ETV Bharat / state

ಅವೈಜ್ಞಾನಿಕ ಜಾತಿಗಣತಿಗೆ ನಮ್ಮ ವಿರೋಧ ಇದೆ: ಶಾಮನೂರು ಶಿವಶಂಕರಪ್ಪ - ಜಾತಿಗಣತಿ ಶಿವಶಂಕರಪ್ಪ ವಿರೋಧ

ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿಗೆ ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತ ಪಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
author img

By ETV Bharat Karnataka Team

Published : Nov 25, 2023, 3:17 PM IST

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ವೈಜ್ಞಾನಿಕವಾಗಿ ಸಮಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಜಾತಿ ಜನಗಣತಿ ವರದಿ ಸರಿ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ''ಜಾತಿ ಗಣತಿ ಲೋಪದಿಂದ ಕೂಡಿದೆ ಎಂದು ನಾವು ವಿರೋಧ ಮಾಡುತ್ತಿದ್ದೇವೆ. ವರದಿಯಲ್ಲಿ ಏನಿದೆ ಅಂತ ಅದೆಲ್ಲ ಲೀಕ್ ಆಗಿದೆ. ಇದರಲ್ಲಿ ಲಿಂಗಾಯತ ವೀರಶೈವ ಎಂದು ಬರೆದುಕೊಂಡೇ ಇಲ್ಲ. ಅನೇಕ ಲೋಪದೋಷಗಳಿರುವ ಈ ಸಮಿಕ್ಷಾ ವರದಿಗೆ ಎಲ್ಲರ ವಿರೋಧವಿದೆ. ನಾವೂ ಸಹ ಸಿಎಂ ಭೇಟಿ ಮಾಡುತ್ತೇವೆ. ಒಕ್ಕಲಿಗರ ಸಮುದಾಯದ ರೀತಿಯೇ ಸಹಿ ಮಾಡಿ ವಿರೋಧ ವ್ಯಕ್ತಪಡಿಸುತ್ತೇವೆ. ಬಿಜೆಪಿ, ಜೆಡಿಎಸ್​​​ನವರೂ ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಕುರಿತು ಈಗಾಗಲೇ ಮೌಖಿಕವಾಗಿ ಸಿಎಂ ಬಳಿ ಚರ್ಚೆ ನಡೆಸಿದ್ದೇವೆ, ನೋಡೋಣ ಎಂದು ಹೇಳಿದ್ದಾರೆ'' ಎಂದರು.

ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಿ, ಎಲ್ಲೋ ಕೂತು ಸಮೀಕ್ಷೆ ಮಾಡುವುದಲ್ಲ. ಪ್ರತ್ಯೇಕ ಲಿಂಗಾಯತ ಧರ್ಮ ಅಂತ ಹೋದವರೆಲ್ಲ ಸೋತರು, ಬರಿ ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಕಚ್ಚಿದರು. ಮೂಲ ವರದಿ ಕೊಟ್ಟಿದ್ದೀನಿ ಅಂತ ಕಾಂತರಾಜ್ ಹೇಳುತ್ತಿದ್ದಾರೆ. ಆದರೆ ನಾಪತ್ತೆಯಾಗಿದೆ. ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಯಾಗಿದೆ'' ಎಂದರು. ಲೋಕಸಭಾ ಚುನಾವಣೆಗೆ ಜಾತಿ ಜನಗಣತಿ ಹಿನ್ನೆಡೆಯಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ''ಈ ಹಿಂದೆ ಪ್ರತ್ಯೇಕ ಧರ್ಮ ವಿಚಾರದಲ್ಲಿ ಆದಂತೆಯೇ 100ರಷ್ಟು ತೊಂದರೆ ಆಗಲಿದೆ'' ಎಂದರು.

ಬಸವರಾಜ ರಾಯರೆಡ್ಡಿ ಹೇಳಿಕೆಗೆ ಟಾಂಗ್ : ಜಾತಿ‌ ವಿಚಾರ ಮಾತನಾಡಿದ್ದು ತಪ್ಪು ಎಂದಿದ್ದ ಬಸವರಾಜ ರಾಯರೆಡ್ಡಿ ಹೇಳಿಕೆ ಕುರಿತು ಉತ್ತರಿಸಿದ ಶಾಮನೂರು ಶಿವಶಂಕರಪ್ಪ ''ಅವನು ಹಿಂದೆಯೂ ಹೀಗೆ ಏನೇನೊ ಮಾತನಾಡಿದ್ದ. ಕ್ಯಾಬಿನೆಟ್ ಹೊರಗಿರುವುದಕ್ಕೆ ಏನೇನೊ ಮಾತನಾಡುತ್ತಿದ್ದಾನೆ ಬರಿ ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಕಚ್ಚಿದ್ದಾರೆ'' ಎಂದು ತರಾಟೆಗೆ ತೆಗೆದುಕೊಂಡರು.

ಒಕ್ಕಲಿಗರೂ ವಿರೋಧ: ಎಚ್​ ಕಾಂತರಾಜು ಅಧ್ಯಕ್ಷತೆಯಲ್ಲಿ ಸಿದ್ಧಪಡಿಸಲಾದ ಜಾತಿಗಣತಿ ವರದಿಗೆ ಒಕ್ಕಲಿಗ ಸಮುದಾಯವೂ ವಿರೋಧ ವ್ಯಕ್ತಪಡಿಸಿ, ಮರು ಸಮೀಕ್ಷೆಗೆ ಆಗ್ರಹಿಸಿದೆ. ಕಳೆದ 2015 ರಲ್ಲಿ ಆಯೋಗದ ವತಿಯಿಂದ ಕೈಗೊಳ್ಳಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಗಳ ಸಹಿ ಇಲ್ಲ ಎಂದು ಹಾಲಿ ಅಧ್ಯಕ್ಷರು, 2021ರ ಅಕ್ಟೋಬರ್ 5 ರಂದು ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಜಾತಿ ಗಣತಿ ವರದಿ ಸ್ವೀಕರಿಸಿ, ವಂಚಿತರಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.