ETV Bharat / state

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಪ್ರಶ್ನೆ ಪತ್ರಿಕೆಯಲ್ಲಿ ಕೆಲ ಬದಲಾವಣೆ ! - Second PUC Annual Exam time table Published

ಭಾಷಾ ವಿಷಯಗಳಲ್ಲಿ ಕಳೆದ ಸಾಲಿನಲ್ಲಿ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳ್ಳಿಸಲಾಗಿತ್ತು. ನಂತರ 2021-22ನೇ ಸಾಲಿನಲ್ಲೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಲಾಗಿದೆ. ಹೀಗಾಗಿ, ಈ 70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತೆ..

Second PUC Annual Exam time table Published
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
author img

By

Published : Jan 18, 2022, 7:54 PM IST

ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್-ಮೇ ತಿಂಗಳಲ್ಲಿ ನಡೆಸಲು ತಯಾರಿ ನಡೆದಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನ ಪಿಯು ಬೋರ್ಡ್ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಿಂದ ಮೇ 4ರ ತನಕ ಪರೀಕ್ಷೆ ನಡೆಯಲಿದೆ.

ಪೋಷಕರು ಅಥವಾ ವಿದ್ಯಾರ್ಥಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನ ಸಲ್ಲಿಸಲು ಇಂದಿನಿಂದ ಫೆಬ್ರವರಿ 1ರವರೆಗೆ ಅಂದರೆ ಸುಮಾರು 15 ದಿನಗಳ ಅವಕಾಶ ಕಲ್ಪಿಸಿಕೊಡಲಾಗಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ.

Second PUC Annual Exam time table Published
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ವಾರ್ಷಿಕ ಪರೀಕ್ಷೆಗೂ ಮುನ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯನ್ನ ಫೆಬ್ರವರಿ 17ರಿಂದ ಮಾರ್ಚ್ 25ರ ತನಕ ನಡೆಸಲು ದಿನಾಂಕವನ್ನ ನಿಗದಿಪಡಿಸಲಾಗಿದೆ.

ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14 ರಿಂದ 25ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 41 ಸಾವಿರಕ್ಕೂ ಹೆಚ್ಚು ಕೋವಿಡ್‌ ಸೋಂಕಿತರು ಪತ್ತೆ; ಪಾಸಿಟಿವಿಟಿ ದರ 22%

ಪಠ್ಯಕ್ರಮದಲ್ಲಿ ಬದಲಾವಣೆ ಏನು?

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತರ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಹಿತದೃಷ್ಟಿಯಿಂದ ಪಠ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಭಾಷಾ ವಿಷಯಗಳಲ್ಲಿ ಕಳೆದ ಸಾಲಿನಲ್ಲಿ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳ್ಳಿಸಲಾಗಿತ್ತು. ನಂತರ 2021-22ನೇ ಸಾಲಿನಲ್ಲೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಲಾಗಿದೆ. ಹೀಗಾಗಿ, ಈ 70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತೆ.

ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ: 2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಆಯಾ ಜಿಲ್ಲೆಯ ಉಪನಿರ್ದೇಶಕರ ನೇತೃತ್ವದಲ್ಲಿ ಸಿದ್ಧಪಡಿಸಿ, ಮಾರ್ಚ್ 28- ಏಪ್ರಿಲ್ 13ರವರೆಗೆ ನಡೆಸಲು ದಿನಾಂಕ ನಿಗದಿಪಡಿಸಿದೆ.

ಪ್ರಥಮ ಪಿಯುಸಿ ಭಾಷಾ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದ ಶೇ.30ರಷ್ಟು ಪಠ್ಯಕ್ರಮವನ್ನು 2021-22ನೇ ಸಾಲಿನಲ್ಲಿಯೂ ಕಡಿತಗೊಳಿಸಲಾಗಿದೆ. ಐಚ್ಛಿಕ ವಿಷಯಗಳಲ್ಲಿ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.

ದ್ವಿತೀಯ ಪಿಯುಸಿ ವೇಳಾಪಟ್ಟಿ :

16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

20-4-2022 - ಇತಿಹಾಸ, ಭೌತಶಾಸ್ತ್ರ

21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್

22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ

23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ

25-4-2022- ಅರ್ಥ ಶಾಸ್ತ್ರ

26-4-2022- ಹಿಂದಿ

28-4-2022- ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

29-4-2022- ಕನ್ನಡ

30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ

4-5-2022- ಇಂಗ್ಲಿಷ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.