ಬೆಂಗಳೂರು: ಕೊರೊನಾ ಅಟ್ಟಹಾಸದ ಪರಿಸ್ಥಿತಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸದಂತೆ ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಪತ್ರದ ಮೂಲಕ ಮನವಿ ಮಾಡಿರುವ ಎಸ್.ಜಿ.ಸಿದ್ದರಾಮಯ್ಯ, ದಿನೇ ದಿನೆ ಕೊರೊನಾ ಸೋಂಕು ಹೆಚ್ಚುತ್ತಿದೆ. ದೇಶಾದ್ಯಂತ ಸಾವಿರಾರು ಜೀವ ಹಾನಿ ಕೂಡ ಸಂಭವಿಸುತ್ತಿದೆ. ಇಂತಹ ಭಯಾನಕ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಈ ಹಿಂದೆ ನಾನು ನಿಮ್ಮ ಜೊತೆ ಮಾತನಾಡಿದಾಗ ಪರಿಸ್ಥಿತಿ ಇಷ್ಟು ಕೆಟ್ಟದಾಗಿರಲಿಲ್ಲ. ಮಕ್ಕಳ ಜೀವದ ದೃಷ್ಟಿಯಿಂದ ಇಂತಹ ಭಯಾನಕ ಸನ್ನಿವೇಶದಲ್ಲಿ ಯಾವುದೇ ಕಾರಣಕ್ಕೂ ಪರೀಕ್ಷೆ ನಡೆಸೋದು ಬೇಡ. ಪರೀಕ್ಷೆ ತೀರ್ಮಾನವನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.