ETV Bharat / state

ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶದ ಮೂಲಕ ಹಿಂದುಳಿದ ವರ್ಗದ ಒಗ್ಗಟ್ಟು ಪ್ರದರ್ಶನ: ಪರಮೇಶ್ವರ್ - Ikyatha Convention at Chitradurga

ನಮ್ಮನ್ನು ಒಡೆಯಲು ಪ್ರಯತ್ನವನ್ನು ಹಲವರು ನಡೆಸಿದ್ದಾರೆ. 1.5 ಕೋಟಿ ನಮ್ಮ ಜನಸಂಖ್ಯೆ ಇದೆ. ನಮ್ಮ ಸಮುದಾಯದವರು ಶೇ.22ರಷ್ಟು ಮಂದಿ ರಾಜ್ಯದಲ್ಲಿ ಇದ್ದೇವೆ. ನಮ್ಮ ಸಮಸ್ಯೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದೇವೆ. ಹಾಗಾಗಿ ಚಿತ್ರದುರ್ಗದಲ್ಲಿ ಐಕ್ಯತಾ ಸಮಾವೇಶ ನಡೆಸುತ್ತೇವೆ ಎಂದು ಮಾಜಿ ಡಿಸಿಎಂ ಪರಮೇಶ್ವರ್​ ಹೇಳಿದ್ದಾರೆ.

Parameshwar
ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್
author img

By

Published : Dec 7, 2022, 2:16 PM IST

ಬೆಂಗಳೂರು: ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಜ.8ಕ್ಕೆ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಐಕ್ಯತಾ ಸಮಾವೇಶ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಮ್ಮ ಸಮಸ್ಯೆಯನ್ನು ಸರ್ಕಾರ ಹಾಗೂ ಜನತೆಯ ಗಮನಕ್ಕೆ ತರಲು ತೀರ್ಮಾನಿಸಿದ್ದೇವೆ ಎಂದು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ನಾಯಕರೆಲ್ಲಾ ಸೇರಿ ಸಭೆ ನಡೆಸಿದ್ದೇವೆ. ನಮ್ಮನ್ನು ಒಡೆಯಲು ಪ್ರಯತ್ನವನ್ನು ಹಲವರು ನಡೆಸಿದ್ದಾರೆ. 1.5 ಕೋಟಿ ನಮ್ಮ ಜನಸಂಖ್ಯೆ ಇದೆ. ನಮ್ಮ ಸಮುದಾಯದವರು ಶೇ.22ರಷ್ಟು ಮಂದಿ ರಾಜ್ಯದಲ್ಲಿ ಇದ್ದೇವೆ. ನಮ್ಮ ಸಮಸ್ಯೆಯನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದೇವೆ.

ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್

ಸಮಾವೇಶ ನಡೆಸಲು ತೀರ್ಮಾನ: ನಾವೆಲ್ಲಾ ಸೇರಿ ಚರ್ಚಿಸಿ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ಜನರಿಗೆ ಬರಲು ಅನುಕೂಲವಾಗಲಿ ಎಂದು ಮಧ್ಯ ಕರ್ನಾಟಕದಲ್ಲಿ ಮಾಡುತ್ತಿದ್ದೇವೆ. ಜನವರಿ 8 ರಂದು ಸಮಾವೇಶ ನಡೆಯಲಿದೆ. ನಮ್ಮ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳುತ್ತಿದ್ದಾರೆ. ನಮ್ಮ ಸಮುದಾಯದವರಾಗಿರುವ ಅವರಿಗೆ ಸನ್ಮಾನ ಮಾಡುತ್ತೇವೆ ಎಂದು ಹೇಳಿದರು

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಪಾಲ್ಗೊಳ್ಳುತ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಲ್ಲವೇ ಪ್ರಿಯಂಕಾ ಗಾಂಧಿಯಲ್ಲಿ ಒಬ್ಬರು ಪಾಲ್ಗೊಳ್ಳಬೇಕು ಎಂದು ಬಯಸುತ್ತಿದ್ದೇವೆ. ಆ ಸಂದರ್ಭದಲ್ಲಿ ಯಾರು ಪಾಲ್ಗೊಳ್ಳಲು ಸಾಧ್ಯವೋ ಅವರನ್ನು ಸ್ವಾಗತಿಸಲು ಸಿದ್ಧತೆ ನಡೆಸಿದ್ದೇವೆ ಎಂದರು.

ಮೀಸಲಾತಿ ಅನಿವಾರ್ಯ: ನಮ್ಮ ಸಮುದಾಯದ ಜನರಿಗೆ ಸಾಕಷ್ಟು ಸಮಸ್ಯೆ ಇದೆ. ಇದನ್ನು ಸರ್ಕಾರಕ್ಕೆ ಹಾಗೂ ಬೇರೆ ಸಮುದಾಯದ ಜನರಿಗೆ ತಿಳಿಸುವ ಯತ್ನ ಮಾಡುತ್ತೇವೆ. ಮೀಸಲಾತಿ ಎನ್ನುವುದು ನಮ್ಮ ಹಕ್ಕು ಎನ್ನುವುದನ್ನು ಜನರಿಗೆ ತಿಳಿಸುವುದು ಉದ್ದೇಶವಾಗಿದೆ. ಮೀಸಲಾತಿ ಬಗ್ಗೆ ಜನರ ಭಿನ್ನಾಭಿಪ್ರಾಯ ಕೇಳಿ ಬರುತ್ತಿದೆ. ತುಳಿತಕ್ಕೆ ಒಳಗಾದ ಜನರು ಮುಖ್ಯವಾಹಿನಿಗೆ ತರಲು ಮೀಸಲಾತಿ ಅನಿವಾರ್ಯ. ಬಿ.ಆರ್. ಅಂಬೇಡ್ಕರ್ ಅವರು ಮೊದಲ 10 ವರ್ಷದಲ್ಲಿ ಇದು ಸಾಧ್ಯವಾಗಬಹುದು ಎಂದು ಮಿತಿ ಹೇರಿದ್ದರು. ಆದರೆ ಇದು ಸಾಧ್ಯವಾಗದೇ ಇಂದಿಗೂ ಮೀಸಲಾತಿ ಮುಂದುವರೆದಿದೆ ಎಂದು ವಿವರಿಸಿದರು.

ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧಾರ: ಹಿಂದೆ ಕಾಂಗ್ರೆಸ್ ಸರ್ಕಾರ ನಮ್ಮ ಸಮುದಾಯದವರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್​ನಲ್ಲಿ ಅನುದಾನ ಮೀಸಲಿಡಬೇಕೆಂಬ ಕಾನೂನು ತಂದಿತ್ತು. ಮೀಸಲಿಟ್ಟ ಹಣ ಖಾಲಿ ಆಗದಿದ್ದರೆ ಅದನ್ನು ಮುಂದಿನ ಅವಧಿಗೆ ಮುಂದುವರಿಸಬೇಕು ಎಂದು ಹೇಳಲಾಗಿತ್ತು. ಕಾಂಗ್ರೆಸ್ ಸರ್ಕಾರ ಈ ಕಾನೂನು ತಂದಿತ್ತು. ನಮ್ಮ ಪಾಲಿಗೆ ಶೇ 24ರಷ್ಟು ಅನುದಾನ ಮೀಸಲಿಡಬೇಕಿತ್ತು.

ಮೈತ್ರಿ ಸರ್ಕಾರ ಸಹ ಇದನ್ನು ಮುಂದುವರಿಸಿತ್ತು. ಆದರೆ ಮೂರು ವರ್ಷದಿಂದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಅನುದಾನ ಮೀಸಲಿಟ್ಟಿಲ್ಲ. ನಮ್ಮ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿಲ್ಲ. ನಮ್ಮ ಮೀಸಲಾತಿ, ಅನುದಾನ ನೀಡಿಕೆಯನ್ನು ಕಾನೂನಾತ್ಮಕವಾಗಿ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದೇವೆ.

ನಾವು 20ನೇ ಷಡ್ಯೂಲ್​ಗೆ ಸೇರದಿದ್ದರೆ, ಕೇಂದ್ರ ಸರ್ಕಾರದ ಮೂಲಕ ಕಾನೂನಾಗದಿದ್ದರೆ ನಾವು ಹಾಗೆಯೇ ಉಳಿದು ಬಿಡುತ್ತೇವೆ. ಇದಲ್ಲದೇ ಮನೆ ನಿರ್ಮಾಣ, ಮಕ್ಕಳಿಗೆ ಸ್ಕಾಲರ್ಶಿಪ್ ನೀಡುವುದು, ಕೆಐಎಡಿಬಿಗೆ ಸಾಲ ನೀಡುವುದು, ಗುತ್ತಿಗೆ ಕೆಲಸದಲ್ಲಿ ಮೀಸಲಾತಿ ನೀಡುವುದು, ಸೇರಿದಂತೆ ಹಲವು ಸಮಸ್ಯೆಗಳಿದ್ದು ಇದೆಲ್ಲವನ್ನೂ ಸಮಾವೇಶ ಮೂಲಕ ರಾಜ್ಯದ ಗಮನಕ್ಕೆ ತರುವ ಯತ್ನ ಮಾಡುತ್ತೇವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸುದೀರ್ಘ ಚರ್ಚೆ ನಡೆಸುತ್ತಿದ್ದೇವೆ ಎಂದರು.

