ETV Bharat / state

ಐಐಟಿ ಮಾದರಿ ಯುವಿಸಿಇ ಅಭಿವೃದ್ಧಿಗೆ ಪ್ರತ್ಯೇಕ ಕಾಯ್ದೆ : ಡಾ. ಸಡಗೋಪನ್‌ ನೇತೃತ್ವದ ಸಮಿತಿ ವರದಿ ಸಲ್ಲಿಕೆ - Bangalore UCE Act

ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸರ್ಕಾರದ ಮೇಲೆ ಅವಲಂಬನೆ ತಗ್ಗಿಸಲು ಆರ್ಥಿಕ ಮಾದರಿ ಸಿದ್ಧಪಡಿಸಿಕೊಂಡು ಆಂತರಿಕ ಹಾಗೂ ಬಾಹ್ಯ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣಕ್ಕೆ ಅವಕಾಶ ನೀಡಬೇಕು. ದೇಣಿಗೆ ಸ್ವೀಕಾರ, ಹಳೆಯ ವಿದ್ಯಾರ್ಥಿಗಳಿಂದ ಹಣಕಾಸು ನೆರವು ಪಡೆಯುವ ಅಂಶವು ಉದ್ದೇಶಿತ ವಿಧೇಯಕದಲ್ಲಿದೆ..

Breaking News
author img

By

Published : Dec 16, 2020, 12:33 PM IST

ಬೆಂಗಳೂರು : ಯುವಿಸಿಇ ಕಾಯ್ದೆ ರೂಪಿಸುವ ನಿಟ್ಟಿನಲ್ಲಿ ವಿವಿಧ ಐಐಟಿಗಳು ಹಾಗೂ ಐಐಎಂಗಳ ಕಾಯ್ದೆಗಳನ್ನು ಅಧ್ಯಯನ ಮಾಡಿ ಸಿದ್ಧಪಡಿಸಿದ ಸಮಗ್ರ ವರದಿಯನ್ನು ಐಐಐಟಿಬಿ ನಿರ್ದೇಶಕ ಡಾ. ಸಡಗೋಪನ್‌ ನೇತೃತ್ವದ ಸಮಿತಿ ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ. ಅಶ್ವತ್ಥ್‌ ನಾರಾಯಣ್‌ಗೆ ಸಲ್ಲಿಕೆ ಮಾಡಿತು.

Separate Act for development of UVCE on IIT model: Submission of the report of the Committee headed by Sadagopan
ಐಐಟಿ ಮಾದರಿ ಯುವಿಸಿಇ ಅಭಿವೃದ್ಧಿಗೆ ಪ್ರತ್ಯೇಕ ಕಾಯ್ದೆ : ಡಾ. ಸಡಗೋಪನ್‌ ನೇತೃತ್ವದ ಸಮಿತಿ ವರದಿ ಸಲ್ಲಿಕೆ

ಯುವಿಸಿಇ ಕಾಲೇಜಿಗೆ ಭೇಟಿ ನೀಡಿದ ಡಾ. ಅಶ್ವತ್ಥ್‌ ನಾರಾಯಣ್ ಅವರಿಗೆ ವರದಿ ಸಲ್ಲಿಕೆ ಮಾಡಿ ಕಾಯ್ದೆಯ ಅಗತ್ಯತೆ ಕುರಿತು ವಿವರಣೆ ನೀಡಿತು. ವರದಿ ಸ್ವೀಕರಿಸಿ ಮಾತನಾಡಿದ ಡಿಸಿಎಂ, ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು(UVCE) ಐಐಟಿ ಮಾದರಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದೆ. ಅದಕ್ಕೆ ಬೇಕಾದ ವಿಧೇಯಕವನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.

ನಮ್ಮ ರಾಜ್ಯದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ ಯುವಿಸಿಇ ಅತ್ಯುನ್ನತ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ಸ್ವಾಯತ್ತತೆ ನೀಡುವ ಬಗ್ಗೆ ಸರ್ಕಾರಕ್ಕೆ ಮಹತ್ವದ ಶಿಫಾರಸುಗಳನ್ನು ಮಾಡಿರುವ ಸಮಿತಿಯು, ಸಂಸ್ಥೆಗೆ ಮೀಸಲಾದ ಪ್ರತ್ಯೇಕ ಹಾಗೂ ವಿಶೇಷ ಕಾಯ್ದೆ ಅಗತ್ಯವನ್ನು ಒತ್ತಿ ಹೇಳಿದೆ. ಅದರಂತೆ ಅಗತ್ಯ ಕಾನೂನು, ಆಡಳಿತಾತ್ಕಕ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದರು.

