ETV Bharat / state

ಎಲ್ಲ ಮಹಿಳೆಯರು ತಪ್ಪದೇ ಮತದಾನ ಮಾಡುವಂತೆ ಶಾಲಿನಿ ರಜನೀಶ್ ಕರೆ

author img

By

Published : May 8, 2023, 8:05 PM IST

ಮಹಿಳಾ ಮತದಾರರಲ್ಲಿ ಅರಿವು ಮೂಡಿಸುವುದಕ್ಕಾಗಿ ನಗರದ ಪುರಭವನದಲ್ಲಿಂದು ಪಿಂಕಥಾನ್ ಕಾರ್ಯಕ್ರಮ ನಡೆಯಿತು.

shalini-rajneesh-calls-for-all-women-to-vote
ಎಲ್ಲ ಮಹಿಳೆಯರು ತಪ್ಪದೇ ಮತದಾನ ಮಾಡುವಂತೆ ಶಾಲಿನಿ ರಜನೀಶ್ ಕರೆ

ಬೆಂಗಳೂರು: ಸಮಾಜದಲ್ಲಿ ಎಲ್ಲ ಮಹಿಳೆಯರಿಗೆ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕರೆ ನೀಡಿದ್ದಾರೆ. ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚುವಂತೆ ಮಾಡುವ ಉದ್ದೇಶದಿಂದ ಮಹಿಳಾ ಮತದಾರರಲ್ಲಿ ಅರಿವು ಮೂಡಿಸುವುದಕ್ಕಾಗಿ ನಗರದ ಪುರಭವನದಲ್ಲಿ ಹಮ್ಮಿಕೊಂಡಿದ್ದ ಪಿಂಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂವಿಧಾನದಲ್ಲಿ ಮಹಿಳೆಯರಿಗೆ ಸಿಕ್ಕಿರುವ ಅಧಿಕಾರ, ಜವಾಬ್ದಾರಿ ಮತ್ತು ಕರ್ತವ್ಯವನ್ನು ಚುನಾವಣೆಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಎಲ್ಲ ಹೆಣ್ಣು ಮಕ್ಕಳಿಗೆ ಪ್ರೇರಣೆ ನೀಡಬೇಕು. ಮಹಿಳೆಯರಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಂದು ಸಾಧನೆ ಮಾಡಬೇಕು. ಆ ಮೂಲಕ ದೇಶ ಕಟ್ಟಲು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು. ನಗರದಲ್ಲಿ ಎಲ್ಲಾ ಮಹಿಳೆಯರು ಮತಗಟ್ಟೆಗಳಿಗೆ ಬಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಪಿಂಕ್ ಬೂತ್​ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ನಂತರ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಮಹಿಳೆಯರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ 5 ಪಿಂಕ್ ಬೂತ್​ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪಿಂಕ್ ಬೂತ್‍ಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳೇ ಕಾರ್ಯನಿರ್ವಹಿಸಲಿದ್ದು, ಇಡೀ ಬೂತ್‍ಗಳನ್ನು ಗುಲಾಬಿ ಬಣ್ಣದಿಂದ ಅಲಂಕರಿಸುವ ಮೂಲಕ ಮಹಿಳೆಯರನ್ನು ಆಕರ್ಷಿಸಲಾಗುವುದು ಎಂದು ಹೇಳಿದರು.

ನಗರದಲ್ಲಿ ಪಿಂಕ್ ಮತಗಟ್ಟೆಗಳು ಮಾತ್ರವಲ್ಲದೆ ವಿವಿಧ ಥೀಮ್ ಮಾದರಿಯ ಮತಗಟ್ಟೆಗಳನ್ನು ಮಾಡಲಾಗುತ್ತಿದ್ದು, ಅದರಂತೆ ಅಂಗವಿಕಲರ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ತಂತ್ರಜ್ಞಾನ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ಸೈನಿಕ ಮತಗಟ್ಟೆ, ಕ್ರೀಡಾ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಸೈನಿಕರ ವಿಶೇಷ ಮತಗಟ್ಟೆಗಳಿರಲಿವೆ ಎಂದು ತಿಳಿಸಿದರು.

ಅಲ್ಲದೆ, ನಗರದಲ್ಲಿ ಈಗಾಗಲೇ ಎಲ್ಲರಿಗೂ ಮತದಾರರ ಗುರುತಿನ ಚೀಟಿ ವಿತರಣೆ ಮಾಡಿದ್ದು, ಅದರಲ್ಲಿ ಎಲ್ಲಾ ಮಾಹಿತಿಯೂ ಲಭ್ಯವಿರಲಿದೆ. ಇದರಿಂದ ಸುಲಭವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಬಹುದಾಗಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಿದರು. ಮತದಾನದ ದಿನ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬುಲೆನ್ಸ್​​ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಯಾವುದಾದರೂ ಮತಗಟ್ಟೆಗಳ ಬಳಿ ತುರ್ತು ಸಂದರ್ಭ ಬಂದಲ್ಲಿ ಆಂಬ್ಯುಲೆನ್ಸ್ ಮೂಲಕ ವೈದ್ಯರ ಸೇವೆ ಒದಗಿಸಲಾಗುವುದು ಎಂದು ಹೇಳಿದರು.

ವಿವಿಧ ರಂಗದ ಪ್ರತಿನಿಧಿಗಳು ಭಾಗಿ: ಪಿಂಕಥಾನ್ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವೈದ್ಯರು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ಸ್ವಸಹಾಯ ಸಂಘದ ಗುಂಪುಗಳು, ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ಸ್ವೀಪ್ ನೋಡಲ್ ಅಕಾರಿ ಸಿದ್ದೇಶ್ವರ್, ಬೂತ್‍ಮಟ್ಟದ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ವಿಧಾನಸಭಾ ಚುನಾವಣೆಗೆ ಬೆಂಗಳೂರು ಪೊಲೀಸರ ಸಕಲ ಸಿದ್ಧತೆ: ನಿರ್ಭೀತ ಮತದಾನಕ್ಕೆ ವೇದಿಕೆ ಸಿದ್ಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.