ETV Bharat / state

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್ - No exam for second PUC repeaters

ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳನ್ನು ಅವರ ಎಸ್ಎಸ್ಎಲ್ ಸಿ ಅಂಕಗಳನ್ನು ಶೇ 45ರಂತೆ ಪ್ರಥಮ ಪಿಯುನಲ್ಲಿ ಗಳಿಸಿದ್ದ ಅಂಕಗಳನ್ನು ಶೇ 45ರಂತೆ ಹಾಗೂ ದ್ವಿತೀಯ ಪಿಯು ಇಂಟರ್ನಲ್ ಅಸೆಸ್ಮೆಂಟ್ ಗೆ ಶೇ 10ರಂತೆ ಅಂಕಗಳನ್ನು ಪರಿಗಣಿಸಿ ಪಾಸ್​ ಮಾಡಲು ನಿರ್ಧರಿಸಲಾಗಿದೆ.

second PUC repeaters pass
II PUC ಪರೀಕ್ಷೆ ಬರೆಯಬೇಕಿದ್ದ ಪುನರಾವರ್ತಿತ ವಿದ್ಯಾರ್ಥಿಗಳು ಪಾಸ್
author img

By

Published : Jul 5, 2021, 3:31 PM IST

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಬರೆಯಬೇಕಿದ್ದ ಸುಮಾರು 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಪರೀಕ್ಷೆ ಇಲ್ಲದೆಯೇ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳನ್ನು ಪಾಸು ಮಾಡುವಂತೆಯೇ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಪಾಸು ಮಾಡಬೇಕು ಎಂದು ಕೋರಿ ನಗರದ ಜ್ಞಾನಮಂದಿರ ಟ್ರಸ್ಟ್ ನ ಎಸ್.ವಿ.ಸಿಂಗ್ರೇಗೌಡ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.

ಇಂದು ನಡೆದ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪ್ರಸಕ್ತ ಸಾಲಿನ ಪಿಯು ವಿದ್ಯಾರ್ಥಿಗಳ ಜತೆಗೆ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುತ್ತದೆ. ಈ ವಿದ್ಯಾರ್ಥಿಗಳಿಗೆ ಶೇ 35ರಷ್ಟು ಅಂಕಗಳನ್ನು ನೀಡಿ ಉತ್ತೀರ್ಣಗೊಳಿಸಲಾಗುವುದು. ಇನ್ನುಳಿದಂತೆ 17,477 ಖಾಸಗಿ ವಿದ್ಯಾರ್ಥಿಗಳು ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳನ್ನು ಅವರ ಎಸ್ಎಸ್ಎಲ್ ಸಿ ಅಂಕಗಳನ್ನು ಶೇ 45 ರಂತೆ ಪ್ರಥಮ ಪಿಯು ನಲ್ಲಿ ಗಳಿಸಿದ್ದ ಅಂಕಗಳನ್ನು ಶೇ 45ರಂತೆ ಹಾಗೂ ದ್ವಿತೀಯ ಪಿಯು ಇಂಟರ್ನಲ್ ಅಸೆಸ್ಮೆಂಟ್ ಗೆ ಶೇ 10ರಂತೆ ಅಂಕಗಳನ್ನು ಪರಿಗಣಿಸಿ ಪಾಸ್​ ಮಾಡಲಾಗುವುದು. ಜುಲೈ 31ರ ಒಳಗೆ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಹೈಕೋರ್ಟ್ ಗೆ ಲಿಖಿತ ಮಾಹಿತಿ ಸಲ್ಲಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿತು. ಅಲ್ಲದೇ ಈ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್ 20ರೊಳಗೆ ಪ್ರಕಟಿಸುವಂತೆ ನಿರ್ದೇಶಿಸಿತು.

ಅರ್ಜಿದಾರರ ಕೋರಿಕೆ: ಪ್ರಸ್ತಕ ಸಾಲಿನಲ್ಲಿ ಸುಮಾರು 7 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬೇಕಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸರ್ಕಾರ ನಿರ್ಧರಿಸಿತ್ತು.

ಪ್ರಥಮ ಪಿಯು ಪರೀಕ್ಷೆ ಅಂಕ ಪರಿಗಣಿಸಿ ಉತ್ತೀರ್ಣ ಮಾಡುವ ಸಂಬಂಧ ಜೂನ್ 3ರಂದು ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿತ್ತು .ಆದರೆ, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಈ ಅನುಕೂಲ ಕಲ್ಪಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ.

ರಾಜ್ಯದಲ್ಲಿ ಸುಮಾರು 95 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಅವರನ್ನೂ ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ನೋಟಿಫಿಕೇಷನ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.