ETV Bharat / state

ಸಿಎಂ ಸಿದ್ದರಾಮಯ್ಯ ಭೇಟಿಯಾದ ಮಣಿಶಂಕರ್ ಅಯ್ಯರ್ ದಂಪತಿ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ರಾಜಕೀಯೇತರವಾಗಿ ಇಂದು ಭೇಟಿಯಾದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Sep 1, 2023, 8:00 PM IST

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣ, ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ದಂಪತಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ರಾಜಕೀಯೇತರ ಭೇಟಿ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಮಣಿಶಂಕರ್ ಅಯ್ಯರ್ ದಂಪತಿಯನ್ನು ಸಿದ್ದರಾಮಯ್ಯ ಸ್ವಾಗತಿಸಿದರು. ಪರಸ್ಪರರನ್ನು ಅಭಿನಂದಿಸಿಕೊಂಡರು. ಕೆಲ ಸಮಯ ಆತ್ಮೀಯವಾಗಿ ಮಾತುಕತೆ ನಡೆಸಿದರು. ಇದೊಂದು ಖಾಸಗಿ ಭೇಟಿಯಾಗಿದ್ದು ರಾಜಕೀಯ ವಿಚಾರದ ಕುರಿತು ಚರ್ಚೆ ನಡೆಸಿಲ್ಲ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೇಂದ್ರದ ಮಾಜಿ ಸಚಿವ ಮಣಿ ಶಂಕರ್ ಅಯ್ಯರ್ ದಂಪತಿ

2022ರಲ್ಲಿ ಬೆಂಗಳೂರಿಗೆ ಬಂದಿದ್ದ ಮಣಿಶಂಕರ್ ಅಯ್ಯರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಸಿದ್ದರಾಮಯ್ಯ ಮೊದಲ ಅವಧಿಯ ಸರ್ಕಾರವನ್ನು ನೇರವಾಗಿ ಟೀಕಿಸಿದ್ದರು. 2013-18 ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಆಗ ಪಂಚಾಯತ್ ರಾಜ್‌ ಕಾನೂನುಗಳನ್ನು ಜಾರಿ ಮಾಡುವಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಹಿಂದೆ ಬಿದ್ದಿತ್ತು ಎಂದು ಆರೋಪಿಸಿದ್ದರು. ನಿರೀಕ್ಷಿತ ವೇಗದಲ್ಲಿ ಕೆಲಸ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಈಗ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಮೊದಲ ಅವಧಿಯ ಸರ್ಕಾರವನ್ನು ಟೀಕಿಸಿದ್ದ ಅಯ್ಯರ್ ಈಗ ಸಿದ್ದರಾಮಯ್ಯರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಪಂಚ ರಾಜ್ಯಗಳಲ್ಲಿ ಸೋಲುವ ಆತಂಕದಿಂದ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆ: ಬಿಜೆಪಿ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.