ETV Bharat / state

ಎರಡನೇ ವಿವಾಹ ಕಾನೂನು ಬಾಹಿರ, ಆದರೆ ಅನೈತಿಕವಲ್ಲ : ಜೀವನಾಂಶ ನೀಡಲು ಹೈಕೋರ್ಟ್ ಆದೇಶ

author img

By

Published : Feb 15, 2023, 7:35 PM IST

ಎರಡನೇ ಮದುವೆ ಕಾನೂನು ಬಾಹಿರವಾದರೂ ಅನೈತಿಕವಲ್ಲ - ಹೈಕೋರ್ಟ್​ ಸ್ಪಷ್ಟನೆ

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಹಿಂದೂ ವಿವಾಹ ಕಾಯಿದೆ ಪ್ರಕಾರ ಎರಡನೇ ಮದುವೆ ಕಾನೂನು ಬಾಹಿರವಾದರೂ, ಅನೈತಿಕವಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಆದೇಶವನ್ನು ಪ್ರಸ್ತಾಪಿಸಿರುವ ಹೈಕೋರ್ಟ್, ಎರಡನೇ ಪತ್ನಿ ಮತ್ತು ಆಕೆಯ ಮಗನಿಗೆ ಜೀವನಾಂಶ ನೀಡಲು ವ್ಯಕ್ತಿಯೊಬ್ಬರಿಗೆ ನಿರ್ದೇಶನ ನೀಡಿದೆ. ಮೊದಲ ವಿವಾಹವಾಗಿರುವುದನ್ನು ಮರೆಮಾಚಿ ಎರಡನೇ ಮದುವೆಯಾಗಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದ ಪತಿಯಿಂದ ದೂರವಿದ್ದು, ಜೀವನಾಂಶ ಕೋರಿ ಬೆಂಗಳೂರು ನಗರದ ಯಶವಂತಪುರದ ನಿವಾಸಿ ಶೈಲಜಾ (ಹೆಸರು ಬದಲಿಸಲಾಗಿದೆ) ಎಂಬುವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಸುಪ್ರೀಂಕೋರ್ಟ್ ಹಲವು ಪ್ರಕರಣಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಪುರುಷನಾದವರು ತನ್ನ ಮೊದಲ ವಿವಾಹದ ಬಗ್ಗೆ ಮಾಹಿತಿ ನೀಡದೇ ಎರಡನೇ ವಿವಾಹವಾದಲ್ಲಿ ಎರಡನೇ ಪತ್ನಿ ಮತ್ತು ಆಕೆಯ ಮಕ್ಕಳ ಪೋಷಣೆಗೆ ಬದ್ಧರಾಗಿರಬೇಕು. ಅಲ್ಲದೇ, ಜೀವನಾಂಶದ ಉದ್ದೇಶಕ್ಕಾಗಿ ಕಾನೂನು ಬದ್ಧ ಹೆಂಡತಿಯಂತೆ ಪರಿಗಣಿಸಬೇಕು ಎಂದು ನಿರ್ದೆಶನ ನೀಡಿದೆ.

