ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅವರು ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಸಿಎಂ ಸ್ಥಾನದಿಂದ ಬಿಎಸ್ವೈ ಅವರನ್ನು ಕೆಳಗಿಳಿಸಲಾಗುತ್ತದೆ ಎಂಬ ವದಂತಿಗಳ ಬೆನ್ನಲ್ಲೇ ಸಿದ್ದಗಂಗಾ ಶ್ರೀ ಸೇರಿದಂತೆ ಹಲವು ಸ್ವಾಮೀಜಿಗಳು ಕಾವೇರಿ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ್ದಾರೆ.