ETV Bharat / state

ಶಾಪಿಂಗ್​​ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದ ಮಾಲಿನ್ಯ ನಿಯಂತ್ರಣ ಮಂಡಳಿ - ಬೆಂಗಳೂರು

ದೇಶದಾದ್ಯಂತ ಪ್ಲಾಸ್ಟಿಕ್ ಬ್ಯಾನ್ ಆಗಿದ್ರೂ ನಿಯಮ ಉಲ್ಲಂಘಿಸಿ ಅಂಗಡಿ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದನ್ನು ತಿಳಿದ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಲವು ಅಂಗಡಿ ಮಳಿಗೆಗಳಿಗೆ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಂಡಳಿ ಅಧ್ಯಕ್ಷ ಸುಧಾಕರ್
author img

By

Published : Aug 28, 2019, 9:09 PM IST

ಬೆಂಗಳೂರು: ದೇಶದಾದ್ಯಂತ ಪ್ಲಾಸ್ಟಿಕ್ ಬ್ಯಾನ್ ಆಗಿದ್ರೂ ನಿಯಮ ಉಲ್ಲಂಘಿಸಿ ಅಂಗಡಿ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದನ್ನು ತಿಳಿದ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಲವು ಅಂಗಡಿ ಮಳಿಗೆಗಳಿಗೆ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸುಧಾಕರ್

ಮಂಡಳಿ ಅಧ್ಯಕ್ಷ ಸುಧಾಕರ್, ಪ್ಲಾಸ್ಟಿಕ್ ಬಳಕೆ ಎಗ್ಗಿಲ್ಲದೆ ನಡೆಯುತ್ತಿರೋದನ್ನು ಕಂಡು ಬಳಕೆದಾರರನ್ನು ತರಾಟೆಗೆ ತೆಗೆದುಕೊಂಡರು. ನೀವೇ ಹೀಗೆ ಮಾಡಿದರೆ ಬೀದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಎಚ್ಚರಿಕೆ ನೀಡಿದರು. ಸದಾಶಿವನಗರದಲ್ಲಿರುವ ಗೋದರೇಜ್ ನೇಚರ್ ಬ್ಯಾಸ್ಕೆಟ್, ನಾಮ್ದಾರಿ ಫ್ರೆಶ್, ಬ್ರಿಗೇಡ್ ರಸ್ತೆಯಲ್ಲಿರುವ ನೀಲಗಿರಿ ಶಾಪಿಂಗ್ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದ ಅವರು, ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ದೇಶದೆಲ್ಲೆಡೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಆದರೂ ಬಹುತೇಕ ಕಡೆ ಈಗಲೂ ಬಳಸಲಾಗುತ್ತಿದೆ. ಹಾಗಾಗಿ ಮಳಿಗೆಗಳ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ. ಆಗಾಗ್ಗೆ ಇಂತಹ ಅಂಗಡಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುವಂತೆ ಬಿಬಿಎಂಪಿ ಆರೋಗ್ಯಾಧಿಕಾರಿ ಅವರಿಗೂ ಸೂಚನೆ ನೀಡಿದ್ದೇನೆ ಮತ್ತು ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕೆಲಸ ನಿರ್ವಹಿಸದಿದ್ದರೆ ಅವರ ಮೇಲೆ ಕ್ರಮ ಜರುಗಿಸುವ ಅಧಿಕಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಇದೆ ಎಂದರು.

ಇಂದು ದಾಳಿ ನಡೆಸಿದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಶಾಪಿಂಗ್ ಮಾಲ್​ನಂತಹ ಸಂಘಟಿತ ಮಳಿಗೆಗಳ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗುವುದು ಎಂದರು.

Intro:ಪ್ಲಾಸ್ಟಿಕ್ ಬಳಕೆದಾರರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಶಾಕ್- ಮುಂದೆಯೂ ದಿಢೀರ್ ದಾಳಿ ನಡೆಸುವ ಎಚ್ಚರಿಕೆ

