ETV Bharat / state

ಎರಡನೇ ಹಂತದ ಗ್ರಾಪಂ ಚುನಾವಣೆ : ಮತದಾನಕ್ಕೆ ರಾಜ್ಯ ಚುನಾವಣಾ ಆಯೋಗ ಸಜ್ಜು - ರಾಜ್ಯ ಚುನಾವಣಾ ಆಯೋಗ

ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮಂಗಳವಾರ ಮುಕ್ತಾಯಗೊಂಡಿದ್ದು, ಎರಡನೇ ಹಂತದ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ.

ರಾಜ್ಯ ಚುನಾವಣಾ ಆಯೋಗ
Election Commission
author img

By

Published : Dec 23, 2020, 10:46 AM IST

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ ಕೈಗೊಂಡಿದೆ.

ಮಂಗಳವಾರ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣಾ ಮತದಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೀಗ ಡಿ. 27 ರಂದು ನಡೆಯುವ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಸಂಪೂರ್ಣ ಸಿದ್ಧತೆಯನ್ನು ರಾಜ್ಯ ಚುನಾವಣಾ ಆಯೋಗ ನಡೆಸಿದೆ.

ಎರಡನೇ ಹಂತದ ಮತದಾನ ಪ್ರಕ್ರಿಯೆ ಸಂಬಂಧಿತ ಅಂಕಿ - ಅಂಶಗಳು :

  • ಚುನಾವಣೆ ನಡೆಯುವ ಒಟ್ಟು ತಾಲೂಕುಗಳ ಸಂಖ್ಯೆ -109
  • ಗ್ರಾಮ ಪಂಚಾಯಿತಿಗಳ ಸಂಖ್ಯೆ -2709
  • ಒಟ್ಟು ಸ್ಥಾನಗಳ ಸಂಖ್ಯೆ- 43,291
  • ಸ್ವೀಕೃತವಾದ ಒಟ್ಟು ನಾಮಪತ್ರಗಳು- 1,47,649
  • ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿರುವ ಸ್ಥಾನಗಳ ಸಂಖ್ಯೆ- 216
  • ಕ್ರಮಬದ್ಧವಾಗಿ ನಾಮನಿರ್ದೇಶಿತರಾದ ಅಭ್ಯರ್ಥಿಗಳ ಸಂಖ್ಯೆ- 1,39,546
  • ಉಮೇದುವಾರಿಕೆಗಳನ್ನು ಹಿಂಪಡೆದ ಅಭ್ಯರ್ಥಿಗಳ ಸಂಖ್ಯೆ -34,115
  • ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳ ಸಂಖ್ಯೆ -3697
  • ಚುನಾವಣೆ ನಡೆಯಲಿರುವ ಸ್ಥಾನಗಳ ಸಂಖ್ಯೆ -39, 378
  • ಅಂತಿಮವಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆ- 1,05,431 ಆಗಿದೆ.

ಜಿಲ್ಲಾವಾರು ಹೆಚ್ಚಿನ ಅಂಕಿ ಅಂಶಗಳ ಮಾಹಿತಿಯನ್ನು ಆಯೋಗದ ಅಧಿಕೃತ www.karsec.gov.in ನಲ್ಲಿ ಪಡೆಯಬಹುದಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Second level Grama Panchayat Election
ಎರಡನೇ ಹಂತದ ಮತದಾನ ಪ್ರಕ್ರಿಯೆ ಸಂಬಂಧಿತ ಅಂಕಿ ಅಂಶಗಳ ಮಾಹಿತಿ

ಓದಿ: ಕೊರೊನಾ ರೂಪಾಂತರ ಭೀತಿ : ಶಾಲೆ ಆರಂಭದ ಬಗ್ಗೆ ಸಚಿವರ ಸಭೆ

ಈ ಚುನಾವಣೆ ಯಾವುದೇ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಚಿಹ್ನೆಯ ಅಡಿ ನೇರವಾಗಿ ನಡೆಯುತ್ತಿಲ್ಲ. ಬದಲಾಗಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಕಾರ್ಯಕರ್ತರು ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಇವರ ಪರವಾಗಿ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಾಕಷ್ಟು ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಿದ್ದಾರೆ. ಎರಡು ರಾಷ್ಟ್ರೀಯ ಹಾಗೂ ಒಂದು ಪ್ರಾದೇಶಿಕ ಪಕ್ಷಕ್ಕೆ ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಕಳಿಸುವುದು ಕೂಡ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಎರಡನೇ ಹಂತದ ಮತದಾನ ಡಿ. 27ರಂದು ಪೂರ್ಣಗೊಳ್ಳಲಿದ್ದು, ಡಿ. 30ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.