ETV Bharat / state

ಮೋಸ ಆಗುತ್ತಿದೆ ಎಂಬ ರೈತರ ಆತಂಕ ನಿವಾರಿಸಲಾಗಿದೆ: ಸಚಿವ ಶಂಕರ್ ಮುನೇನಕೊಪ್ಪ

author img

By

Published : Nov 24, 2022, 8:46 PM IST

ಆದಾಯ ಹಂಚಿಕೆ ಸಾಧಕ ಬಾಧಕ ಕುರಿತು ಇಂದು ವಿಕಾಸಸೌಧದಲ್ಲಿ ಸಕ್ಕರೆ ಸಚಿವ ಮುನೇಕೊಪ್ಪ ಅವರು ಸಕ್ಕರೆ ಕಾರ್ಖಾನೆ ಅಧ್ಯಕ್ಷರ ಜೊತೆ ಸಭೆ ನಡೆಸಿದರು.

KN_BNG
ಸಚಿವ ಶಂಕರ್ ಮುನೇನಕೊಪ್ಪ

ಬೆಂಗಳೂರು: ಕೈಮಗ್ಗ, ಜವಳಿ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಇಂದು ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ವ್ಯವಸ್ಥಾಪಕ ನಿರ್ದೇಶಕರುಗಳ ಜತೆ ಆದಾಯ ಹಂಚಿಕೆ ಸಾಧಕ ಬಾಧಕಗಳ ಕುರಿತು ವಿಕಾಸಸೌಧದಲ್ಲಿ ಸಭೆ ನಡೆಸಿದರು.

ಬಳಿಕ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಆದಾಯ ಹಂಚಿಕೆಯಲ್ಲಿ ಸಾಧಕ ಬಾಧಕ ಕುರಿತು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಇಂದು ಚರ್ಚೆ ನಡೆಸಿದ್ದು, ಈ ಕುರಿತು ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಅಲ್ಲದೇ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಅಭಿಪ್ರಾಯಕ್ಕೆ ಅಭಿಮತ ಸೂಚಿಸುವುದಾಗಿ ಹೇಳಿದ್ದಾರೆ. ಕಾರ್ಖಾನೆ ಮಾಲೀಕರು ಮುಂದಿನ 5 ದಿನಗಳಲ್ಲಿ ತಮ್ಮ‌ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ ಎಂದರು.

ಪ್ರಸ್ತುತ, ಉಪ ಉತ್ಪನ್ನಗಳ ಲಾಭಾಂಶಬೇಕು ಎಂಬುದು ರೈತರ ಬೇಡಿಕೆಯಾಗಿದ್ದು, ಈ ಬಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪ ಉತ್ಪನ್ನ ಲಾಭಾಂಶ ವಿಷಯದಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಮತ್ತು ರೈತರ ಪರವಾಗಿ ತಾವು ನಿಲ್ಲುವುದಾಗಿ ತಿಳಿಸಿದ್ದು, ಇದೊಂದು ಉತ್ತಮ ಬೆಳವಣಿಗೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಎಚ್​ಎನ್​ಟಿಯಲ್ಲಿ ದೊಡ್ಡ ಮೋಸ ಆಗುತ್ತಿದೆ ಎಂಬ ರೈತರ ಆತಂಕವನ್ನು ಕೂಡ ನಿವಾರಿಸಲಾಗಿದೆ. ಎಚ್​ಎನ್​ಟಿ, ಇಳವರಿ, ತೂಕ ವ್ಯತ್ಯಾಸ ಇತ್ಯಾದಿ ಬಗ್ಗೆ ಸರ್ಕಾರ ಕಾನೂನಾತ್ಮಕ ಕ್ರಮ ಕೈಗೊಳ್ಳುವುದು ಎಂದು ಭರವಸೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಪ್ರಾರಂಭವಾಗಿದ್ದು, ರೈತರಿಗೆ ಎಫ್​ಆರ್​ಪಿಗಿಂತ ಹೆಚ್ಚು ಮೊತ್ತ ಪಾವತಿಸಲಾಗುತ್ತಿದೆ. ಕೆಲವು ಕಡೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಸತ್ಯಾಗ್ರಹ, ಸಕ್ಕರೆ ಕಾರ್ಖಾನೆಗೆ ಮುತ್ತಿಗೆಯಂಥ ಘಟನೆಗಳು ನಡೆದಿವೆ. ಸತ್ಯಾಗ್ರಹ ಕೈಬಿಟ್ಟು, ಕಬ್ಬು ಬೆಳೆಗಾರರಿಗೆ ಕಬ್ಬು ಸಾಗಾಟಕ್ಕೆ ಯಾರೂ ಅಡ್ಡಿ ಉಂಟು ಮಾಡಬಾರದು ಎಂಬ ಮನವಿಗೆ ರೈತರು ಸಹಕರಿಸಿದ್ದಾರೆ.‌ ಅನೇಕ ರೈತ ಹೋರಾಟಗಾರರು ಕೂಡ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ರೈತರ ಸಮಸ್ಯೆ ಆಲಿಸಿ ಬಗೆಹರಿಸಲು ಕಾಲ್ ಸೆಂಟರ್ ತೆರೆಯುವಿಕೆ, ಇಲಾಖೆಯಲ್ಲಿ ತಂತ್ರಜ್ಞಾನದ ಅಳವಡಿಕೆಯಂಥ ಕ್ರಮಗಳನ್ನು ರೈತರಿಗಾಗಿ ಕೈಗೊಳ್ಳಲಾಗಿದೆ. ಸಕ್ಕರೆ ಕಾರ್ಖಾನೆಗಳು ಮತ್ತು ರೈತರ ನಡುವೆ ಸಂಘರ್ಷ ಉಂಟಾದಾಗ ಸರ್ಕಾರ ಮುಂದೆ ನಿಂತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುತ್ತದೆ.

ಅಧಿಕಾರಿ ವರ್ಗ ಒಂದು ತಂಡವಾಗಿ ಕೆಲಸ‌ ಮಾಡುತ್ತದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರು ಸೌಹಾರ್ದಯುತವಾಗಿ, ಒಂದಾಗಿ ಇರುವುದು ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಸರ್ಕಾರ ಸದಾ ಕಾರ್ಯನಿರ್ವಹಿಸುತ್ತದೆ ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ:ಗಡಿ ವಿವಾದ.. ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಬಗ್ಗೆ ಸರ್ವಪಕ್ಷ ಸಭೆ ಕರೆದು ನಿರ್ಧಾರ: ಸಿಎಂ ಬೊಮ್ಮಾಯಿ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.