ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಅವಧಿಯ ಮೊದಲನೇ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮಹಿಳಾ ಘಟಕ ಜಿಲ್ಲಾ ಘಟಕಗಳ ಜೊತೆ ವೀಡಿಯೋ ಸಂವಾದ ನಡೆಸಿತು.
ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಒಂದು ವರ್ಷದ ಸಂಭ್ರಮ ಹಂಚಿಕೊಳ್ಳುವ ಜೊತೆಗೆ ಮಹಿಳಾ ಘಟಕದ ಕಾರ್ಯ ಚಟುವಟಿಕೆಗಳ ಕುರಿತು ಅವಲೋಕನ ನಡೆಸಲಾಯಿತು.