ಬೆಂಗಳೂರು: ಶಂಕರಗೌಡ ಈರನಗೌಡ ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.
ಶಂಕರಗೌಡ ಪಾಟೀಲ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೆ. 27, 2019ರಂದು ಶಂಕರಗೌಡ ಪಾಟೀಲ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಇದೀಗ ತಕ್ಷಣದಿಂದ ಜಾರಿಗೆ ಬರುವಂತೆ ಶಂಕರಗೌಡ ಪಾಟೀಲ್ ಅವರನ್ನು ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಿಸಿ ರಾಜ್ಯಪಾಲರು ಆದೇಶಿಸಿದ್ದಾರೆ.
ಶಂಕರಗೌಡ ಪಾಟೀಲ ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದು, ಕೈಗಾರಿಕೋದ್ಯಮಿಯಾಗಿದ್ದಾರೆ. ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಸಿಎಂ ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶಂಕರಗೌಡ ಪಾಟೀಲ್ ಅವರನ್ನು ಇದೀಗ ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಿಸಲಾಗಿದೆ.