ETV Bharat / state

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದಿನಾಂಕ ಬದಲಾವಣೆ

author img

By

Published : Feb 21, 2021, 9:17 AM IST

ಫೆಬ್ರವರಿ 25ರಂದು ಪಕ್ಷ ಸೇರಲು ಉತ್ತಮ ದಿನ ಎಂದು ಸೂಚಿಸಿರುವ ಹಿನ್ನೆಲೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅಂದು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

sharath bacchegowda to join congress on feb 25 th
ಶರತ್ ಬಚ್ಚೇಗೌಡ ಫೆ.25ಕ್ಕೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಫೆಬ್ರವರಿ 25ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದಾರೆ.

ಸೇರ್ಪಡೆ ಖಚಿತವಾಗಿ ಆರು ತಿಂಗಳು ಕಳೆಯುತ್ತಾ ಬಂದಿದ್ದು, ಸೇರ್ಪಡೆಯ ಅಧಿಕೃತ ದಿನಾಂಕ ಪ್ರಕಟಿಸುವಲ್ಲಿ ಕೆಪಿಸಿಸಿ ಮಿನಮೇಷ ಎಣಿಸುತ್ತಿದ್ದು, ಕಳೆದ ವಾರವಷ್ಟೇ ಫೆಬ್ರವರಿ 26ರಂದು ಶರತ್ ಬಚ್ಚೇಗೌಡರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಒಂದು ದಿನ ಮುಂಚಿತವಾಗಿ ಸಮಾರಂಭ ಆಯೋಜಿಸಲು ತೀರ್ಮಾನಿಸಲಾಗಿದೆ. ಫೆಬ್ರವರಿ 25 ಸೇರ್ಪಡೆಗೆ ಉತ್ತಮ ದಿನ ಎಂದು ಸೂಚಿಸಿರುವ ಹಿನ್ನೆಲೆ ಅಂದೇ ಪಕ್ಷ ಸೇರ್ಪಡೆಯಾಗಲು ಶರತ್ ಬಚ್ಚೇಗೌಡ ಮನವಿ ಮಾಡಿಕೊಂಡಿದ್ದು, ಕಾಂಗ್ರೆಸ್ ರಾಜ್ಯ ನಾಯಕರು ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ.

ಫೆ. 25 ರಂದು ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ನಾಯಕರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರುವ ದಿನಾಂಕವನ್ನು ಮಾಜಿ ಸಚಿವ ಕೃಷ್ಣಬೈರೇಗೌಡ ಖಚಿತಪಡಿಸಿದ್ದಾರೆ. ಕಳೆದ ಐದಾರು ತಿಂಗಳಿಂದ ಶರತ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿ ಬಂದ ಸಂದರ್ಭದಲ್ಲಿ ಮುಂದೆ ನಿಂತು ಕೃಷ್ಣಬೈರೇಗೌಡ ಎಲ್ಲಾ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ:ಇಂದು ವಿಶ್ವ ಮಾತೃಭಾಷಾ ದಿನ: ಜಗತ್ತಿನಲ್ಲಿವೆ 6 ಸಾವಿರಕ್ಕೂ ಹೆಚ್ಚು ಭಾಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.