ಬೆಂಗಳೂರು: ಹಿರಿಯ ರಾಜಕಾರಣಿ, ಹೋರಾಟಗಾರ, ವಕೀಲ ಎ.ಕೆ.ಸುಬ್ಬಯ್ಯ (86) ಇಂದು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ವಯೋಸಹಜ ಸಮಸ್ಯೆದಿಂದಾಗಿ ಕಳೆದ ಒಂದು ವರ್ಷಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ತಮ್ಮ ನಿವಾಸದಲ್ಲಿದ್ದು, ಆಗಾಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ವಾರಕ್ಕೆ ಮೂರು ದಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ಡಯಾಲಿಸಿಸ್ಗೆ ಒಳಗಾಗುತ್ತಿದ್ದರು. ನಿನ್ನೆ ಅವರ ಆರೋಗ್ಯಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಬೆಳ್ಳೂರಿನಲ್ಲಿ ಅಜ್ಜಿಕುಟೀರ ಕಾರ್ಯಪ್ಪ ಮತ್ತು ಸೀತಮ್ಮ ದಂಪತಿ ಪುತ್ರನಾಗಿ 1934ರ ಆಗಸ್ಟ್ 8ರಂದು ಜನಿಸಿದರು. ಸುಬ್ಬಯ್ಯ ಅವರ ನಿಧನಕ್ಕೆ ವಿವಿಧ ನಾಯಕರಿಂದ ಸಂತಾಪ ವ್ಯಕ್ತವಾಗಿದ್ದು, ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯನಿರ್ವಹಿಸಿದ ಅನುಭವ ಅವರಿಗೆ ಇತ್ತು.