ETV Bharat / state

ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು: ಸಿದ್ದರಾಮಯ್ಯ ಲೇವಡಿ - Siddamramaiah tweet on Modi speech

ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ, ಕೈಲಾಗದ ನಾಯಕನ ಗೋಳಾಟದಂತಿತ್ತು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
author img

By

Published : Jun 30, 2020, 11:22 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಲೇವಡಿ ಮಾಡಿದ್ದಾರೆ.

  • ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ @PMOIndia ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಠ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು.
    1/7#StopBhashanTakeAction

    — Siddaramaiah (@siddaramaiah) June 30, 2020 " class="align-text-top noRightClick twitterSection" data=" ">

ಟ್ವೀಟ್ ಮೂಲಕ ಪ್ರಧಾನಿ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ, ಕೈಲಾಗದ ನಾಯಕನ ಗೋಳಾಟದಂತಿತ್ತು ಎಂದು ವ್ಯಂಗ್ಯವಾಡಿದ್ದಾರೆ.

ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವೆಂಬರ್ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

  • ಆಸ್ಪತ್ರೆಗಳು ತುಂಬಿಹೋಗಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್‌ಗಳ ತೀವ್ರ ಕೊರತೆ ಇದೆ.
    ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ
    ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ.
    ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.
    4/7#StopBhashanTakeAction

ನಿರೀಕ್ಷೆ ಹುಸಿಯಾಗಿದೆ : ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ‌ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ. ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು ಪ್ರಧಾನಿ ಅವರನ್ನು ಒತ್ತಾಯಿಸುತ್ತೇನೆ. ಆಸ್ಪತ್ರೆಗಳು ತುಂಬಿ ಹೋಗಿವೆ. ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್‌ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ ಕೊರೊನಾ ಸೋಂಕಿಗಿಂತ, ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

  • ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರಧಾನ್ಯ,ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ.

    ಈ ತೈಲಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ @PMOIndia ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು.
    6/7#StopBhashanTakeAction

ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ಧವಾಗುತ್ತಿದ್ದರು : ಸಹ ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಪ್ರಧಾನಿ ಮೋದಿ ಅದರ ಖರ್ಚು-ವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು. ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರ ಧಾನ್ಯ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲ ಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ನರೇಂದ್ರ ಮೋದಿ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ಧವಾಗುತ್ತಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದ @PMOIndia ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದು:ಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು.
    7/7#StopBhashanTakeAction

ಸಾಂತ್ವನ ಹೇಳಿದಂತಾಗುತ್ತಿತ್ತು : ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದುಃಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.