ETV Bharat / state

ನಾರಾಯಣಪುರ ನಾಲೆ ಆಧುನೀಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ​: ಸಿದ್ದರಾಮಯ್ಯ ಆರೋಪ - Narayanapur cannel fraud

ನಾರಾಯಣಪುರ ಬಲದಂಡೆ ನಾಲೆಯ ಆಧುನೀಕರಣ ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

siddaramaiah-alleged
ಸಿದ್ದರಾಮಯ್ಯ ಆರೋಪ
author img

By

Published : May 18, 2022, 9:39 PM IST

ಬೆಂಗಳೂರು: ರಾಯಚೂರು ಜಿಲ್ಲೆ ಲಿಂಗಸೂಗೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ನಾರಾಯಣಪುರ ಬಲದಂಡೆ ನಾಲೆಯ 1 ರಿಂದ 15 ವಿತರಣಾ ನಾಲೆಗಳ ಆಧುನೀಕರಣದಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸಂಜೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಲ್ಲಿ ಇಂಜಿನಿಯರ್​ಗಳು, ಕಾಂಟ್ರ್ಯಾಕ್ಟರ್​ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್​ಮಾಲ್‌ ಮಾಡಿದ್ದಾರೆ. ಹಿಂದೊಮ್ಮೆ ಆಧುನೀಕರಣಗೊಂಡ ಕಾಲುವೆಗಳಿಗೆ ಮತ್ತೆ ಮರು ನಿರ್ಮಾಣ ಮಾಡುವುದಾಗಿ ಹೇಳಿ ದುಡ್ಡು ಹೊಡೆಯಲಾಗಿದೆ. ಮಣ್ಣು ತುಂಬಿಸಿದ್ದೇವೆ, ಕಲ್ಲು ಬಂಡೆ ಬ್ಲಾಸ್ಟ್‌ ಮಾಡಿದ್ದೇವೆ, ಮುರಮ್‌ ಹಾಕಿದ್ದೇವೆ ಎಂದೆಲ್ಲ ಸುಳ್ಳು ಲೆಕ್ಕ ನೀಡಿ ಬಿಲ್‌ ಪಡೆಯಲಾಗಿದೆ ಎಂದು ದೂರಿದರು.

ರಾಯಚೂರು ಜಿಲ್ಲೆ ಲಿಂಗಸೂಗೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ನಾರಾಯಣಪುರ ಬಲದಂಡೆ ನಾಲೆಯ 1 ರಿಂದ 15 ವಿತರಣಾ ನಾಲೆಗಳ ಆಧುನೀಕರಣ ಮಾಡಲು 828 ಕೋಟಿ ರೂಪಾಯಿ ಮೊತ್ತದ ಹಾಗೂ 16 ರಿಂದ 18 ಉಪಕಾಲುವೆಗಳ ಅಂದಾಜು ವೆಚ್ಚ 791 ಕೋಟಿ ರೂಪಾಯಿಯ ಒಟ್ಟು 1,619 ಕೋಟಿ ರೂಪಾಯಿ ಟೆಂಡರ್‌ ಕರೆಯಲಾಗಿದೆ. ಈ ಎರಡೂ ಟೆಂಡರ್‌ ಎನ್.ಡಿ ವಡ್ಡರ್ ಅವರ ಹೆಸರಿಗಾಗಿದೆ. ಇವರು ಲಿಂಗಸೂಗೂರಿನ ಮಾಜಿ ಶಾಸಕರಾದ ಮಾನಪ್ಪ ವಜ್ಜಲ್ ಅವರ ಸಹೋದರ. ಕೆಲಸವೇ ಆಗದೆ 425 ಕೋಟಿ ರೂಪಾಯಿ ಬಿಲ್‌ ಪಾವತಿಯಾಗಿದೆ ಎಂದು ಆರೋಪಿಸಿದರು.

ತಾಂತ್ರಿಕ ಸಮಿತಿ ರಚನೆ: ಹಾಲಿ ಶಾಸಕರಾದ ಹುಲಿಗೇರಿ ಅವರು ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯದ ನೀರಾವರಿ ಸಚಿವ, ಜಲ ಸಂಪನ್ಮೂಲ ಇಲಾಖೆಯ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದಾದ ನಂತರ ಮುಖ್ಯಮಂತ್ರಿಗಳು ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳು ಪತ್ರ ಬರೆದ ಮೇಲೆ ಒಂದು ತಾಂತ್ರಿಕ ಸಮಿತಿಯನ್ನು ರಚನೆ ಮಾಡಲಾಗಿದೆ. ಅದರಲ್ಲಿ ರಾಮ್‌ ಪುರೆ, ಶಿವಕುಮಾರ್‌, ಅಶೋಕ್‌ ಹೊಸನಾಡ್‌, ರಾಜೇಂದ್ರ, ಪ್ರದೀಪ್‌ ಮಿತ್ರ ಮಂಜುನಾಥ್‌ ಸೇರಿದಂತೆ 6 ಜನ ಸದಸ್ಯರಿದ್ದಾರೆ. ಈ ಸಮಿತಿ ಸ್ಥಳಕ್ಕೆ ಭೇಟಿ ನೀಡಿ ಒಂದು ವರದಿ ನೀಡಿದೆ ಎಂದು ಹೇಳಿದರು.

ಈ ಹಗರಣವನ್ನು ಸದನ ಸಮಿತಿಗೆ ವಹಿಸುವುದು ಉತ್ತಮ. ಸರ್ಕಾರ ಸದನ ಸಮಿತಿಗೆ ಪೊಲೀಸ್‌ ಭದ್ರತೆ ನೀಡಿ, ಸ್ಥಳ ಪರಿಶೀಲನೆಗೆ ಅವಕಾಶ ಮಾಡಿಕೊಡಬೇಕು. ಇಲ್ಲಿ ಕಂಡುಬರುತ್ತಿರುವ ಎಲ್ಲಾ ಅವ್ಯವಹಾರಗಳು ನಡೆದಿದ್ದೇ ಆದರೆ, ಅಷ್ಟೂ ಹಣವನ್ನು ವಸೂಲಿ ಮಾಡಿ, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಸಂಬಂಧಿತ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಓದಿ: 2019ರ ಪ್ರವಾಹ ಸಂತ್ರಸ್ತರಿಗೆ ನ್ಯಾಯ ಸಮ್ಮತವಾದ ಪರಿಹಾರ ನೀಡಲು ಕ್ರಮ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.