ಉದ್ದೇಶಿತ ವಿಧೇಯಕದಲ್ಲಿರುವ ಅಂಶಗಳೇನು?: ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸರ್ಕಾರದ ಮೇಲೆ ಅವಲಂಬನೆ ತಗ್ಗಿಸಲು ಆರ್ಥಿಕ ಮಾದರಿ ಸಿದ್ಧಪಡಿಸಿಕೊಂಡು ಆಂತರಿಕ ಹಾಗೂ ಬಾಹ್ಯ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣಕ್ಕೆ ಅವಕಾಶ ನೀಡಬೇಕು. ದೇಣಿಗೆ ಸ್ವೀಕಾರ, ಹಳೆಯ ವಿದ್ಯಾರ್ಥಿಗಳಿಂದ ಹಣಕಾಸು ನೆರವು ಪಡೆಯುವ ಅಂಶವು ಉದ್ದೇಶಿತ ವಿಧೇಯಕದಲ್ಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಅತ್ಯುತ್ತಮ ಗುಣಮಟ್ಟದ ಬೋಧಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು. ಅವರಿಗೆ ಉತ್ತಮ ವೇತನ ನೀಡಬೇಕಿದೆ. ಜತೆಗೆ ಟ್ಯೂಷನ್ ಫೀ ನಿಗದಿ ಮಾಡುವ ಅಧಿಕಾರವನ್ನು ಯುವಿಸಿಇಗೇ ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳಿಗೆ ನೆರವು ನೀಡಬೇಕು ಎಂಬ ಅಂಶವೂ ಸೇರಿದೆ ಎಂದು ತಿಳಿಸಿದರು.

ಉತ್ಕೃಷ್ಟ ಶೈಕ್ಷಣಿಕ ಹಿನ್ನೆಲೆಯ ಬೋಧಕರ‌ ನೇಮಕ, ಸಂಶೋಧನೆ ಹಾಗೂ ಮೂಲಸೌಕರ್ಯಕ್ಕೆ ಆದ್ಯತೆ ನೀಡುವುದು, ಹೊಸ ರೀತಿಯ ಪಠ್ಯ ಸೇರ್ಪಡೆಗೊಳಿಸುವ ಹಾಗೂ ಹೊಸ ಕೋರ್ಸುಗಳನ್ನು ಆರಂಭಿಸಲು ಯುವಿಸಿಇಗೆ ಪೂರ್ಣ ಸ್ವಾಯತ್ತತೆ ಕೊಡಬೇಕು ಎಂದರು.

ಆಡಳಿತದಲ್ಲಿ ಯುವಿಸಿಇಗೆ ಪೂರ್ಣ ಅಧಿಕಾರ ನೀಡುವುದರ ಜತೆಗೆ ಸ್ವತಂತ್ರ ಅಸ್ತಿತ್ವ ನೀಡಬೇಕು. ಒಟ್ಟಾರೆ ಮಾಲೀಕತ್ವ ಸರ್ಕಾರದ್ದೇ ಆಗಿದ್ದರೂ ಆಡಳಿತದಲ್ಲಿ ಯುವಿಸಿಇಯದ್ದೇ ಅಂತಿಮ ನಿರ್ಧಾರವಾಗಬೇಕು. 11 ಸದಸ್ಯರ ಆಡಳಿತ ಮಂಡಳಿಯಲ್ಲಿ ಸರ್ಕಾರಕ್ಕೂ ಸಮಾನ ಪ್ರಾತಿನಿಧ್ಯ ಇರುತ್ತದೆ.

ಸರ್ಕಾರ, ಕೈಗಾರಿಕೆ, ಶೈಕ್ಷಣಿಕ ವಲಯದಿಂದ ತಲಾ ಮೂವರು ಸದಸ್ಯರು, ಹಳೆಯ ವಿದ್ಯಾರ್ಥಿಗಳಿಂದ ಇಬ್ಬರು ಸದಸ್ಯರು ಇರಬೇಕು. ಈ ಅಂಶವೂ ಪ್ರಸ್ತಾವಿತ ವಿಧೇಯಕದಲ್ಲಿ ಇರುತ್ತದೆಂದು ಡಾ.ಅಶ್ವತ್ಥ್‌ ನಾರಾಯಣ ಮಾಹಿತಿ ನೀಡಿದರು.

ಕ್ಯಾಂಪಸ್‌ಗೆ ಭೇಟಿ ಮತ್ತು ಪರಿಶೀಲನೆ : ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್‌ ನಾರಾಯಣ ಅವರು ಸಮಿತಿಯ ಸದಸ್ಯರೊಂದಿಗೆ ಕೆಆರ್‌ವೃತ್ತದಲ್ಲಿರುವ ಯುವಿಸಿಇ ಕ್ಯಾಂಪಸ್‌ಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಟ್ಟಡಗಳ ನಿರ್ಮಾಣ, ಮೂಲಸೌಕರ್ಯ ಇತ್ಯಾದಿ ಅಂಶಗಳ ಬಗ್ಗೆ ಸಮಿತಿ ಜತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಡಾ. ಎಸ್ ಸಡಗೋಪನ್, ಸಮಿತಿ ಸದಸ್ಯರಾದ ಬೆಂಗಳೂರು ವಿವಿ ಕುಲಪತಿ ಪ್ರೊ.ವೇಣುಗೋಪಾಲ್, ಬಿ.ಮುತ್ತುರಾಮನ್, ಪ್ರಶಾಂತ್ ಪ್ರಕಾಶ್ ನಾಗಾನಂದ ದೊರೆಸ್ವಾಮಿ, ನಾರಾಯಣನ್‌ ಮುಂತಾದವರು ಡಿಸಿಎಂ ಜೊತೆಯಲ್ಲಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.