ETV Bharat / state

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಸೆಕ್ಷನ್​ 144 ಜಾರಿ

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಸೆಕ್ಷನ್​ 144 ಜಾರಿ, Section 144 implemented in karnataka
ಸೆಕ್ಷನ್​ 144 ಜಾರಿ
author img

By

Published : Dec 19, 2019, 6:07 AM IST

Updated : Dec 19, 2019, 6:23 AM IST

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಕೆಲ ಜಿಲ್ಲೆಗಳಲ್ಲಿ ನಿನ್ನೆ ಸಂಜೆಯಿಂದಲೇ 144 ಸೆಕ್ಷನ್ ಜಾರಿಯಾಗಿದ್ದರೆ, ಇನ್ನು ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಜಾರಿಯಲ್ಲಿರಲಿದೆ. ಬೆಂಗಳೂರಿನ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ, ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್ ಬುಧವಾರ ಸಂಜೆ ಕರೆದಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗದಲ್ಲಿ 144 ಸೆಕ್ಷನ್​:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ 22ರ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ. ದ.ಕನ್ನಡ ಜಿಲ್ಲೆಯಲ್ಲೂ ಕೂಡ ಬುಧವಾರ ರಾತ್ರಿಯಿಂದ ಡಿ.21ರ ಮಧ್ಯರಾತ್ರಿವರೆಗೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ‌. ರೂಪೇಶ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿರಲಿದೆ. ಶಿವಮೊಗ್ಗದಲ್ಲಿಯೂ ನಿನ್ನೆ ಬುಧವಾರ ರಾತ್ರಿ 10 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಕಲಂ 144 ಅಡಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತುಮಕೂರು, ದಾವಣಗೆರೆ, ಮೈಸೂರಿನಲ್ಲೂ ನಿಷೇಧಾಜ್ಞೆ:

ಮೈಸೂರು, ನಗರ ವ್ಯಾಪ್ತಿಯಲ್ಲಿಯೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಇಂದು ಬೆಳಗ್ಗೆ 6ರಿಂದ ಡಿ.21ರ ಮಧ್ಯರಾತ್ರಿ 12ರವರೆಗೆ ಕಲಂ 144 ಅನ್ವಯ ನಿಷೇಧಾಜ್ಞೆ ಹೊರಡಿಸಿದ್ದಾರೆ. ತುಮಕೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರಗತಿಪರ ನಾಗರಿಕ ಸಂಘಟನೆ ಒಕ್ಕೂಟ, ಸಿಐಟಿಯು ಸಿಪಿಐಎಂ, ದಲಿತಪರ ಸಂಘಟನೆ ಮತ್ತು ಇತರೆ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಆದೇಶಿಸಿದ್ದಾರೆ. ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಯಾಗಿರುವ ನಿಷೇಧಾಜ್ಞೆ ಡಿ.21ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಡಿ. 21ರ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಬೀದರ್, ಗದಗ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಯಾದಗಿರಿಯಲ್ಲೂ 144 ಸೆಕ್ಷನ್​:

ಬೀದರ್ ಜಿಲ್ಲೆಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಡಿ.21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹದೇವ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಗದಗದಲ್ಲೂ ಬುಧವಾರ ರಾತ್ರಿ 10 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಸಿ ಆರ್ ಪಿ ಸಿ ಕಲಂ 173 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಆದೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಿದ್ದು, ಡಿ.21ರವರೆಗೆ ಇರಲಿದೆ. ಹಾಗೆಯೇ ಕಲಬುರಗಿ ನಗರಾದ್ಯಂತ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿ ವರೆಗೆ 144 ಸೆಕ್ಷನ್ ಜಾರಿಗೊಳಿಸಿ ಕಲಬುರಗಿ ಪೊಲೀಸ್ ಕಮೀಷನರ್ ಎಂ.ಎನ್.ನಾಗರಾಜ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾದಗಿರಿಯಲ್ಲಿಯೂ ನಿನ್ನೆ ಮಧ್ಯರಾತ್ರಿಯಿಂದಲೆ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಎಮ್ ಕುರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಡಿ.21ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

Intro:Body:

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಕೆಲ ಜಿಲ್ಲೆಗಳಲ್ಲಿ ನಿನ್ನೆ ಸಂಜೆಯಿಂದಲೇ 144 ಸೆಕ್ಷನ್ ಜಾರಿಯಾಗಿದ್ದರೆ, ಇನ್ನು ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಜಾರಿಯಲ್ಲಿರಲಿದೆ.

ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗದಲ್ಲಿ 144 ಸೆಕ್ಷನ್​: 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದಾ 22 ರ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ. ದ.ಕನ್ನಡ ಜಿಲ್ಲೆಯಲ್ಲೂ ಕೂಡ ಬುಧವಾರ ರಾತ್ರಿಯಿಂದ ಡಿ.21ರ ಮಧ್ಯರಾತ್ರಿವರೆಗೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ‌. ರೂಪೇಶ್ ಆದೇಶಿ ಹೊರಡಿಸಿದ್ದಾರೆ. ಅಲ್ಲದೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿರಲಿದೆ. ಶಿವಮೊಗ್ಗದಲ್ಲಿಯೂ ನಿನ್ನೆ ಬುಧವಾರ ರಾತ್ರಿ 10 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಕಲಂ 144 ಅಡಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತುಮಕೂರು, ದಾವಣಗೆರೆ, ಮೈಸೂರಿನಲ್ಲೂ ನಿಷೇಧಾಜ್ಞೆ:

ಮೈಸೂರು, ನಗರ ವ್ಯಾಪ್ತಿಯಲ್ಲಿಯೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ  ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಇಂದು ಬೆಳಗ್ಗೆ 6ರಿಂದ ಡಿ.21ರ ಮಧ್ಯರಾತ್ರಿ 12ರವರೆಗೆ ಕಲಂ 144 ಅನ್ವಯ ನಿಷೇಧಾಜ್ಞೆ ಹೊರಡಿಸಿದ್ದಾರೆ. ತುಮಕೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರಗತಿಪರ ನಾಗರಿಕ ಸಂಘಟನೆ ಒಕ್ಕೂಟ, ಸಿಐಟಿಯು ಸಿಪಿಐಎಂ, ದಲಿತಪರ ಸಂಘಟನೆ ಮತ್ತು ಇತರೆ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ  ಹಿನ್ನೆಲೆಯಲ್ಲಿ 144 ರಡಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಆದೇಶಿಸಿದ್ದಾರೆ. ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಯಾಗಿರುವ ನಿಷೇಧಾಜ್ಞೆ ಡಿ.21ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇದಾಜ್ಞೆ ಇರಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಡಿ. 21ರ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. 

 ಬೀದರ್, ಗದಗ, ಕಲಬುರಗಿ, ಬೆಂಗಳೂರು ಗ್ರಾಮಾಂತರದಲ್ಲೂ 144 ಸೆಕ್ಷನ್​: 

ಬೀದರ್ ಜಿಲ್ಲೆಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಡಿ.21ರ ಮಧ್ಯರಾತ್ರಿವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹದೇವ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಗದಗದಲ್ಲೂ ಬುಧವಾರ ರಾತ್ರಿ 10 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಸಿ ಆರ್ ಪಿ ಸಿ ಕಲಂ 173 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಆದೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಿದ್ದು, ಡಿ.21ರವರೆಗೆ ಇರಲಿದೆ.  ಹಾಗೆಯೇ ಕಲಬುರಗಿ ನಗರಾದ್ಯಂತ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿ ವರೆಗೆ 144 ಸೆಕ್ಷನ್ ಜಾರಿಗೊಳಿಸಿ ಕಲಬುರಗಿ ಪೊಲೀಸ್ ಕಮೀಷನರ್ ಎಂ.ಎನ್/ನಾಗರಾಜ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Conclusion:
Last Updated : Dec 19, 2019, 6:23 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.