ETV Bharat / state

ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶ ರದ್ದುಗೊಳಿಸಿದ ಹೈಕೋರ್ಟ್ - ನರ್ಸಿಂಗ್ ಸೇವೆಸುಗ್ರೀವಾಜ್ಞೆ

ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ರೀತಿಯ ಮೀಸಲಾತಿ ಸಂವಿಧಾನದ ಪರಿಚ್ಛೇದ 14 ಮತ್ತು 16(2)ಕ್ಕೆ ವಿರುದ್ಧವಾಗಿರಲಿದೆ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ನರ್ಸಿಂಗ್ ಸೇವೆ  ಹೈಕೋರ್ಟ್  High Court order  nursing service  army
ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶ ರದ್ದುಗೊಳಿಸಿದ ಹೈಕೋರ್ಟ್
author img

By ETV Bharat Karnataka Team

Published : Jan 10, 2024, 11:00 PM IST

Updated : Jan 11, 2024, 6:41 AM IST

ಬೆಂಗಳೂರು: ಸೇನೆಯಲ್ಲಿ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಿದ್ದ ಭಾರತೀಯ ಮಿಲಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ 'ಮಹಿಳೆಯಾಗಿದ್ದರೆ' ಎಂಬ ಪದವನ್ನು ಅಸಾಂವಿಧಾನಿಕ ಎಂದು ಹೈಕೊರ್ಟ್ ಘೋಷಣೆ ಮಾಡಿದೆ. ಈ ರೀತಿಯ ಮೀಸಲಾತಿ ನೀಡುವುದು ಸಂವಿಧಾನದ ಪರಿಚ್ಛೇದ 14(ಸಮಾನತೆ), 16(2)(ಲಿಂಗ ತಾರತಮ್ಯ) ಹಾಗೂ 21(ಜೀವ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಉಲ್ಲಂಘಿಸಿದಂತಾಗಲಿದೆ ಎಂದು ಧಾರವಾಡ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, 81 ವರ್ಷಗಳ ಹಳೆಯ ಕಾನೂನನ್ನು ರದ್ದುಗೊಳಿಸಿ ಆದೇಶಿಸಿದೆ.

