ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಾಳೆ 12 ಸ್ಥಾಯಿ ಸಮಿತಿ ಸ್ಥಾನಗಳ ಚುನಾವಣೆ ನಡೆಯುವ ಕಾರಣ ಬಿಬಿಎಂಪಿ ಟೌನ್ ಹಾಲ್ ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು 200ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ನಾಳೆ ಬೆಳಗ್ಗೆ 7ಗಂಟೆಯಿಂದ ಸಂಜೆ 6ರ ವರೆಗೆ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು, ಮಾರಕಾಸ್ತ್ರ, ದೊಣ್ಣೆ, ಚಾಕು, ಸ್ಪೋಟಕ ವಸ್ತು, ವ್ಯಕ್ತಿಗಳ ಪ್ರತಿಕೃತಿ ದಹನ, ಮೆರವಣಿಗೆ ಪ್ರತಿಭಟನೆ ಮಾಡುವುದು, ಸಂಗೀತ ನುಡಿಸುವುದನ್ನು ನಿಷೇಧಿಸಲಾಗಿದೆ.
ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿ ಕಾನೂನಿನ ವಿರುದ್ದ ನಡೆದುಕೊಂಡರೆ ಅಂಥವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಗರ ಆಯುಕ್ತ ಎಚ್ಚರಿಕೆ ನೀಡಿದ್ದಾರೆ.