ETV Bharat / state

ಸಚಿವ ಸ್ಥಾನಕ್ಕೆ ಹಲವರ ಲಾಬಿ: ಖರ್ಗೆಗೆ ಪತ್ರ ಬರೆದ ಶಾಮನೂರು ಶಿವಶಂಕರಪ್ಪ

ಶಾಸಕ ವಿಜಯಾನಂದ ಕಾಶಪ್ಪನವರಿಗೆ ಮಂತ್ರಿ ಸ್ಥಾನ ನೀಡುವಂತೆ ಕೂಡಲಸಂಗಮ ಮಠದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಒತ್ತಾಯಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
author img

By

Published : May 16, 2023, 10:25 PM IST

ಕೂಡಲಸಂಗಮ ಮಠದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಬಹುಮತ ಗಳಿಸುವಲ್ಲಿ ಹೆಚ್ಚಿನ ಕೊಡುಗೆ ನೀಡಿರುವ ವೀರಶೈವ ಲಿಂಗಾಯತ ಸಮುದಾಯದ ಶಾಸಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಶಾಸಕ ಹಾಗೂ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ.

ಖರ್ಗೆಗೆ ಪತ್ರ ಬರೆದ ಶಾಮನೂರು ಶಿವಶಂಕರಪ್ಪ
ಖರ್ಗೆಗೆ ಪತ್ರ ಬರೆದ ಶಾಮನೂರು ಶಿವಶಂಕರಪ್ಪ

ಈ ಸಂಬಂಧ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಅವರು, ಕಾಂಗ್ರೆಸ್ ಪಕ್ಷ ವೀರಶೈವ ಲಿಂಗಾಯತ ಸಮುದಾಯಕ್ಕೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚಿನ ಅವಕಾಶ ಕಲ್ಪಿಸಿತ್ತು. 46 ಮಂದಿಗೆ ಟಿಕೆಟ್ ನೀಡಿದ್ದು, ಅದರಲ್ಲಿ 34 ಮಂದಿ ಗೆಲ್ಲುವ ಮೂಲಕ ಶೇ.74 ರಷ್ಟು ಯಶಸ್ಸು ಸಾಧಿಸಿದ್ದೇವೆ. ಇದರ ಹೊರತಾಗಿ ಇನ್ನೂ 50 ಕ್ಷೇತ್ರಗಳಲ್ಲಿ ಇತರೆ ಸಣ್ಣ ಸಮುದಾಯಗಳನ್ನ ಆಯ್ಕೆ ಮಾಡುವಲ್ಲಿ ನಮ್ಮ ಸಮುದಾಯವು ಪ್ರಮುಖ ಪಾತ್ರ ವಹಿಸಿದೆ. ಬಿಜೆಪಿಯ ಸಾಂಪ್ರದಾಯಿಕ ಮತದಾರರು ತಮ್ಮ ನಿಷ್ಠೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಬದಲಾಯಿಸಿದ್ದಾರೆ ಮತ್ತು ಆ ಮೂಲಕ ರಾಜ್ಯದಲ್ಲಿ 135 ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ ಎಂದಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ-2024 ರ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದೊಂದಿಗೆ ವೀರಶೈವ-ಲಿಂಗಾಯತ ಸಮುದಾಯದ ಬೆಂಬಲವನ್ನು ನಾವು ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿದುಕೊಳ್ಳುವಂತೆ ಮಾಡಬೇಕು. ಇದರಿಂದ ಕಾಂಗ್ರೆಸ್ ಪಕ್ಷವು ನಮ್ಮ ರಾಜ್ಯದಿಂದ ಗರಿಷ್ಠ ಸಂಖ್ಯೆಯ ಸಂಸತ್ ಸದಸ್ಯರನ್ನು ಆಯ್ಕೆ ಮಾಡಿ ಕೇಂದ್ರಕ್ಕೆ ಕಳಿಸಿಕೊಡಲು ಅನುಕೂಲ ಆಗುತ್ತದೆ ಎಂದು ವಿವರಿಸಿದ್ದಾರೆ.

