ETV Bharat / state

ಸಚಿವ ಸಂಪುಟ ರಚನೆ: ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಿದ್ದರಾಮಯ್ಯ, ಡಿಕೆಶಿ ಇಂದು ದೆಹಲಿಗೆ

ಸಚಿವ ಸಂಪುಟ ರಚನೆ ಸಂಬಂಧ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

siddaramaiah-and-dk-shivakumar-fling-to-delhi-for-cabinet-formation
ಸಂಪುಟ ಸಚಿವ ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಿದ್ದರಾಮಯ್ಯ, ಡಿಕೆಶಿ ದೆಹಲಿಗೆ ಪಯಣ: ಯಾರಿಗೆಲ್ಲ ಸ್ಥಾನ?!
author img

By

Published : May 19, 2023, 9:52 AM IST

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ದೆಹಲಿಗೆ ತೆರಳಲಿದ್ದು, ಸಂಪುಟ ಸಚಿವರ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಉಭಯ ನಾಯಕರು ದೆಹಲಿಗೆ ಪ್ರಯಾಣಿಸುತ್ತಿದ್ದು, ಹೈಕಮಾಂಡ್ ಜೊತೆ ಸಂಪುಟ ರಚನೆ ಸಂಬಂಧ ಮಾತುಕತೆ ನಡೆಸಲಿದ್ದಾರೆ. ಸಂಪುಟ ಸಚಿವರ ಹೆಸರುಗಳಿಗೆ ಗ್ರೀನ್ ಸಿಗ್ನಲ್ ಪಡೆದು ಇಂದು ಸಂಜೆಯೇ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ. ಸಂಪುಟ ಸೇರಬಯಸುವವರ ಸಂಖ್ಯೆ ದೊಡ್ಡದಿದ್ದು, ಇಬ್ಬರು ನಾಯಕರು ತಮ್ಮ ಆಪ್ತರನ್ನು ಸಂಪುಟಕ್ಕೆ ಸೇರಿಸುವ ಸಂಬಂಧ ಹೈಕಮಾಂಡ್ ಬಳಿ ಮಾತುಕತೆ ನಡೆಸುವರು. ಸಚಿವ ಸ್ಥಾನ ಆಕಾಂಕ್ಷಿಗಳ ಶಾಸಕರ ಪಟ್ಟಿ ಹಿಡಿದು ಉಭಯ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ.

ನಾಳೆ ನಡೆಯುವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕನಿಷ್ಠ 12ರಿಂದ 15 ಸಚಿವರನ್ನು ಸಂಪುಟಕ್ಕೆ ಸೇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂಪುಟ ರಚನೆಯಲ್ಲಿ ಸಮುದಾಯವಾರು, ಪ್ರಾದೇಶಿಕವಾರು, ಹಿರಿಯರು, ಮಹಿಳಾ ಪ್ರಾತಿನಿತ್ಯವನ್ನು ಪರಿಗಣಿಸಲಾಗುತ್ತಿದೆ. ಬಹುತೇಕ ಹಿರಿಯರಿಗೆ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ.

ಸಚಿವರಾಗಲು ಭರ್ಜರಿ ಲಾಬಿ : ಇತ್ತ ಸಚಿವ ಸಂಪುಟ ಸೇರಲು ಶಾಸಕರು ಭರ್ಜರಿ ಲಾಬಿ ನಡೆಸುತ್ತಿದ್ದಾರೆ‌. ಕೆಲವರು ಸಮುದಾಯದ ಸ್ವಾಮೀಜಿಗಳ ಮೂಲಕ ತಮ್ಮ ಒತ್ತಡ ತಂತ್ರ ಮುಂದುವರೆಸಿದರೆ, ಇನ್ನೂ ಕೆಲವರು ಹೈಕಮಾಂಡ್ ಬಳಿ ಸಚಿವ ಸಂಪುಟ ಸೇರುವ ಕಸರತ್ತ ನಡೆಸುತ್ತಿದ್ದಾರೆ. ನಿನ್ನೆಯಿಂದಲೇ ಹಲವರು ಸಿದ್ದರಾಮಯ್ಯ ಹಾಗೂ ಡಿಕೆಶಿ ಮನೆಗಳಿಗೆ ತೆರಳಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ, ಬಹುತೇಕ ಹಿರಿಯರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ ಕೆಲವು ಹೊಸ ಮುಖಗಳಿಗೂ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.

ಸಂಪುಟ ಸೇರುವ ಸಂಭಾವ್ಯರು ಯಾರು? : ಡಾ.ಜಿ.ಪರಮೇಶ್ವರ್, ಕೆ.ಜೆ. ಜಾರ್ಜ್, ರಾಮಲಿಂಗಾ ರೆಡ್ಡಿ, ಎಂ.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್, ಎಂ.ಕೃಷ್ಣಪ್ಪ, ಪ್ರಿಯಾಂಕ್ ಖರ್ಗೆ, ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಜಮೀರ್ ಅಹಮ್ಮದ್ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್

ಸಚಿವ ಸ್ಥಾನದ ಆಕಾಂಕ್ಷಿಗಳು ಯಾರು? : ಶರಣಪ್ರಕಾಶ್ ಪಾಟೀಲ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ಪುಟ್ಟರಂಗಶೆಟ್ಟಿ, ಅಲ್ಲಮಪ್ರಭು ಪಾಟೀಲ, ಶರಣಬಸಪ್ಪ ದರ್ಶನಾಪೂರ, ತನ್ವೀರ್ ಸೇಠ್, ಸಲೀಂ ಅಹ್ಮದ್, ನಾಗರಾಜ್ ಯಾದವ್, ರೂಪಾ ಶಶಿಧರ್, ಎಸ್.ಆರ್. ಶ್ರೀನಿವಾಸ್, ಚೆಲುವರಾಯಸ್ವಾಮಿ, ಎಂ.ಪಿ. ನರೇಂದ್ರ ಸ್ವಾಮಿ, ಮಾಗಡಿ ಬಾಲಕೃಷ್ಣ, ರಾಘವೇಂದ್ರ ಹಿಟ್ನಾಳ, ಬಿ. ನಾಗೇಂದ್ರ, ಕೆ.ಹೆಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪೂರ, ಶಿವಾನಂದ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ್, ರಹೀಂಖಾನ್ ಹಾಗೂ ಬೈರತಿ ಸುರೇಶ್

ಇದನ್ನೂ ಓದಿ : ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಕಾಂಗ್ರೆಸ್​ ನಾಯಕರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.