ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಸಿಎಂ ಮಾಧ್ಯಮ ಸಲಹೆಗಾರರಿಗೆ ಸಂಪುಟ ದರ್ಜೆ ಸ್ಥಾನ ನೀಡಲು ಅವಕಾಶವಿದ್ದು, ಅದರಂತೆ ಮಹದೇವ ಪ್ರಕಾಶ್ ಅವರಿಗೆ ಸ್ಥಾನಮಾನ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.