ETV Bharat / state

ಬೆಳಗಾವಿಯಲ್ಲಿ ₹250 ಕೋಟಿ ಹೂಡಿಕೆಗೆ ಎಸ್‌ಎಫ್‌ಎಸ್‌ ಕಂಪನಿ ಪ್ರಸ್ತಾವನೆ: ಸಚಿವ ಎಂ.ಬಿ. ಪಾಟೀಲ್

ಎಸ್‌ಎಫ್‌ಎಸ್‌ ಕಂಪನಿಯ ನಿಯೋಗ ಇಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ಸಚಿವ ಎಂ.ಬಿ ಪಾಟೀಲ್
ಸಚಿವ ಎಂ.ಬಿ ಪಾಟೀಲ್
author img

By

Published : Jun 28, 2023, 8:19 PM IST

ಬೆಂಗಳೂರು : ಆ್ಯಪಲ್ ಫೋನ್ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ. ಇದು ಸ್ವಾಗತಾರ್ಹ ಪ್ರಸ್ತಾವನೆಯಾಗಿದೆ. ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ತಮ್ಮನ್ನು ಇಂದು ಭೇಟಿಯಾಗಿದ್ದ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್ ಶಾ ನೇತೃತ್ವದ ನಿಯೋಗದ ಬೇಡಿಕೆಗಳನ್ನು ಕೇಳಿದ ಅವರು ಈ ಭರವಸೆ ನೀಡಿದ್ದಾರೆ. ಎಸ್‌ಎಫ್‌ಎಸ್‌ ಕಂಪನಿ ಈಗಾಗಲೇ ಬೆಳಗಾವಿಯಲ್ಲಿ ಏರೋಸ್ಪೇಸ್‌ ಉದ್ಯಮಕ್ಕೆ ಬೇಕಾಗುವ ಬಿಡಿಭಾಗಗಳನ್ನು ತಯಾರಿಸುತ್ತಿದೆ. ಕಂಪನಿ ಇದೀಗಾ ಆಪಲ್‌ ಫೋನ್‌ಗೆ ಬೇಕಾಗುವ ಬಿಡಿಭಾಗಗಳ ತಯಾರಿಕಾ ಘಟಕವನ್ನು ರಾಜ್ಯದಲ್ಲಿ ತೆರೆಯಲು ಮನಸ್ಸು ಮಾಡಿದೆ. ಇದರಿಂದ ಮುಂದಿನ ಮೂರು ವರ್ಷಗಳಲ್ಲಿ 500 ಜನ ತಂತ್ರಜ್ಞರಿಗೆ ಉದ್ಯೋಗ ಸಿಗಲಿದೆ. ಇದರ ಜತೆಗೆ ಪರೋಕ್ಷವಾಗಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯದ ಆರ್ಥಿಕತೆಗೂ ಲಾಭವಾಗುವ ನಿರೀಕ್ಷೆ ಇದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ.

ಬೆಳಗಾವಿಯನ್ನು ರಾಜ್ಯದ ಪ್ರಮುಖ ಉದ್ಯಮ ವಲಯಗಳಲ್ಲಿ ಒಂದಾಗಿ ಬೆಳೆಸಲಾಗುತ್ತಿದೆ. ಅಲ್ಲಿ ಸಂಪರ್ಕ ವ್ಯವಸ್ಥೆ ಚೆನ್ನಾಗಿದೆ. ಇದು ಮುಂಬೈ-ಬೆಂಗಳೂರು-ಚೆನ್ನೈ ಕಾರಿಡಾರ್​ನಲ್ಲಿ ಬರುವುದರಿಂದ ಔದ್ಯಮಿಕ ಬೆಳವಣಿಗೆಗೆ ಅಪಾರ ಅವಕಾಶಗಳಿವೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರಕಾರವು ತೀರ್ಮಾನಿಸಿದೆ ಎಂದು ಕಂಪನಿಯ ಪ್ರತಿನಿಧಿಗಳು ನುಡಿದರು. ಇನ್ನು ಈ ಸಂದರ್ಭದಲ್ಲಿ ಎಸ್‌ಎಫ್‌ಎಸ್‌ ಕಂಪನಿಯ ನಿರ್ದೇಶಕ ಪ್ರಶಾಂತ್‌ ಕೋರೆ, ಕೈಗಾರಿಕಾ ಇಲಾಖೆ ಅಯುಕ್ತೆ ಗುಂಜನ್‌ ಕೃಷ್ಣ ಹಾಜರಿದ್ದರು.

ಐಪೋನ್​​ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ : ಈಗಾಗಲೇ ಎಂಬಿ ಪಾಟೀಲ್ ಅವರು, ವಿಶ್ವದ ಅತಿ ದೊಡ್ಡ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್​​ಕಾನ್) ಕಂಪನಿಗೆ ಐಫೋನ್ ಅಸೆಂಬ್ಲಿ ಘಟಕವನ್ನು ಸ್ಥಾಪಿಸಲು ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ. 2024ರ ಏಪ್ರಿಲ್ 1ರ ವೇಳೆಗೆ ಬೆಂಗಳೂರಿನ ದೇವನಹಳ್ಳಿ ಸ್ಥಾಪಿಸಲಿರುವ ಐಫೋನ್ ಅಸೆಂಬ್ಲಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಭೂಮಿ ಹಸ್ತಾಂತರ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪ್ರತಿಷ್ಠಿತ ಐಟಿ ಕಂಪನಿಗಳ ಜೊತೆ ಖರ್ಗೆ ಚರ್ಚೆ : ಬೆಂಗಳೂರಿನಲ್ಲಿರುವ ಮಾಹಿತಿ ತಂತ್ರಜ್ಞಾನ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಕೌಶಲ್ಯಪೂರ್ಣರಾಗಿಸಿ, ಮಾಹಿತಿ ತಂತ್ರಜ್ಞಾನ ಕಂಪನಿಗಳ ಉದ್ಯೋಗಕ್ಕೆ ಸಜ್ಜುಗೊಳಿಸುವ ಸಿದ್ದತೆ ನಡೆದಿದೆ. ಹೀಗಾಗಿ ನ್ಯಾಸ್ಕಾಮ್ (NASSCOM) ಪ್ರತಿನಿಧಿಗಳ ನಿಯೋಗ ಹಾಗೂ ಟೊಯೊಟಾ ಸಂಸ್ಥೆಯ ಪ್ರತಿನಿಧಿಗಳು ಪ್ರತ್ಯೇಕವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳ ಮೂಲಕ ಪ್ರತಿ ವರ್ಷ ಹೊರ ಬರುತ್ತಿರುವ ಕನ್ನಡ ನಾಡಿನ ಯುವಕ- ಯವತಿಯರಿಗೆ ಐಟಿ ಕಂಪನಿಗಳಲ್ಲಿ ಉದ್ಯೋಗಕ್ಕೆ ಅವಕಾಶ ಮಾಡಿಕೊಡುವ ರಾಜ್ಯ ಸರ್ಕಾರದ ಆಶಯವನ್ನು ಐಟಿ ಸಂಸ್ಥೆಗಳ ಪ್ರತಿನಿಧಿಗಳು ಸ್ವಾಗತಿಸಿದ್ದಾರೆ.

ಇದನ್ನೂ ಓದಿ : Jobs: ಕರ್ನಾಟಕ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿದೆ ನೌಕರಿ: ಈ ಅರ್ಹತೆ ಇರುವವರು ಅರ್ಜಿ ಹಾಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.