ETV Bharat / state

ಪಿಎಸ್ಐ ನೇಮಕಾತಿ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿ ಅರೆಸ್ಟ್, 10 ಪೊಲೀಸ್ ಕಸ್ಟಡಿಗೆ​

ಪಿಎಸ್​ಐ ನೇಮಕಾತಿ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಟ್ವಿಸ್ಟ್​ ಣದಲ್ಲಿ ಟ್ವಿಸ್ಟ್​
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಟ್ವಿಸ್ಟ್​
author img

By

Published : Jul 4, 2022, 3:54 PM IST

Updated : Jul 4, 2022, 7:39 PM IST

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ‌ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ಪೊಲೀಸ್​ ಇಲಾಖೆ ಇತಿಹಾಸದಲ್ಲೇ ಹಗರಣದ ಆರೋಪ ಹೊತ್ತು ಬಂಧಿತರಾಗಿರುವ ಮೊದಲ ಎಡಿಜಿಪಿ ಅಮೃತ್​ ಪಾಲ್​ ಆಗಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಹಾಗೂ ಅಭ್ಯರ್ಥಿಗಳು ಸೇರಿದಂತೆ ಸಿಐಡಿ ಬೆಂಗಳೂರು ವಿಭಾಗದ ಅಧಿಕಾರಿಗಳು 20ಕ್ಕಿಂತ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ರನ್ನು ಐಎಸ್​​ಡಿ ಗೆ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಹಿರಿಯ ಐಪಿಎಸ್ ಅಧಿಕಾರಿ ಅರೆಸ್ಟ್

ನೇಮಕಾತಿ ಹಗರಣದಲ್ಲಿ ಆಭ್ಯರ್ಥಿಗಳಿಂದ ಡೀಲ್ ಮಾಡಿಕೊಂಡಿರುವ ಬಗ್ಗೆ ಎಡಿಜಿಪಿ ಮೇಲೆ‌‌ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಸಿಐಡಿ ತನಿಖಾಧಿಕಾರಿಗಳು ಜಾರಿಗೊಳಿಸಿದ್ದ ನೋಟಿಸ್​ಗೆ ಅಮೃತ್ ಪೌಲ್ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದರು.‌‌ ಇಂದು ಸಹ ವಿಚಾರಣೆಗೆ ಹಾಜರಾಗಲು ಸಿಐಡಿ ನೋಟಿಸ್ ಜಾರಿ ಮಾಡಿದ್ದರು. ವಿಚಾರಣೆ ವೇಳೆ ಪೌಲ್ ಅವರು ನಡೆಸಿದ್ದ ಅವ್ಯವಹಾರದ ಬಗ್ಗೆ ಸಾಕ್ಷ್ಯ ಲಭ್ಯವಾದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಿಡಿಗೇಡಿಗೆ ಥಳಿತ: ಯುವತಿ ರಕ್ಷಿಸಿದ ತೃತೀಯ ಲಿಂಗಿಗಳು

10 ದಿನ ಪೊಲೀಸ್​ ಕಸ್ಟಡಿಗೆ: ಎಡಿಜಿಪಿ ಅಮೃತ್ ಪೌಲ್ ಅವರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಪಿಎಸ್​​ಐ ನೇಮಕಾತಿ ಅಕ್ರಮ‌ ಪ್ರಕರಣ ಆರಂಭದಲ್ಲಿ ಕಲಬುರಗಿಯಲ್ಲಿ ಬೆಳಕಿಗೆ ಬಂದಿತ್ತು. ಈ ಸಂಬಂಧ ಪ್ರಕರಣದ ಕಿಂಗ್​ ಪಿನ್​ಗಳಾದ ದಿವ್ಯಾ ಹಾಗರಗಿ, ಆರ್.ಡಿ ಪಾಟೀಲ್ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ತನಿಖೆ ಚುರುಕಾದಂತೆ ರಾಜಧಾನಿಯಲ್ಲಿಯೂ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿತ್ತು. ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿತ್ತು. ಆ ಬಳಿಕ ಸಿಐಡಿ ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ 22 ಜನರ ವಿರುದ್ಧ ಎಫ್​ಐಆರ್ ದಾಖಲಿಸಿತ್ತು.

