ETV Bharat / state

ಬಿಜೆಪಿ ಹಿರಿಯ ನಾಯಕ ಎ.ಜಿ.ಕೊಡ್ಗಿ ನಿಧನ: ಸಿಎಂ ಸೇರಿದಂತೆ ಗಣ್ಯರ ಸಂತಾಪ - ಬಿಜೆಪಿ ಹಿರಿಯ ನಾಯಕ ಎಜಿ ಕೊಡ್ಗಿ ನಿಧನ

ಬಿಜೆಪಿ ಹಿರಿಯ ನಾಯಕ, ಮೂರನೇ ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ (93) ಅನಾರೋಗ್ಯದಿಂದ ನಿಧನರಾಗಿದ್ದಾರೆ.

senior-bjp-leader-ag-kodgi-passed-away-in-udupi
ಬಿಜೆಪಿ ಹಿರಿಯ ನಾಯಕ ಎ.ಜಿ ಕೊಡ್ಗಿ ನಿಧನ: ಸಿಎಂ ಬೊಮ್ಮಾಯಿ, ಇತರರಿಂದ ಸಂತಾಪ
author img

By

Published : Jun 13, 2022, 8:04 PM IST

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ (93) ಅನಾರೋಗ್ಯದಿಂದ ಸೋಮವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತರ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಲೂಕು ಬೋರ್ಡ್ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಕೊಡ್ಗಿ ಅವರು ಬೈಂದೂರು ಶಾಸಕರಾಗಿ, ನಂತರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಅವರ ರಾಜಕೀಯ ಜೀವನವೂ ಇತರರಿಗೆ ಮಾದರಿಯಾಗಿತ್ತು. ಪಕ್ಷದಲ್ಲಿ ಕರಾವಳಿ ಭಾಗದಲ್ಲಿ ಹಲವು ಯುವ ನಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಶ್ರೇಯ ಇವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

  • ಕರ್ನಾಟಕ ಕರಾವಳಿ ಭಾಗದ ನಮ್ಮ ಪಕ್ಷದ ಹಿರಿಯ ನಾಯಕರು, ಮಾಜಿ ಶಾಸಕರು, ರಾಜ್ಯ ಮೂರನೇಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀ ಎ.ಜಿ. ಕೊಡ್ಗಿ ಅವರು ನಿಧನರಾದ ಸುದ್ದಿ ತಿಳಿದು ತುಂಬಾ ದುಃಖಿತನಾಗಿದ್ದೇನೆ‌.

    ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌.
    ಓಂ ಶಾಂತಿಃ pic.twitter.com/7DpLjkmK4y

    — Basavaraj S Bommai (@BSBommai) June 13, 2022 " class="align-text-top noRightClick twitterSection" data=" ">

ಅವರ ನಿಧನದಿಂದ ಒಬ್ಬ ಸರಳ, ಸಜ್ಜನ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಟೀಲ್ ಸಂತಾಪ: ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದರು ಎಂದು ಕಟೀಲ್ ತಿಳಿಸಿದ್ದಾರೆ.

  • ಭಾಜಪಾ ಹಿರಿಯ ಮುಖಂಡರೂ, ಮಾಜಿ ಶಾಸಕರೂ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದ ಶ್ರೀ ಎ.ಜಿ.ಕೊಡ್ಗಿ ಅವರ ಅಗಲುವಿಕೆ ತುಂಬಾ ಬೇಸರ ತಂದಿದೆ.

    ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬಕ್ಕೆ, ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ. pic.twitter.com/Fzu4Yu2chM

    — Nalinkumar Kateel (@nalinkateel) June 13, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಕಾಶ್ಮೀರದಂತೆ ನಕಲಿ ಗಾಂಧಿ ಕುಟುಂಬಕ್ಕೂ ವಿಶೇಷ ಸವಲತ್ತು ಕೊಡಬೇಕಾ?: ಛಲವಾದಿ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.