ETV Bharat / state

Free Bus Scheme: ಶನಿವಾರ 58 ಲಕ್ಷ ಮಹಿಳೆಯರಿಂದ 'ಶಕ್ತಿ' ಪಯಣ.. 2 ವಾರದ ಉಚಿತ ಟಿಕೆಟ್ ಮೌಲ್ಯ 166 ಕೋಟಿ ರೂ. - ಉಚಿತ ಬಸ್ ಪ್ರಯಾಣ

ಮಹಿಳೆಯರಿಗಾಗಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಎರಡು ವಾರದ ಬಳಿಕವೂ ಉತ್ತ‌ಮ ಸ್ಪಂದನೆ ಸಿಕ್ಕಿದೆ.

Representative image
ಪ್ರಾತಿನಿಧಿಕ ಚಿತ್ರ
author img

By

Published : Jun 25, 2023, 2:46 PM IST

ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರ ಪ್ರಯಾಣ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಶನಿವಾರ 58,14,524 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಬೆಳೆಸಿದ್ದಾರೆ.

ಮಹಿಳೆಯರಿಗಾಗಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಎರಡು ವಾರದ ಬಳಿಕವೂ ಉತ್ತ‌ಮ ಸ್ಪಂದನೆ ಮುಂದುವರೆದಿದೆ. ಯೋಜನೆ ಜಾರಿಯಾಗಿ ಎರಡು ವಾರದ ಬಳಿಕವೂ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ವೀಕೆಂಡ್​ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್​ಗಳಲ್ಲಿ ಪುಣ್ಯ ಕ್ಷೇತ್ರಗಳತ್ತ ಪಯಣ ಮುಂದುವರಿಸಿದ್ದಾರೆ.

ಶನಿವಾರ ಬಹುತೇಕ ಎಲ್ಲಾ ಸರ್ಕಾರಿ ಬಸ್​ಗಳು ಅದರಲ್ಲೂ ಧರ್ಮಸ್ಥಳ, ಚಾಂಮುಂಡೇಶ್ವರಿ ದೇವಾಲಯ ಸೇರಿ ರಾಜ್ಯದ ಪ್ರಸಿದ್ಧ ದೇವಾಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.

ಶನಿವಾರ ಬೆಳಗ್ಗೆಯಿಂದ ಮಧ್ಯ ರಾತ್ರಿವರೆಗೆ ನಾಲ್ಕು ರಸ್ತೆ ಸಾರಿಗೆ ನಿಗಮಗಳಲ್ಲಿ ಸಾಮಾನ್ಯ ಸಾರಿಗೆ ಬಸ್​ ಗಳಲ್ಲಿ ಬರೋಬ್ಬರಿ 58,14,524 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಮಹಿಳೆಯರ ಉಚಿತ ಟಿಕೆಟ್ ಮೌಲ್ಯ ಒಟ್ಟು 13.41 ಕೋಟಿ ರೂ. ಆಗಿದೆ.

ಶನಿವಾರ ಕೆಎಸ್ಆರ್​ಟಿಸಿ ಬಸ್​ನಲ್ಲಿ 17,29,314, ಬಿಎಂಟಿಸಿಯಲ್ಲಿ 18,95,144 ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್​ನಲ್ಲಿ 14,01,910 ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​​ಗಳಲ್ಲಿ 7,88,156 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ.

2 ವಾರದಲ್ಲಿ ಒಟ್ಟು 'ಶಕ್ತಿ' ಮೌಲ್ಯ?‌: ಜೂನ್ 11 ರಂದು ಆರಂಭಗೊಂಡ ಶಕ್ತಿ ಯೋಜನೆಯಡಿ ಜೂನ್ 24ವರೆಗೆ ಬರೋಬ್ಬರಿ 7,15,58,775 ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಆ ಮೂಲಕ ಎರಡು ವಾರದಲ್ಲಿ ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 166.09 ಕೋಟಿ ರೂ. ಮೊದಲ ವಾರ ಜೂ.17ರ ವರೆಗೆ ಬರೋಬ್ಬರಿ 3,12,21,241 ಮಹಿಳೆಯರು ಪ್ರಯಾಣಿಸಿದ್ದಾರೆ. ಆ ಮೂಲಕ ಬರೋಬ್ಬರಿ 70.28 ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್ ನಲ್ಲಿ ಪ್ರಯಾಣಿಸಿದ್ದರು.

ಈಗ ಎರಡು ವಾರಗಳಲ್ಲಿ ಕೆಎಸ್ಆ​ರ್​ಟಿಸಿಯಲ್ಲಿ ಒಟ್ಟು 2,08,84,860 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರು. ಬಿಎಂಟಿಸಿಯಲ್ಲಿ ಸುಮಾರು 2,39,07,381, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ 1,72,86,040 ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​​ಗಳಲ್ಲಿ 94,80,494 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಕರ್ನಾಟಕದ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡಲು ಶಕ್ತಿ ಯೋಜನೆಯನ್ನು ಪರಿಚಯಿಸಲಾಗಿದೆ. ಜೂನ್ 11 ರಂದು ಪ್ರಾರಂಭವಾದ ಈ ಯೋಜನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಿರ್ವಹಿಸುವ ಬಸ್‌ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಸೀಮಿತವಾಗಿದೆ.

ಇದನ್ನೂ ಓದಿ: Shakti Scheme: ಮೊದಲ ವಾರ 3 ಕೋಟಿಗೂ ಹೆಚ್ಚು ಮಹಿಳೆಯರಿಂದ ಉಚಿತ ಪ್ರಯಾಣ: ಟಿಕೆಟ್​ ಮೌಲ್ಯವೆಷ್ಟು ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.