ETV Bharat / state

ಪ್ರತಿ ಗ್ರಾಮ ಪಂಚಾಯ್ತಿಯಲ್ಲೂ ಆಸ್ಪತ್ರೆ ಪ್ರಾರಂಭ ಕೋರಿ ಪಿಐಎಲ್: ಹೈಕೋರ್ಟ್ ನೋಟಿಸ್

author img

By

Published : Jun 7, 2021, 11:02 PM IST

ಬೀದರ್​ನ ಔರಾದ್ ತಾಲೂಕಿನ ಗುರುನಾಥ ವದ್ದೆ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

ಹೈಕೋರ್ಟ್ ನೋಟಿಸ್
ಹೈಕೋರ್ಟ್ ನೋಟಿಸ್

ಬೆಂಗಳೂರು : ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಯಲ್ಲೂ ಒಂದೊಂದು ಆಸ್ಪತ್ರೆ ಪ್ರಾರಂಭಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಬೀದರ್​ನ ಔರಾದ್ ತಾಲೂಕಿನ ಗುರುನಾಥ ವದ್ದೆ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

ಅಲ್ಲದೇ, ಆರೋಗ್ಯಕರ ಜೀವನ ನಾಗರಿಕರ ಮೂಲಭೂತ ಹಕ್ಕು. ಅದರಂತೆ ಸರ್ಕಾರ ಗ್ರಾಮೀಣ ಭಾಗಗಳಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ವಿಚಾರವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಬೇಕು. ಹಾಗೆಯೇ, ಈ ಕುರಿತು ಮುಂದಿನ ಒಂದು ತಿಂಗಳಲ್ಲಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿ, ಅದಕ್ಕೆ ವಿವರಣೆ ನೀಡಬೇಕೆಂದು ನಿರ್ದೇಶಿಸಿ, ಜುಲೈ 12ಕ್ಕೆ ವಿಚಾರಣೆ ಮುಂದೂಡಿತು.

ಅರ್ಜಿದಾರರ ಕೋರಿಕೆ :
ಹಳ್ಳಿಗಾಡಿನ ಜನರಿಗೆ ಇಂದಿಗೂ ಸೂಕ್ತ ಆರೋಗ್ಯ ಸೇವೆಗಳು ಲಭ್ಯವಾಗುತ್ತಿಲ್ಲ. ಕೋವಿಡ್ ವ್ಯಾಪಿಸಲು ಆರಂಭಿಸಿದ ನಂತರ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಕೊರತೆ ಸ್ಪಷ್ಟವಾಗಿ ಕಾಣುತ್ತಿದೆ. ಆದ್ದರಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ, ಸೌಲಭ್ಯಗಳನ್ನು ಹೆಚ್ಚಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. 2021ರ ಮೇ 15ರಂದು ತಾವು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಂತೆ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಆಸ್ಪತ್ರೆ ಪ್ರಾರಂಭಿಸುವಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.