ಬೆಂಗಳೂರು- ದೇಶದಾದ್ಯಂತ ಪ್ಲಾಸ್ಟಿಕ್ ಬ್ಯಾನ್ ಆಗಿದ್ರೂ ನಿಯಮಗಳಿಗೆ ಕ್ಯಾರೇ ಅಮ್ಮದೆ ಅಂಗಡಿಮುಂಗಟ್ಟುಗಳ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ರು. ಇದ್ತಿಂದ ಎಚ್ಚೆತ್ತ ಮಾಲಿನ್ಯ ನಿಯಂತ್ರಣ ಮಂಡಳಿ ಕೆಲವು ಅಂಗಡಿ ಮಳಿಗೆಗಳಿಗೆ ದಿಢೀರಿ ಬೇಟಿ ನೀಡಿ ಪರಿಶೀಲನೆ ನಡೆಸಿತು.
ಮಂಡಳಿ ಅಧ್ಯಕ್ಷ ಸುಧಾಕರ್, ಪ್ಲಾಸ್ಟಿಕ್ ಬಳಕೆ ಎಗ್ಗಿಲ್ಲದೆ ನಡೆಯುತ್ತಿರೋದನ್ನು ಕಂಡು ಬಳಕೆದಾರರನ್ನು ತರಾಟೆಗೆ ತೆಗೆದುಕೊಂಡ್ರು.
ನಿಮಗೆ ವಹಿವಾಟು ಆಗ್ಬೇಕು, ದುಡ್ಡು ಮಾಡ್ಬೇಕು, ಅದಕ್ಕೆ ಹೀಗೆ ಮಾಡ್ತೀರಿ ಎಂದು ವ್ಯಾಪಾರಸ್ಥರನ್ನು ತರಾಟೆಗೆ ತೆಗೆದುಕೊಂಡರು. ನೀವೇ ಹೀಗೆ ಮಾಡಿದ್ರೆ ಬೀದಿ ವ್ಯಾಪಾರಿಗಳು ಏನು ಮಾಡಬೇಕು ಎಂದು ಎಚ್ಚರಿಕೆ ನೀಡಿದರು.
ಸದಾಶಿವನಗರದಲ್ಲಿರುವ ಗೋದರೇಜ್ ನೇಚರ್ ಬ್ಯಾಸ್ಕೆಟ್, ನಾಮ್ದಾರಿ ಫ್ರೆಶ್, ಬ್ರಿಗೇಡ್ ರಸ್ತೆಯಲ್ಲಿರುವ ನೀಲಗಿರಿ ಶಾಪಿಂಗ್ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದ ಸುಧಾಕರ್, ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಅಲ್ಲದೆ ವಲಯದ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ, ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮ ತೆಗೆದುಕೊಳ್ಳೋದಾಗಿ ತಿಳಿಸಿದರು.
ಬಳಿಕ ಮಾತನಾಡಿದ ಅವರು, ದೇಶದೆಲ್ಲೆಡೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಆದರೂ ಬಹುತೇಕ ಕಡೆ ಬಳಕೆ ಈಗಲೂ ಚಾಲ್ತಿಯಲ್ಲಿದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ಆಂದೋಲನ ಮಾಡಲು ಮುಂದಾಗಿದ್ದಾರೆ. ಪ್ರತಿಷ್ಠಿತ ಕಂಪನಿ ನಡೆಸುವ ಶಾಪಿಂಗ್ ಕೇಂದ್ರದಲ್ಲಿ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಕೊಡಲು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಬಹುತೇಕ ಇಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲಾಗಿದೆ. ಈ ಮಳಿಗೆಗಳ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ. ಆಗಾಗ್ಗೆ ಇಂಥ ಅಂಗಡಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುವಂತೆ ಬಿಬಿಎಂಪಿ ಆರೋಗ್ಯಾಧಿಕಾರಿ ಅವರಿಗೂ ಸೂಚನೆ ನೀಡಿದ್ದೇನೆ. ಅಂಗಡಿಯ ಲೈಸನ್ಸ್ ರದ್ದು ಮಾಡುವ ಅಧಿಕಾರ ಕೂಡ ಆರೋಗ್ಯಾಧಿಕಾರಿಗಳಿಗೆ ಇದೆ. ಜೊತೆಗೆ ಅಂಗಡಿ ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಬಹುದು. ಆದರೆ, ಅಧಿಕಾರಿಗಳು ಸಹ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿದ್ದಾರೆ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕೆಲಸ ನಿರ್ವಹಿಸದಿದ್ದರೆ ಅವರ ಮೇಲೇ ಕ್ರಮ ಜರುಗಿಸುವ ಅಧಿಕಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಇದೆ ಎಂದರು.

ಇಂದು ದಾಳಿ ನಡೆಸಿದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಶಾಪಿಂಗ್ ಮಾಲ್ನಂಥ ಸಂಘಟಿತ ಮಳಿಗೆಗಳ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗುವುದು ಎಂದರು.

ಸೌಮ್ಯಶ್ರೀ
Kn_Bng_02_KSPCB_raid_7202707Body:.Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.