ಮೇಲಿನ ಸಂಗತಿಗಳನ್ನು ಪರಿಗಣಿಸಿ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಅವಕಾಶ ನೀಡುವಂತೆ/ಕಾಂಗ್ರೆಸ್ ಪಕ್ಷಕ್ಕೆ ನಾವು ಈಗ ಒತ್ತಾಯಿಸುತ್ತೇವೆ. ನಮ್ಮ ಸಮುದಾಯದ ಶಾಸಕರ ಸಂಖ್ಯೆಗೆ ಅನುಗುಣವಾಗಿ ಹಲವಾರು ಕ್ಯಾಬಿನೆಟ್ ಸ್ಥಾನಗಳಿಗೆ ಅವಕಾಶ ಕಲ್ಪಿಸಲು ಅಥವಾ ಅವಕಾಶ ನೀಡುವಂತೆ ನಾವು ನಿಮ್ಮಲ್ಲಿ ವಿನಂತಿಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಪತ್ರ

ಹರಿಪ್ರಸಾದ್ ಗೆ ಸಚಿವ ಸ್ಥಾನ ನೀಡಿ : ಪ್ರತಿಪಕ್ಷ ನಾಯಕರಾದ ಬಿ ಕೆ ಹರಿಪ್ರಸಾದ್, ಶಾಸಕ ಮಧು ಬಂಗಾರಪ್ಪ ಸೇರಿದಂತೆ ಬಿಲ್ಲವ-ಈಡಿಗ ಸಮದಾಯದವರನ್ನ ಸಚಿವರನ್ನಾಗಿ ಮಾಡಲು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿದ್ದಾರೆ. ಇನ್ನೊಂದೆಡೆ ಬಿ ಕೆ ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ನೀಡಲು ಒತ್ತಡ ಹೇರುವ ಕಾರ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದಲೂ ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲಾಗಿದೆ.

ವಿಜಯಾನಂದಗೆ ಸ್ಥಾನ : ಶಾಸಕ ವಿಜಯಾನಂದ ಕಾಶಪ್ಪನವರಿಗೆ ಮಂತ್ರಿ ಸ್ಥಾನ ನೀಡುವಂತೆ ಜಯಮೃತ್ಯುಂಜಯ ಶ್ರೀಗಳು ಆಗ್ರಹಿಸಿದ್ದಾರೆ. ಪಂಚಮಸಾಲಿ ಸಮುದಾಯದವರಿಗೆ ಮೀಸಲಾತಿ ಕುರಿತು ಬಾರಿ ಪ್ರಮಾಣದ ಹೋರಾಟ ನಡೆಸಿದ ಸಂದರ್ಭ ಅವರಿಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಬೆಂಬಲ ನೀಡಿದ್ದರು. ಈ ಹಿನ್ನೆಲೆ ಶ್ರೀಗಳು ಸಹ ವಿಜಯಾನಂದ ಪರ ಒತ್ತಡ ಹೇರಿದ್ದಾರೆ.

ರಾಜ್ಯದಲ್ಲಿ ಸಿಎಂ ಆಯ್ಕೆಗೆ ಸಾಕಷ್ಟು ಕಸರತ್ತು ನಡೆಸಿರುವ ಹೈಕಮಾಂಡ್ ಈ ವಿಚಾರದಲ್ಲಿಯೇ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳುವಲ್ಲಿ ಸಫಲತೆ ಸಾಧಿಸಿಲ್ಲ. ಆದರೆ ಇನ್ನೊಂದೆಡೆ ರಾಜ್ಯ ಸಚಿವ ಸಂಪುಟ ಸೇರಲು ಹಲವರು ತಮ್ಮ ಪ್ರಯತ್ನ ಆರಂಭಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ನಂತ್ರ ಪಂಚಮಸಾಲಿಗರನ್ನು ಒಬಿಸಿಗೆ ಸೇರಿಸುವಂತೆ ಒತ್ತಾಯ; ಜಯಮೃತ್ಯುಂಜಯ ಶ್ರೀ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.