ಅಭ್ಯರ್ಥಿಗಳ ವಿಚಾರಣೆ ವೇಳೆ ನೇಮಕಾತಿ ವಿಭಾಗದ ಅಧಿಕಾರಿಗಳ ಹೆಸರು ಬಾಯ್ಬಿಟ್ಟಿದ್ದರು. ನೇಮಕಾತಿ ವಿಭಾಗದ ಡಿವೈಎಸ್​​ಪಿಯಾಗಿದ್ದ ಶಾಂತಕುಮಾರ್ ಸೇರಿದಂತೆ ಹಲವು ಸಿಬ್ಬಂದಿಯನ್ನು ಬಂಧಿಸಲಾಗಿತ್ತು. ಶಾಂತಕುಮಾರ್ ಬಂಧನ ಬಳಿಕ ಎಡಿಜಿಪಿ ಅಮೃತ್ ಪೌಲ್ ಹೆಸರು ಕೇಳಿ ಬಂದಿತ್ತು. ಹೀಗಾಗಿ ಅಮೃತ್ ಪೌಲ್​ ಅವರನ್ನು ವಿಚಾರಣೆ ನಡೆಸಿ ಬಂಧಿಸಲಾಗಿದೆ.

ಯಾರು ಈ ಅಮೃತ್ ಪೌಲ್ ?: ಪಂಜಾಬ್ ಮೂಲದ 1995ರ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಅಮೃತ್ ಪೌಲ್ 2000-2003ರವರೆಗೆ ಉಡುಪಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. 2014ರಲ್ಲಿ ಕರ್ನಾಟಕ ವೆಸ್ಟರ್ನ್ ರೇಂಜ್ ಐಜಿಯಾಗಿ, 2018 ಸೆಂಟ್ರಲ್ ರೇಂಜ್ ಐಜಿ, 2019ರಲ್ಲಿ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಬಡ್ತಿ‌ ಪಡೆದಿದ್ದರು.

ಬಂಧನ ಬಳಿಕ 24 ಗಂಟೆಯೊಳಗೆ ಸಸ್ಪೆಂಡ್: ಯಾವುದೇ ಸರ್ಕಾರಿ ನೌಕರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿ ಬಂಧನವಾದರೆ 24 ಗಂಟೆಯೊಳಗೆ ಸಸ್ಪೆಂಡ್ ನಿಯಮ‌ ಜಾರಿಗೆ ಬರಲಿದೆ. ಅದರಂತೆ‌ ಅಮೃತ್ ಪೌಲ್ ಸಹ ಅಮಾನತು ಆಗಲಿದ್ದಾರೆ. ಮತ್ತೊಂದೆಡೆ ಪೊಲೀಸ್ ಕಸ್ಟಡಿ ಮುಗಿದ ಬಳಿಕ ಸಿಐಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದೆ. ಒಂದು ವೇಳೆ ಜಾಮೀನು ಸಿಕ್ಕು ಹೊರಬಂದರೂ ಕರ್ತವ್ಯದಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಇಲಾಖಾ ವಿಚಾರಣೆ ಮುಗಿಯುವವರೆಗೂ ಅರ್ಧ ಸಂಬಳ ಮಾತ್ರ ಪಡೆಯಬಹುದಾಗಿದೆ‌. ಇಲಾಖಾ ವಿಚಾರಣೆಯಲ್ಲಿ ತಪ್ಪಿತಸ್ಥ ಎಂದು ಸರ್ಕಾರಕ್ಕೆ ವರದಿ ನೀಡಿದರೆ ಪೊಲೀಸ್ ವೃತ್ತಿಯಿಂದಲೇ ವಜಾಗೊಳಿಸಬಹುದಾಗಿದೆ. ಅಲ್ಲದೆ ಪಿಂಚಣಿ ತಡೆಹಿಡಿಯಬಹುದಾಗಿದೆ.

Last Updated : Jul 4, 2022, 7:39 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.