ಬೆಂಗಳೂರು: ಕೊರೊನಾ ವೈರಸ್ ಹರಡದಂತೆ ತಡೆಯಲು ದೇಶದಾದ್ಯಂತ ಲಾಕ್ಡೌನ್ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಬಡವರು ಆಹಾರವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆ ನಗರದ ಶಾಕಂಬರಿ ನಗರ ವಾರ್ಡ್ ನಂ.169ರ ಕಾರ್ಪೋರೇಟರ್ ಮಾಲತಿ ಸೋಮಶೇಖರ್ ಸುಮಾರು 50ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಚಿತವಾಗಿ ರೇಷನ್ ಹಂಚಿದ್ದಾರೆ. ಪ್ರತಿನಿತ್ಯ ತಮ್ಮ ಜೀವವನ್ನೇ ಪಣಕ್ಕಿಟ್ಟು ನಗರವನ್ನು ಸ್ವಚ್ಛ ಮಾಡುತ್ತಿರುವ ಪೌರಕಾರ್ಮಿಕರಿಗೆ ಅಕ್ಕಿ, ಎಣ್ಣೆ, ಬೇಳೆಯನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ಇದೇ ವೇಳೆ ಪ್ರತಿಯೊಬ್ಬರ ನಡುವೆ ಅಂತರ ಕಾಯ್ದುಕೊಂಡು ಸುರಕ್ಷತೆಯಿಂದ ಕೆಲಸ ಮಾಡುವಂತೆ ಪೌರಕಾರ್ಮಿಕರಿಗೆ ಹೇಳಿದ್ದಾರೆ.