ETV Bharat / state

1200 ಕೋಟಿ ರೂ. ವೆಚ್ಚದಲ್ಲಿ ‘ಶಿರಾಡಿ ಘಾಟ್​ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಅನುಮೋದನೆ: ಸಿಎಂ ಬೊಮ್ಮಾಯಿ

ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ. ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆಂದು ಸಿಎಂ ಮಾಹಿತಿ ನೀಡಿದರು.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
author img

By

Published : Jan 20, 2022, 10:07 PM IST

Updated : Jan 20, 2022, 10:18 PM IST

ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದಕ್ಕಾಗಿ 1,200 ಕೋಟಿ ರೂ.ಗಳ ವೆಚ್ಚ ಮಾಡಲು ನಿರ್ಧರಿಸಲಾಗಿದೆ.

ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದರು.

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ.

ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಸಮ್ಮತಿಸಿದ ಕೇಂದ್ರ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

Last Updated : Jan 20, 2022, 10:18 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.