ETV Bharat / state

ಪೊಲೀಸ್​​ ಸಿಬ್ಬಂದಿಗೆ ಪ್ರತ್ಯೇಕ ಕೊರೊನಾ ಪರೀಕ್ಷೆ ಹಾಗೂ ಚಿಕಿತ್ಸಾ ಕೇಂದ್ರ: ಬಸವರಾಜ ಬೊಮ್ಮಾಯಿ - ಕೋವಿಡ್-19 ಚಿಕಿತ್ಸಾ ಕೇಂದ್ರ

ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಬ್ಬಂದಿಗೆ ಪ್ರತ್ಯೇಕವಾಗಿ ಒಂದು ಕೊರೊನಾ ತಪಾಸಣಾ ಕೇಂದ್ರ ಮತ್ತು ಕೋವಿಡ್-19 ಚಿಕಿತ್ಸಾ ಕೇಂದ್ರವನ್ನು ಮೀಸಲಿಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗುತ್ತದೆ. ಪೊಲೀಸ್ ಸಿಬ್ಬಂದಿ ಬೇಗ ಗುಣಮುಖರಾಗಿ ಸೇವೆಗೆ ಹಾಜರಾಗಲು ಇದು ಸಹಕಾರಿಯಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
author img

By

Published : Jun 22, 2020, 6:25 PM IST

ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕವಾಗಿ ಕೊರೊನಾ ತಪಾಸಣಾ ಕೇಂದ್ರ ಮತ್ತು ಕೋವಿಡ್ ಚಿಕಿತ್ಸಾ ಕೇಂದ್ರದ ವ್ಯವಸ್ಥೆ ಕಲ್ಪಿಸುವಂತೆ ಆರೋಗ್ಯ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ತುರ್ತು ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಬಗ್ಗೆ ಚರ್ಚೆ ನಡೆಯಿತು. ಕ್ವಾರಂಟೈನ್ ಕೇಂದ್ರ, ಚೆಕ್ ಪೋಸ್ಟ್, ಕೋವಿಡ್ ಸೆಂಟರ್, ಪರೀಕ್ಷಾ ಕೇಂದ್ರ, ಸೀಲ್ ಡೌನ್ ಏರಿಯಾ ಸೇರಿ ಎಲ್ಲಾ ಕಡೆ ಪೊಲೀಸರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪೊಲೀಸ್ ಸಿಬ್ಬಂದಿಗೂ ಹೆಚ್ಚಾಗಿ ಸೋಂಕು ತಗುಲುತ್ತಿದೆ. ಬೆಂಗಳೂರಿನಲ್ಲಿ 59 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 6 ಠಾಣೆಗಳನ್ನು ಸೀಲ್ ​ಡೌನ್ ಮಾಡಿ ಸ್ಯಾನಿಟೈಸ್​ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಬ್ಬಂದಿಗೆ ಪ್ರತ್ಯೇಕವಾಗಿ ಒಂದು ಕೊರೊನಾ ತಪಾಸಣಾ ಕೇಂದ್ರ ಮತ್ತು ಕೋವಿಡ್-19 ಚಿಕಿತ್ಸಾ ಕೇಂದ್ರ ಮೀಸಲಿಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗುತ್ತದೆ. ಪೊಲೀಸ್ ಸಿಬ್ಬಂದಿ ಬೇಗ ಗುಣಮುಖರಾಗಿ ಸೇವೆಗೆ ಹಾಜರಾಗಲು ಇದು ಸಹಕಾರಿಯಾಗಲಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ

ಪೊಲೀಸ್​ ಅಧಿಕಾರಿಗಳು ಮತ್ತು ಕೊರೊನಾ ವಾರಿಯರ್ಸ್​ಗೆ ಕೊರೊನಾ ತಪಾಸಣೆ ಮಾಡಬೇಕು. ಆದ್ಯತೆ ಮೇರೆಗೆ ಇದು ಆಗಬೇಕು. ಈ ಬಗ್ಗೆ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದರು.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ 8-10 ದಿನಗಳಲ್ಲಿ ಕೊರೊನಾ ಸೋಂಕು ಜಾಸ್ತಿಯಾಗುತ್ತಾ ಬರುತ್ತಿದೆ. ಐಎಲ್ಐ ಮತ್ತು ತೀವ್ರ ಉಸಿರಾಟದ ತೊಂದರೆ ಪ್ರಕರಣಗಳು ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಇದ್ದರೂ ಪಾಸಿಟಿವ್ ಬಂದಿವೆ. ಇದು ಆತಂಕಕಾರಿ ವಿಷಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ಆಸ್ಪತ್ರೆ ಸಾಮರ್ಥ್ಯ ಹೆಚ್ಚಿಸುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ ಕೋವಿಡ್-19 ಚಿಕಿತ್ಸೆಗೆ 13 ಆಸ್ಪತ್ರೆಗಳು ಇವೆ. ಇದರ ಜೊತೆಗೆ 3 ಸರ್ಕಾರಿ ಮತ್ತು 10 ಖಾಸಗಿ ಮೆಡಿಕಲ್ ಕಾಲೇಜುಗಳು ಇದ್ದು, ಇವರ ಸಹಕಾರ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. ಅವುಗಳನ್ನೂ ಕೋವಿಡ್ ಆಸ್ಪತ್ರೆಗಳನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.