ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಶ್ರೀಗಳು, ಶೀಘ್ರವಾಗಿ ಗುಣಮುಖರಾಗುಂತೆ ಹಾರೈಸಿದರು. ಈ ವೇಳೆ ಸಿದ್ದರಾಮಯ್ಯ ಪುತ್ರ, ಶಾಸಕ ಡಾ.ಯತೀಂದ್ರ ಮತ್ತಿತರರು ಉಪಸ್ಥಿತರಿದ್ದರು.