ಬೆಂಗಳೂರು: ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಸ ಪತ್ರಿಕೆ ಸಂಪಾದಕ ರೌಡಿ ಶೀಟರ್ ಅನಿಲ್ ರಾಜ್ ಎಂಬಾತನನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂಪಾದಕ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಎಂದು ತಿಳಿದುಬಂದಿದೆ. ಈತನಿಗೆ 20 ವರ್ಷದ ಮಗಳಿದ್ದರೂ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಬಲವಂತವಾಗಿ ಸಂಬಂಧ ಬೆಳೆಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಥಳೀಯ ಮಾಸ ಪತ್ರಿಕೆಯೊಂದರ ಸಂಪಾದಕನಾಗಿರುವ ಆರೋಪಿ ಅನಿಲ್ ರಾಜ್, ತನ್ನದೇ ಮಾಸ ಪತ್ರಿಕೆಯ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಯುವತಿಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಎಸ್ ಸೆಕ್ಷನ್ 354A, 341, 376, 509 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.