ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೂತನ ಅಧ್ಯಕ್ಷರಾಗಿ ಶಿವಶಂಕರಪ್ಪ ಎಸ್ ಸಾಹುಕಾರ್ ಅವರು ನೇಮಕಗೊಂಡಿದ್ದಾರೆ.
ರಾಜ್ಯಪಾಲ ವಾಜುಬಾಯಿ ವಾಲಾ ಅವರು ಇಂದು ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇರೆಗೆ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಷಡಾಕ್ಷರಿ ಸ್ವಾಮಿ ಅವರು ಈವರೆಗೆ ಕೆಪಿಎಸ್ಸಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ.. ಟೆಂಡರ್ ವಂಚನೆ ಪ್ರಕರಣದಲ್ಲಿ ಜಮ್ಮು ಕಾಶ್ಮೀರ್ ಬ್ಯಾಂಕ್ನ ಮಾಜಿ ಅಧ್ಯಕ್ಷ ಬಂಧನ