ಹುಬ್ಬಳ್ಳಿಯ ಕೆಎಲ್‌ಇ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಂಜಯ್ ಎಂ ಪೀರಾಪುರ, ಕರ್ನಾಟಕ ಶುಶ್ರೂಷಕರ ಸಂಘ ಮತ್ತಿತರರು ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಧಾರವಾಡದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಸಂವಿಧಾನದ ಅಡಿಯಲ್ಲಿ ಮಹಿಳೆಯನ್ನು ಪ್ರತ್ಯೇಕ ವರ್ಗವೆಂದು ಹೇಳಿರುವುದು ನ್ಯಾಯಸಮ್ಮತವಾಗಿದೆ. ಆದರೆ, ಈ ಆಶಯವನ್ನು ಈಡೇರಿಸುವುದಕ್ಕಾಗಿ ತಾರ್ಕಿಕವಲ್ಲದ ರೀತಿಯಲ್ಲಿ ಮಹಿಳೆಯರಿಗೆ ಶೇ.100ರಷ್ಟು ಮೀಸಲಾತಿ ನೀಡಬೇಕು ಎಂದಾಗುವುದಿಲ್ಲ ಮತ್ತು ಪರಿಚ್ಛೇದ 15(3)(ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುವ ಅವಕಾಶ)ರ ಅಡಿಯಲ್ಲಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು1943ರಲ್ಲಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದರು. ಅದನ್ನು ಸಂವಿಧಾನದ ಅಡಿಯಲ್ಲಿ ಅಳವಡಿಸಿಕೊಂಡು ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ. ಆದರೆ, ಈ ಕಾನೂನು ಸಂವಿಧಾನದ 33ನೇ ಪರಿಚ್ಛೇದದಂತೆ ಸಂಸತ್ತು ಜಾರಿಗೆ ತಂದಿರುವ ಕಾನೂನನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸ್ವಾಂತಂತ್ರ್ಯ ಪೂರ್ವದಲ್ಲಿ ಮಹಿಳೆಯರು ಸೇನೆಗೆ ಸೇರಲು ಹಿಂಜರಿಯುತ್ತಿದ್ದರು. ಆದ ಕಾರಣ ಮಹಿಳೆಯನ್ನು ಪ್ರೋತ್ಸಾಹಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಶೇ.100ರಷ್ಟು ಮೀಸಲಾತಿ ನೀಡಲಾಗಿತ್ತು. ಆದರೆ, 1943ರಲ್ಲಿ ಇದ್ದಂತಹ ಪರಿಸ್ಥಿತಿ ಪ್ರಸ್ತುತ ಇಲ್ಲ. ಈ ಸುಗ್ರೀವಾಜ್ಞೆ ಜಾರಿಯಾಗಿ 8 ದಶಕಗಳು ಕಳೆದಿವೆ. ಆದರೂ ಇಂದಿಗೂ ಮೀಸಲಾತಿ ಒದಗಿಸುವ ಉದ್ದೇಶಗಳು ಏನು ಎಂಬುದಕ್ಕೆ ಸೂಕ್ತ ಕಾರಣ ನೀಡಿಲ್ಲ. ಆದ್ದರಿಂದ ಈ ಮೀಸಲು ಸೌಲಭ್ಯ ಸಮರ್ಥನೆಗೆ ಅರ್ಹವಿಲ್ಲ ಎಂದು ಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಆದಾಗ್ಯೂ, ಮೀಸಲಾತಿಯ ಪರಿಕಲ್ಪನೆಯು ವಂಚಿತರಿಗೆ ಸೌಲಭ್ಯವನ್ನು ಕಲ್ಪಿಸುವುದಾಗಿದೆಯೇ ವಿನಃ ಸೌಲಭ್ಯಗಳಿಂದ ವಂಚಿತರನ್ನಾಗಿಸುವುದಲ್ಲ. ಸಕಾರಣಗಳಿಲ್ಲದೆ ಶೇ.100ರಷ್ಟು ಮಹಿಳೆಯರಿಗೆ ಮಾತ್ರ ಅವಕಾಶ ನೀಡಿದಲ್ಲಿ ಮೀಸಲಾತಿ ಕಲ್ಪನೆ ಅಂತ್ಯಗೊಳಿಸಿದಂತಾಗುತ್ತದೆ. ಜತೆಗೆ, ಮೀಸಲು ಸೌಲಭ್ಯದಿಂದ ಪುರುಷರನ್ನು ಪ್ರತ್ಯೇಕಿಸಿದಂತಾಗಲಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರ್ಜಿದಾರರನ್ನು ಸೇನೆಯ ಶುಶ್ರೂಷಕರನ್ನಾಗಿ ನೇಮಕ ಮಾಡಬೇಕು ಎಂದು ನಿರ್ದೇಶನ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ ಏನು? 2010ರ ಫೆಬ್ರುವರಿ 13 ಮತ್ತು 19ರಂದು ಶುಶ್ರೂಷಕಿಯರ ನೇಮಕ ಸಂಬಂಧ ಭಾರತೀಯ ಮಿಲಟರಿ ಸೇನೆ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯಲ್ಲಿ ಮಹಿಳೆಯರು ಮಾತ್ರ ಎಂದು ತಿಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು, ಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ 'ಮಹಿಳೆಯಾಗಿದ್ದರೆ’ ಎಂಬ ಪದವನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ಕೋರಿದ್ದರು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು, ಅಧಿಸೂಚನೆಗೆ ಸಂಬಂಧಿಸಿದಂತೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಗೆ ಮತ್ತು ಅರ್ಜಿದಾರರ ಸಂಘದಲ್ಲಿ ಇಬ್ಬರಿಗೆ ಈಗಾಗಲೇ ವಯೋಮಿತಿ ಮೀರಿದೆ ಎಂದು ವಾದ ಮಂಡಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್ ಕಟ್ಟಡ ವಿಸ್ತರಣೆ: ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಸ್ತಾವ ಇಡಲು ಸೂಚನೆ

Last Updated : Jan 11, 2024, 6:41 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.