ಬೆಂಗಳೂರು: ಮುಜರಾಯಿ ಹಜ್ ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಪ್ರಧಾನಿ ಮೋದಿಗೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆಯ ಕಾಮಧೇನುವನ್ನು ಉಡುಗೊರೆಯಾಗಿ ನೀಡಿದರು.
ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ ಸಂಧರ್ಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಕಲೆಯಾಗಿರುವ ಕಿನ್ನಾಳ ಕಲೆಯಲ್ಲಿ ಸ್ಥಳೀಯ ಕಲಾವಿದರಿಂದ ನಿರ್ಮಿಸಲಾಗಿರುವ ಕಾಮಧೇನುವನ್ನು ಉಡುಗೊರೆಯಾಗಿ ನೀಡಲಾಯಿತು.
ನಮ್ಮ ಸ್ಥಳೀಯ ಕಲೆಗೆ ಉತ್ತೇಜನ ನೀಡುವ ಸಲುವಾಗಿ ಈ ಕಾಮಧೇನು ಅನ್ನು ಉಡುಗೊರೆಯಾಗಿ ನೀಡಲಾಗಿದೆ. ಅದನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ವಿಜಯನಗರ ಸಾಮ್ರಾಜ್ಯದ ಅವಧಿಯ ಈ ಕಲೆ ಇನ್ನಷ್ಟು ಪ್ರಚಾರ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸಿದ ಕಾಶಿ ಯಾತ್ರಾ ರೈಲು: ಪ್ರಧಾನಿ ಮೋದಿ