ETV Bharat / state

ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ: ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದ ಜೆಡಿಎಸ್‌

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್​ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಮೇ 25 ಅಥವಾ 28 ರಂದು ಆಯೋಜಿಸಲು ನಿರ್ಧರಿಸಿದೆ.

jds
ಜೆಡಿಎಸ್
author img

By

Published : May 19, 2023, 8:32 PM IST

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಚರ್ಚಿಸಲು ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮೇ 25 ಅಥವಾ 28 ರಂದು ಸಭೆ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂಬರುವ ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಿದ್ಧತೆಯ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ರಾಷ್ಟ್ರೀಯ ಪದಾಧಿಕಾರಿಗಳು, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿವಿಧ ರಾಜ್ಯಗಳ ಪಕ್ಷದ ರಾಜ್ಯಾಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾದ ಹಾಗೂ ಪರಾಜಿತ ಅಭ್ಯರ್ಥಿಗಳಿಗೂ ಕಾರ್ಯಕಾರಿಣಿಗೆ ಆಹ್ವಾನ ನೀಡಲಾಗುತ್ತದೆ. ಪಕ್ಷದ ಸಂಸದರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ಸಮಾಲೋಚನೆ ನಡೆಸಿ ಮಾರ್ಗದರ್ಶನ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣಗಳೇನು?: ಪಕ್ಷ ಎಡವಿದ್ದೆಲ್ಲಿ? ಸೋಲಿನ ಕಹಿ ಅನುಭವದಿಂದ ಎದೆಗುಂದದೆ ಪಕ್ಷ ಸಂಘಟನೆಯ ಜತೆಗೆ ಮುಂಬರುವ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ. ಪಕ್ಷದ ಮುಂದಿನ ಹೋರಾಟದ ರೂಪು - ರೇಷೆಯ ಬಗ್ಗೆ ಚರ್ಚೆ ನಡೆಸಿ ಕೆಲವು ನಿರ್ಣಯಗಳನ್ನು ಅಂಗೀಕರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ದಳಪತಿಗಳು ಚಿಂತೆಗೀಡು: ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನದ ಗುರಿ ಇಟ್ಟುಕೊಂಡಿದ್ದ ಜೆಡಿಎಸ್​ಗೆ ಈ ಬಾರಿ ದಕ್ಕಿದ್ದು, ಕೇವಲ 19 ಸ್ಥಾನ ಮಾತ್ರ. ಹೀಗಾಗಿ ಜೆಡಿಎಸ್ ಸೋಲಿನ ಪರಾಮರ್ಶೆ ಮಾಡಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.

ಈ ಬಾರಿ ಚುನಾವಣೆಯಲ್ಲಿ ಹಳೇ ಮೈಸೂರು ಹಾಗೂ ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್ 52 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಜೆಡಿಎಸ್ 31ರಿಂದ 14ಕ್ಕೆ ಕುಸಿದಿದೆ. ಬಿಜೆಪಿ ಕಳೆದ ಬಾರಿಗಿಂತ ಒಂದು ಸ್ಥಾನ ಕಡಿಮೆ ಪಡೆದಿದೆ. ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳಲ್ಲೇ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. 2018ರಲ್ಲಿ ಮಂಡ್ಯ ಜಿಲ್ಲೆಯಲ್ಲಿ 7 ಕ್ಕೆ 7 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದ ಜೆಡಿಎಸ್, ಈ ಬಾರಿ ಒಂದೇ ಒಂದು ಸ್ಥಾನಕ್ಕೆ ತೃಪ್ತಿಪಟ್ಟು ಕೊಳ್ಳಬೇಕಾಯಿತು. 2019ರಲ್ಲಿ ಅಪರೇಷನ್‌ ಕಮಲದಿಂದ ಬಿಜೆಪಿ ತೆಕ್ಕೆಗೆ ಹೋಗಿದ್ದ ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಗೆದ್ದಿದೆ.

ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ 3 ಸ್ಥಾನ ಕಳೆದುಕೊಂಡಿದೆ. ಬೆಂಗಳೂರಿನಲ್ಲಿ ಶೂನ್ಯ ಸಾಧನೆ ಮಾಡಿದೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸ್ಥಾನಗಳು ದ್ವಿಗುಣಗೊಂಡಿವೆ. ನನಗೂ ಒಮ್ಮೆ ಅವಕಾಶ ಕೊಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿಗೆ ಮತದಾರರು ಮಣೆ ಹಾಕಿದಂತೆ ಗೋಚರಿಸುತ್ತಿದೆ. ಒಕ್ಕಲಿಗ ಸಮುದಾಯ ಹೆಚ್ಚಿರುವ ಕಡೆಗಳಲ್ಲೂ ಜೆಡಿಎಸ್ ನಿರೀಕ್ಷಿತ ಗೆಲುವು ಸಾಧಿಸಿಲ್ಲ. ಇದು ದಳಪತಿಗಳನ್ನು ಚಿಂತೆಗೀಡು ಮಾಡುವಂತೆ ಮಾಡಿದೆ.

ಇದನ್ನೂ ಓದಿ: 'ಏಳು-ಬೀಳು ಸಾಮಾನ್ಯ, ಚುನಾವಣೆಗಳನ್ನು ಸಂಘರ್ಷವೆಂದು ತಿಳಿದು ಹೋರಾಡೋಣ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.