ನಮ್ಮ ಸಮಸ್ಯೆ ಮನವರಿಕೆ ಮಾಡುವೆವು: ನಮ್ಮೆಲ್ಲಾ ಸಮುದಾಯದವರು ಒಂದಾಗಿ ನಿಂತು, ಒಗ್ಗಟ್ಟಿನಿಂದ ಸೇರಿ ನಮ್ಮ ಸಮಸ್ಯೆ ಮನವರಿಕೆ ಮಾಡುವ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿ, ಜನತಾದಳಕ್ಕೆ ನಿಜವಾದ ಕಾಳಜಿ ಇಲ್ಲ. ಕಾಂಗ್ರೆಸ್ ಹಿಂದುಳಿದ ವರ್ಗಕ್ಕೆ ಉತ್ತಮ ಕೊಡುಗೆ ನೀಡಿದೆ. ನಾವು ಮಾತ್ರ ನಿಮ್ಮೊಂದಿಗೆ ಇದ್ದೇವೆ ಎನ್ನುವುದನ್ನು ವಿವರಿಸಬೇಕಿದೆ. ಬಿಜೆಪಿ ಹಾಗೂ ಜೆಡಿಎಸ್​ನದ್ದು ನಿಜವಾದ ಕಾಳಜಿಯಲ್ಲ ಎನ್ನುವುದನ್ನೂ ತೋರಿಸಬೇಕಾಗಿದೆ.

ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡದಲ್ಲಿ ಸುಮಾರು 160 ಪ್ರತ್ಯೇಕ ಪಂಗಡವಿದ್ದೇವೆ. ನಮ್ಮನ್ನು ಸದಾ ಒಡೆದು ಆಳುವ ಕಾರ್ಯ ಆಗಿದೆ. ನಮಗಿರುವ ಮೀಸಲಾತಿಯನ್ನು ಸಮನಾಗಿ ಹಂಚಿಕೊಂಡು ಸಾಗಬೇಕಿದೆ. ಕಾಂಗ್ರೆಸ್ ಮೂಲಕ ಈ ಒಂದು ಕಾಳಜಿ ಈಡೇರಿಕೆ ಸಾಧ್ಯ ಎನ್ನುವುದನ್ನು ಜನರಿಗೆ ತಿಳಿಸುವುದಕ್ಕಾಗಿ, ನಾವು ಈ ಐಕ್ಯತಾ ಸಮಾವೇಶ ಹಮ್ಮಿಕೊಂಡಿದ್ದೇವೆ. ನಮ್ಮ ಬಲವರ್ಧನೆ ಪ್ರಮುಖ ದ್ಯೇಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಅಂಬೇಡ್ಕರ್ ಇತಿಹಾಸ ಮರೆಮಾಚಿ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದೆ: ಹರಿಪ್ರಸಾದ್

ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿ, ಚಿತ್ರದುರ್ಗದಲ್ಲಿ ಸಮಾವೇಶ ನಡೆಯಲಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ. ಐತಿಹಾಸಿಕ ಸಮಾವೇಶ ಕಾಂಗ್ರೆಸ್ನಿಂದ ನಡೆಯುತ್ತಿದೆ. ಬಹಳ ಸಮಯದಿಂದ ಇಂತದ್ದೊಂದು ಸಮಾವೇಶ ನಡೆಸುವ ಚರ್ಚೆ ನಡೆದಿತ್ತು. ಸಿದ್ದರಾಮಯ್ಯ ಸರ್ಕಾರದ ಸಮಯದಲ್ಲಿ ಜಾರಿಗೆ ಬಂದ ಯೋಜನೆ ಮುಂದುವರಿಯಬೇಕು ಹಾಗೂ ನಮ್ಮ ಎಲ್ಲಾ ಸಮುದಾಯದವರೂ ಒಂದಾಗಿದ್ದೇವೆ ಎನ್ನುವುದನ್ನು ತೋರಿಸುವುದು ಸಮಾವೇಶದ ಉದ್ದೇಶವಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.