ETV Bharat / state

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆಗೆ ಸೂಚನೆ: ಸಚಿವ ಈಶ್ವರ್ ಖಂಡ್ರೆ - leopard task force for Bangalore

ಬೆಂಗಳೂರಿನ ಜನವಸತಿ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

separate-leopard-task-force-for-bangalore-says-minister-ishwar-khandre
ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆಗೆ ಸೂಚನೆ : ಸಚಿವ ಈಶ್ವರ್ ಖಂಡ್ರೆ
author img

By ETV Bharat Karnataka Team

Published : Nov 6, 2023, 10:50 AM IST

ಬೆಂಗಳೂರು: ಬೆಂಗಳೂರು ನಗರದ ಜನವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಈ ಬಾರಿ ಮಳೆಯ ಅಭಾವ ಇರುವೆಡೆ ಆಹಾರ ಹುಡುಕಿಕೊಂಡು ವನ್ಯಮೃಗಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರ ಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಹೇಳಿದ್ದಾರೆ. ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಸಚಿವರು ನಿರ್ದೇಶನ ಕೊಟ್ಟಿದ್ದಾರೆ.

ಥರ್ಮಲ್ ಇಮೇಜ್ ಕ್ಯಾಮರಾ ಬಳಸಿ ಕಾರ್ಯಾಚರಣೆ:​ ಬೆಂಗಳೂರು ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ. ಈ ಸಂಬಂಧ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸರ್ವ ಪ್ರಯತ್ನ ಮಾಡುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದ್ದರು. ಅರಣ್ಯ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಚಿರತೆ ಸೆರೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಡ್ರೋನ್ ಕ್ಯಾಮೆರಾಗಳ ನೆರವಿನಿಂದಲೂ ಶೋಧ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಚಿರತೆ ಓಡಾಡಿರುವ ಕಡೆಗಳಲ್ಲಿ ಬೋನು ಇಡಲಾಗಿದ್ದು, ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಬೆಂಗಳೂರಿನಂತಹ ಮಹಾನಗರದಲ್ಲೂ ಥರ್ಮಲ್ ಇಮೇಜ್ ಕ್ಯಾಮರಾಗಳನ್ನು ಬಳಸಿ ರಾತ್ರಿಯ ವೇಳೆಯೂ ಚಿರತೆ ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದ್ದರು.

ಇದನ್ನೂ ಓದಿ: ಕಾಡಲ್ಲಿರಬೇಕಾದ ಚಿರತೆ ನಾಡಲ್ಲೇಕೆ ಕಾಣಿಸಿಕೊಳ್ಳುತ್ತಿವೆ?: ಕಾರಣ ತೆರೆದಿಟ್ಟ ವನ್ಯಜೀವಿ ತಜ್ಞೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.