ETV Bharat / state

ಆರ್‌.ಆರ್. ನಗರ ಉಪ ಚುನಾವಣೆ: ಹೆಚ್ಚುವರಿ ಪೊಲೀಸರ ನಿಯೋಜನೆ - ರಾಜ ರಾಜೇಶ್ವರಿ ನಗರದಲ್ಲಿ ಉಪ ಚುನಾವಣೆ

ಉಪ ಚುನಾವಣೆ ಹಿನ್ನೆಲೆ ರಾಜರಾಜೇಶ್ವರಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

Police
Police
author img

By

Published : Oct 24, 2020, 1:55 PM IST

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪಶ್ಚಿಮ ವಿಭಾಗದ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ‌‌.

ರಾಜರಾಜೇಶ್ವರಿ ನಗರದಲ್ಲಿ 25 ಚೆಕ್ ಪಾಯಿಂಟ್ ನಿಯೋಜಿಸಲಾಗಿದೆ. ಇಲ್ಲಿಗೆ ಬರುವ ಪ್ರತಿಯೊಂದು ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಅಕ್ರಮವಾಗಿ ಮದ್ಯ, ಹಣ ಸೇರಿದಂತೆ ಇನ್ನಿತರೆ ವಸ್ತುಗಳ‌ ಸಾಗಟ ಮಾಡುವುದು ಕಂಡು ಬಂದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲು‌ ಕ್ರಮ ಕೈಗೊಂಡಿದ್ದಾರೆ.

ಇನ್ನು ಶಾಂತಿಯುತವಾಗಿ ಮತದಾನ ನಡೆಯುವಂತೆ ನೋಡಿಕೊಳ್ಳಲು ಪಶ್ಚಿಮ ವಿಭಾಗದ ಐದು ಪೊಲೀಸ್ ಠಾಣೆಗಳು ಹಾಗೂ ಉತ್ತರ ವಿಭಾಗದ 8 ಪೊಲೀಸ್ ಠಾಣೆಗಳ ಪೊಲೀಸರನ್ನು ಹೆಚ್ಚಿನ ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ.

ಹೆಚ್ಚುವರಿಯಾಗಿ ಕೇಂದ್ರಿಯ ಅರಸೇನಾ‌ ಪಡೆಯನ್ನು ಆರ್.ಆರ್‌. ನಗರಕ್ಕೆ‌ ಕರೆಯಿಸಿಕೊಳ್ಳಲಾಗಿದೆ.‌ ಜೊತೆಗೆ ಕೆಎಸ್​ಆರ್​​ಪಿ ತುಕಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜ್ಞಾನ ಭಾರತಿ, ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆ ಪಥಸಂಚಲನ ನಡೆಸಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.