೆ ನಿಲ್ಲುವುದಿಲ್ಲ, ರೈತರ ಹಿತ ಕಾಯಲು ಸರ್ಕಾರ ಬದ್ಧ: ಡಿ ಕೆ ಶಿವಕುಮಾರ್ ಭರವಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.