ETV Bharat / state

ಕೊರೊನಾ ಉಲ್ಬಣ.. ಬೆಂಗಳೂರಿನಲ್ಲಿ ಇಂದಿನಿಂದ ಸೆಕ್ಷನ್ 144 ಜಾರಿ - Section 144 in Bengaluru news

ಕೊರೊನಾ ಕೇಸ್​ಗಳು ಉಲ್ಬಣಿಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇಂದಿನಿಂದ ನಗರದಾದ್ಯಂತ ಸೆಕ್ಷನ್ 144 ವಿಧಿಸಲಾಗುವುದು ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಸೆಕ್ಷನ್ 144 ಜಾರಿ
ಬೆಂಗಳೂರಿನಲ್ಲಿ ಇಂದಿನಿಂದ ಸೆಕ್ಷನ್ 144 ಜಾರಿ
author img

By

Published : Apr 7, 2021, 3:38 PM IST

Updated : Apr 7, 2021, 5:31 PM IST

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ನಗರಾದ್ಯಂತ ಸೆಕ್ಷನ್ 144 ವಿಧಿಸಲಾಗುವುದು ಎಂದು ತಿಳಿದುಬಂದಿದೆ.

ಬೆಂಗಳೂರು ನಗರದ ಮಿತಿಯಲ್ಲಿರುವ ಅಪಾರ್ಟ್ಮೆಂಟ್ / ವಸತಿ ಸಂಕೀರ್ಣಗಳಲ್ಲಿ ಈಜುಕೊಳ, ಜಿಮ್ನಾಷಿಯಂ, ಪಾರ್ಟಿ ಹಾಲ್ಸ್ ಮುಂತಾದ ಸೌಲಭ್ಯಗಳ ಕಾರ್ಯಾಚರಣೆಯನ್ನು ನಿಷೇಧಿಸಿ" ಆದೇಶಿಸಲಾಗಿದೆ.

sec-144-crpc-to-be-imposed-in-bangalore
ಬೆಂಗಳೂರಿನಲ್ಲಿ ಇಂದಿನಿಂದ ಸೆಕ್ಷನ್ 144 ಜಾರಿ

ಈ ಕುರಿತು ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್, ಕೊರೊನಾ ಸೋಂಕು ನಿಯಂತ್ರಿಸಲು ಈಗಾಗಲೇ ಹೊರಡಿಸಿರುವ ಕೋವಿಡ್ ಶಿಷ್ಟಾಚಾರ ಜಾರಿಯಲ್ಲಿದೆ. ಇದಕ್ಕೆ‌‌ ಪೂರಕವಾಗಿ ಏ.21 ರ ವರೆಗೆ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇಂದೂ ಕೂಡಾ ಬೆಂಗಳೂರಿನಲ್ಲಿ 5066 ಹೊಸ ಕೊವಿಡ್​ ಪ್ರಕರಣಗಳು ವರದಿಯಾಗಿವೆ. ನಿತ್ಯ ಪ್ರಕರಣ ಸಂಖ್ಯೆ ಏರುತ್ತಲೇ ಸಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಂತಿದೆ.

Last Updated : Apr 7, 2021, 5:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.