ಅಲ್ಲದೆ, ಹಿಂದೂ ವಿವಾಹ ಕಾಯಿದೆ ಪ್ರಕಾರ ಎರಡನೇ ಮದುವೆ ಅಸಿಂಧುವಾದರೂ, ಅವು ಅನೈತಿಕವಲ್ಲ. ಹೀಗಾಗಿ ಆರ್ಥಿಕವಾಗಿ ಪತಿಯನ್ನು ಅವಲಂಬಿಸಿದ್ದು, ಜೀವನಾಂಶ ನಿರಾಕರಿಸುವಂತಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಹೀಗಾಗಿ ಪ್ರತಿವಾದಿಯಾಗಿರುವವರು ಅರ್ಜಿದಾರರ ಜೀವನಾಂಶ ಪರಿಹಾರವನ್ನು ಮಹಿಳೆಗೆ 3 ಸಾವಿರ ಮತ್ತು 5 ವರ್ಷದ ಮಗುವಿಗೆ 2 ಸಾವಿರ ರೂನಂತೆ ಮಾಸಿಕ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು ?: ಅರ್ಜಿದಾರ ಮಹಿಳೆ ಸುಮಾರು 25 ವರ್ಷಗಳ ಹಿಂದೆ ಪ್ರತಿವಾದಿಯವರನ್ನು ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ ಪ್ರತಿವಾದಿ ಮೊದಲ ಮದುವೆ ಆಗಿದ್ದ ಅಂಶವನ್ನು ಮರೆಮಾಚಿದ್ದರು. ಕೆಲ ದಿನಗಳ ಬಳಿಕ ಪತ್ನಿ ಗರ್ಭಿಣಿಯಾಗಿದ್ದು, ಪತಿ ಕಿರುಕುಳ ನೀಡುವುದಕ್ಕೆ ಪ್ರಾರಂಭಿಸಿದ್ದರು. ಅಲ್ಲದೆ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚುವುದಕ್ಕೂ ಮುಂದಾಗಿದ್ದರು. ಇದರಿಂದ ಬೇಸತ್ತು ಅರ್ಜಿದಾರರು ತವರು ಮನೆಗೆ ಹೋಗಿ ಜೀವನ ನಡೆಸುತ್ತಿದ್ದರು. ಈ ನಡುವೆ ತನಗೆ ಹಾಗೂ ಮಗುವಿನ ಪೋಷಣೆಗೆ ಜೀವನಾಂಶ ಕೋರಿ ತುಮಕೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ದುರುದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರತಿವಾದಿಯಾಗಿರುವವರಿಗೆ ಸುಮಾರು ಎರಡು ಎಕರೆಗೂ ಹೆಚ್ಚು ಜಮೀನಿದೆ. ಈ ಜಮೀನಿನಲ್ಲಿ ಅಡಕೆ ಬೆಳೆಯುತ್ತಿದ್ದು, ಮಾಸಿಕ 20 ಸಾವಿರಕ್ಕೂ ಹೆಚ್ಚು ಲಾಭ ಬರುತ್ತಿದೆ. ಅಲ್ಲದೆ, ಶನಿಮಹಾತ್ಮ ದೇವಾಲಯದಲ್ಲಿ ಅರ್ಚಕರಾಗಿದ್ದು, 10 ಸಾವಿರಕ್ಕೂ ಹೆಚ್ಚು ದುಡಿಯುತ್ತಿದ್ದಾರೆ. ಹೀಗಾಗಿ ತನ್ನ ಜೀವನಕ್ಕಾಗಿ 5 ಸಾವಿರ ಮತ್ತು ಮಗನ ಶಿಕ್ಷಣಕ್ಕಾಗಿ 2500 ರು.ಗಳ ಜೀವನಾಂಶ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರ ಪುತ್ರನಿಗೆ ಪ್ರತಿವಾದಿಯೇ ತಂದೆಯಾಗಿದ್ದಾರೆ. ಇದಕ್ಕಾಗಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೋರಿದ್ದರು. ಆದರೆ, ಪ್ರತಿವಾದಿ ಅದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ನಿರಾಕರಿಸಿದ್ದರು. ಈ ಸಂಬಂಧ ವಿಚಾರಣಾ ನ್ಯಾಯಾಲಯ ಯಾವುದೇ ಪ್ರಸ್ತಾಪ ಮಾಡಿಲ್ಲ. ಆದರೂ, ಜೀವನಾಂಶ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ಪ್ರತಿವಾದಿ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ಎರಡನೇ ಪತ್ನಿಯಾಗಿರುವುದರಿಂದ ಕಾನೂನು ಪ್ರಕಾರ ಜೀವನಾಂಶ ಕೋರುವುದಕ್ಕೆ ಅವಕಾಶವಿರುವುದಿಲ್ಲ. ಅಲ್ಲದೆ, 25 ವರ್ಷಗಳ ಹಿಂದೆ ವಿವಾಹವಾಗಿರುವುದಾಗಿ ಅರ್ಜಿದಾರರು ಹೇಳಿದರೂ, ದಿನಾಂಕಗಳನ್ನು ದಾಖಲು ಮಾಡಿಲ್ಲ. ಕೆಲ ದಾಖಲೆಗಳನ್ನೇ ಪರಿಗಣಿಸಿ ಪತ್ನಿ ಎಂದು ಘೋಷಣೆ ಮಾಡಲು ಅವಕಾಶವಿಲ್ಲ. ಅಲ್ಲದೆ, ಪ್ರತಿವಾದಿಯು ಅಗತ್ಯವಿದ್ದಲ್ಲಿ ಡಿಎನ್‌ಎ ಪರೀಕ್ಷೆಗೆ ಒಳಗಾಗಲು ಸಿದ್ದರಿದ್ದಾರೆ ಎಂದು ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಪೀಠ ಈ ಆದೇಶ ನೀಡಿದೆ.

ಓದಿ : ಅಪಘಾತಕ್ಕೊಳಗಾದ ಕಾರಣ ವೇತನ ಶ್ರೇಣಿ ಕಡಿಮೆ ಮಾಡಲಾಗದು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.