ETV Bharat / state

ಶಿರಾ-ರಾಜರಾಜೇಶ್ವರಿನಗರ ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ನಾಯಕರ ಸಭೆ - Shira-Rajarajeshwari Nagar Assembly by-election

ಆರ್.ಆರ್.ನಗರ ಮತ್ತು ಶಿರಾ ಉಪಚುನಾವಣೆ ಹಿನ್ನೆಲೆ ಗೆಲ್ಲಲು ಕೈಗೊಳ್ಳಬೇಕಾದ ರಣತಂತ್ರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು.

ಕಾಂಗ್ರೆಸ್ ನಾಯಕರ ಸಭೆ
ಕಾಂಗ್ರೆಸ್ ನಾಯಕರ ಸಭೆ
author img

By

Published : Oct 11, 2020, 3:34 PM IST

ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮುಖಂಡರು, ಶಾಸಕರು, ಪರಾಜಿತ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸದಸ್ಯರು, ವೀಕ್ಷಕರು ಹಾಗೂ ಸಂಯೋಜಕರ ಸಭೆ ನಡೆಸಿದರು.

ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್​, ವಿಧಾನಪರಿಷತ್ ಪ್ರತಿಪಕ್ಷ ಮುಖಂಡ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಟಿ.ಬಿ. ಜಯಚಂದ್ರ, ಕೆ.ಎನ್. ರಾಜಣ್ಣ, ವೆಂಕಟರಮಣಪ್ಪ ಮತ್ತಿತರರು ಭಾಗವಹಿಸಿದ್ದರು.

ಕಾಂಗ್ರೆಸ್ ನಾಯಕರ ಸಭೆ

ಈ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, ಎರಡೂ ಕ್ಷೇತ್ರಗಳಿಗೆ ಪಕ್ಷದ ವತಿಯಿಂದ ಈಗಾಗಲೇ ಎರಡು ಅಭ್ಯರ್ಥಿಗಳ ಹೆಸರು ಘೋಷಣೆಯಾಗಿ ಪ್ರಚಾರ ಕಾರ್ಯ ಆರಂಭವಾಗಿದೆ. ಪ್ರಚಾರದ ವಿಚಾರದಲ್ಲಿ ನಾವು ಉಳಿದೆರಡು ಪಕ್ಷಗಳಿಗಿಂತ ಮುಂದಿದ್ದೇವೆ. ಹತ್ತು ವರ್ಷಗಳ ಯುಪಿಎ ಸರ್ಕಾರದ ಕೊಡುಗೆ ಹಾಗೂ ಐದು ವರ್ಷ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕೊಡುಗೆಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ಈ ಸಂದರ್ಭದಲ್ಲಿ ಮಾಡಬೇಕಾಗಿದೆ ಎಂದರು.

ಚುನಾವಣೆ ಸಂದರ್ಭದಲ್ಲಿ ಒಂದಿಷ್ಟು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಹಾಗೂ ಅನುದಾನ ಬಿಡುಗಡೆ ಮಾಡುವ ಬಿಜೆಪಿ ಸರ್ಕಾರಕ್ಕಿಂತ ನಾವು ಮೇಲು ಎನ್ನುವುದನ್ನು ತೋರಿಸಿಕೊಡಬೇಕಾಗಿದೆ. ಸದ್ಯ ಒಂದು ರಾಜಕೀಯ ಪಕ್ಷವಾಗಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಕ್ಷೇತ್ರಕ್ಕೆ ಯಾವುದೇ ಪ್ರಯೋಜನ ಇಲ್ಲ. ಸಚಿವರಾಗಿ ಶಿರಾ ಕ್ಷೇತ್ರಕ್ಕೆ ಟಿಬಿ ಜಯಚಂದ್ರ ನೀಡಿರುವ ಕೊಡುಗೆ ಹಾಗೂ ಹಿಂದೆ ಅಧಿಕಾರದಲ್ಲಿದ್ದ ಸಂದರ್ಭ ಕಾಂಗ್ರೆಸ್ ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಜನರ ಅರಿವಿಗೆ ತರಬೇಕಾಗಿದೆ. ಪಕ್ಷದ ಆಯಾಭಾಗದ ಮುಖಂಡರು ಈ ಕಾರ್ಯವನ್ನು ಕಾರ್ಯಕರ್ತರಿಗೆ ತಲುಪಿಸುವ ಹೊಣೆ ಹೊರಬೇಕು. ಪ್ರತಿಯೊಬ್ಬ ಮುಖಂಡರ ಮೇಲೆ ಮಹತ್ವದ ಜವಾಬ್ದಾರಿ ಇದೆ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮುಖಂಡರಿಗೆ ಸೂಚನೆ ನೀಡಿದರು.

ಬೆಂಗಳೂರಿನ ಕುವೆಂಪು ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ಕೈಗೊಳ್ಳಬಹುದಾದ ನಿರ್ಧಾರಗಳು ಹಾಗೂ ನಿಲುವುಗಳ ಬಗ್ಗೆ ಮತ್ತು ಜೆಡಿಎಸ್​ನಿಂದ ಕಾಂಗ್ರೆಸ್​ಗೆ ಒಂದಿಷ್ಟು ನಾಯಕರು ಸೇರ್ಪಡೆಯಾಗಿದ್ದು, ಅವರಿಗೆ ಪಕ್ಷದ ತತ್ವ ಸಿದ್ಧಾಂತವನ್ನು ವಿವರಿಸಿ ಅವರನ್ನು ವಿಶ್ವಾಸಕ್ಕೆ ಪಡೆದು ಮುನ್ನಡೆಯುವ ಕಾರ್ಯವನ್ನು ಮಾಡಬೇಕಿದೆ. ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಇಲ್ಲಿ ಗೆಲ್ಲುವ ಮೂಲಕ ನಾವು ನಮ್ಮ ಪ್ರಾಬಲ್ಯವನ್ನು ಮರು ಸ್ಥಾಪಿಸಬೇಕಾಗಿದೆ. ಎರಡು ಕ್ಷೇತ್ರಗಳ ಉಪಚುನಾವಣೆ ಗೆಲುವು ನಮ್ಮಲ್ಲಿ ಇನ್ನಷ್ಟು ಸ್ಪೂರ್ತಿ ತುಂಬಲಿದೆ. ಜೊತೆಗೆ ಈ ಹಿಂದೆ ನಾವು ಕಳೆದುಕೊಂಡಿರುವ ಕ್ಷೇತ್ರವನ್ನು ಮರಳಿ ಪಡೆದಂತೆ ಆಗಲಿದೆ. ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಘಟನೆಗೆ ಮುಂದಾಗಿದ್ದು, ಈ ಉಪಚುನಾವಣೆಯ ಗೆಲುವು ನಮಗೆ ಪ್ರಮುಖ ಮೆಟ್ಟಿಲಾಗಿದೆ. ಈ ಎರಡು ಕ್ಷೇತ್ರಗಳ ಗೆಲುವಿನ ಮೂಲಕ ನಾವು ನಮ್ಮ ಯಶಸ್ಸಿನ ಅಭಿಯಾನವನ್ನು ಆರಂಭಿಸೋಣ ಎಂದು ಕರೆಕೊಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.