ETV Bharat / state

8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಗ್ಯಾರೇಜ್ ಯುವಕನ ಬಂಧನ - ಗ್ಯಾರೇಜ್​​ನಲ್ಲಿ ಕೆಲಸ ಮಾಡಿಕೊಂಡಿದ್ದ ಫಿರೋಜ್ ಖಾನ್

8 ವರ್ಷದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ.

8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
author img

By

Published : Feb 11, 2023, 4:53 PM IST

ಬೆಂಗಳೂರು: ಶಾಲೆಗೆ ಹೋಗುವ ಬಾಲಕಿಯನ್ನು ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಇಲ್ಲಿಯ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಸಂಬಂಧ ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಎಂಟು ವರ್ಷದ ಬಾಲಕಿ‌ ಮೇಲೆ ಎರಗಿ ಲೈಂಗಿಕ ದೌರ್ಜನ್ಯ ಎಸಗಿರುವ ಹಿನ್ನೆಲೆ ಗ್ಯಾರೇಜ್​​ನಲ್ಲಿ ಕೆಲಸ ಮಾಡಿಕೊಂಡಿದ್ದ ಫಿರೋಜ್ ಖಾನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಬಾಲಕಿಯ ಕುಟುಂಬ ಜೀವನ ನಡೆಸಲು 2 ವರ್ಷದ ಹಿಂದೆ ನಗರದ ಈಜೀಪುರಕ್ಕೆ ಬಂದು ವಾಸವಾಗಿತ್ತು. ಸಂತ್ರಸ್ತ ಬಾಲಕಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಬೆಳಗ್ಗೆ ಎಂದಿನಂತೆ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಬಂದ ಆರೋಪಿ ಫಿರೋಜ್ ಖಾನ್ ನಿನ್ನ ಬಳಿ ಮಾತನಾಡಬೇಕು ಎಂದು ಪುಸಲಾಯಿಸಿ ಬಾಲಕಿಯನ್ನು ತಾನೂ ಕೆಲಸ ಮಾಡುತ್ತಿದ್ದ ಗ್ಯಾರೇಜ್ ಒಳಗೆ ಕರೆದುಕೊಂಡು ಹೋಗಿದ್ದಾನೆ.

ನಂತರ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದರಿಂದ ಗಾಬರಿಯಾದ ಬಾಲಕಿ ಆರೋಪಿಯಿಂದ ತಪ್ಪಿಸಿಕೊಂಡು ಅಳುತ್ತಾ ಹೊರಬಂದು ತಾಯಿಯ ಬಳಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. ಮಗಳ ಮೇಲಾದ ದೌರ್ಜನ್ಯದ ಬಗ್ಗೆ ಸಂತ್ರಸ್ಥ ಬಾಲಕಿಯ ತಾಯಿ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ಫಿರೋಜ್ ಖಾನ್​ನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಶಾಲೆಯಿಂದ ಬರುತ್ತಿದ್ದ ಬಾಲಕಿ ಮೇಲೆ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೋರ್ಟ್​ನಿಂದ ಶಿಕ್ಷೆ: ಕೆಲ ದಿನಗಳ ಹಿಂದೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಪ್ರಕರಣವೊಂದರಲ್ಲಿ ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಆರೋಪಿ ಪದ್ಮನಾಭ ಎನ್ನುವವನು ಲೈಂಗಿಕ ದೌರ್ಜನ್ಯ ಎಸಗಿದ್ದರು. ಶಾಲೆಯಿಂದ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಅಡ್ಡಗಟ್ಟಿದ ಆರೋಪಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು.

ನಡೆದ ವಿಷಯದ ಬಗ್ಗೆ ಸಂತ್ರಸ್ತೆ ತಮ್ಮ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ಕೇಳಲು ಹೋದ ಸಂತ್ರಸ್ತೆ ತಂದೆಗೂ ಆರೋಪಿ ಜೀವ ಬೆದರಿಕೆ ಹಾಕಿದ್ದ. ಆರೋಪಿ ವಿರುದ್ಧ ಧರ್ಮಸ್ಥಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದ ವಿಚಾರಣೆಯಲ್ಲಿ ಆರೋಪಿ ಮೇಲೆನ ಅಪರಾಧ ಸಾಬೀತಾಗಿತ್ತು. ಅಪರಾಧಿಗೆ ನ್ಯಾಯಾಲಯ 500 ರೂ ದಂಡ ವಿಧಿಸಿ 3 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿತ್ತು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿಯಾದ ಸಹನಾದೇವಿ ಅವರು ಸರ್ಕಾರದ ಪರ ವಾದ ಮಂಡಿಸಿದರು. ಪೊಲೀಸ್ ಉಪನಿರೀಕ್ಷರಾದ ಅವಿನಾಶ್ ಹೆಚ್ ಗೌಡ ಎಂಬುವವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದನ್ನೂ ಓದಿ: ಇನ್ಸ್ಟಾಗ್ರಾಮ್​ನಲ್ಲಿ ಉದ್ಯೋಗದ ಆಸೆ ತೋರಿಸಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ; ಟೆಕ್ಕಿ ಅರೆಸ್ಟ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.