ETV Bharat / state

ಫಿಲಂ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಿರ್ಮಾಪಕ ಸಾ.ರಾ.ಗೋವಿಂದು ನಾಮಪತ್ರ ಸಲ್ಲಿಕೆ - ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28 ರಂದು ಚುನಾವಣೆ

ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ. ಗೋವಿಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

Election for the Karnataka Film Chamber on  May 28
ನಿರ್ಮಾಪಕ ಸಾ.ರಾ.ಗೋವಿಂದು ನಾಮಪತ್ರ ಸಲ್ಲಿಕೆ
author img

By

Published : May 15, 2022, 10:57 PM IST

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28 ರಂದು ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಭಾನುವಾರ ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ. ಗೋವಿಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಮೇ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಾ.ರಾ. ಗೋವಿಂದು ಅಧ್ಯಕ್ಷನಾಗಿದ್ದಾಗ ನಾನು ಮಾಡಿದ ಕೆಲಸ ಎಲ್ಲರಿಗೂ ಗೊತ್ತಿದೆ. ಸ್ನೇಹಿತರ ಒತ್ತಾಯದ ಮೇರೆಗೆ ಚುನಾವಣೆಗೆ ನಿಂತಿದ್ದೇನೆ. ಚುನಾವಣೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳೋಣ. ಗೆದ್ದವರು ಕೆಲಸ ಮಾಡೋಣ. ಸೋತವರು ಗೆದ್ದವರಿಗೆ ಬೆನ್ನೆಲುಬಾಗಿ ನಿಲ್ಲೋಣ ಎಂದು ಹೇಳಿದರು.

Election for the Karnataka Film Chamber on  May 28
ಸಾ.ರಾ. ಗೋವಿಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ

ಸಾ.ರಾ.ಗೋವಿಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದರೆ, ಅವರ ತಂಡದಲ್ಲಿರುವ ಚಿತ್ರಲೋಕ ವೀರೇಶ್ ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕರಿಸುಬ್ಬು (ವಿ.ಸುಬ್ರಮಣಿ) ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ವಿತರಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಎಸ್. ಜ್ಞಾನೇಶ್ವರ ಐತಾಳ್, ಪ್ರದರ್ಶಕರ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಿ.ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: KGF-3 ಅಭಿಮಾನಿಗಳಿಗೆ ಶಾಕ್: ಸ್ಪಷ್ಟನೆ ನೀಡಿದ ನಿರ್ಮಾಪಕರು!

ಕೆ.ಸಿ.ಎನ್. ಕುಮಾರ್ (ಎಂ.ಎನ್.ಕುಮಾರ್) ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎಲ್.ಸಿ.ಕುಶಾಲ್ ಹಾಗೂ ಗೌರವ ಖಜಾಂಚಿ ಸ್ಥಾನಕ್ಕೆ ಬಿ.ಕೆ.ಜಯಸಿಂಹ ಮುಸರಿ ನಾಮಪತ್ರ ಸಲ್ಲಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.