ETV Bharat / state

ಸಿಆರ್‌ಪಿಎಫ್‌ ಪರೀಕ್ಷೆ; ಕನ್ನಡ ನಿರ್ಲಕ್ಷ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆಕ್ರೋಶ, ಮರು ಪರೀಕ್ಷೆಗೆ ಆಗ್ರಹ - siddaramaiah and h d kumarswamy insists government

ಸಿಆರ್‌ಪಿಎಫ್‌ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್​ ಭಾಷೆಯಲ್ಲಿ ನಡೆಸಿ ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಜೆಡಿಎಸ್ ಹೆಚ್​ಡಿ​ ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

exam
ಕನ್ನಡ ನಿರ್ಲಕ್ಷ್ಯಕ್ಕೆ ವಿರೋಧ
author img

By

Published : Apr 10, 2023, 1:54 PM IST

ಬೆಂಗಳೂರು: ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಲಾದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ- ಕೇಂದ್ರ ಬಿಜೆಪಿ ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಿದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಹೇಳಿದ್ದಾರೆ.

  • ಕೇಂದ್ರ @BJP4India ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ. 1/6#ಕನ್ನಡ_ನಿರ್ಲಕ್ಷ್ಯ_ಬಿಜೆಪಿಯ_ವರಸೆ#CrpfExam

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023 " class="align-text-top noRightClick twitterSection" data=" ">

ಒಟ್ಟು 9212 ಹುದ್ದೆಗಳಿಗೆ ನಡೆದ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತ ಎಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವುದು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಅವರು ಕಿಡಿಕಾರಿದ್ದಾರೆ. ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ನಲ್ಲೇ ನಡೆಸುತ್ತಿದೆ.

  • ಮುಲಾಜಿಲ್ಲದೆ ಸಿಆರ್ ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು. 6/6#ಕನ್ನಡ_ನಿರ್ಲಕ್ಷ್ಯ_ಬಿಜೆಪಿಯ_ವರಸೆ

ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶವಿರುವುದು ಸ್ಪಷ್ಟ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳನ್ನು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ.

ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯ ಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ ಎಂದು ಅವರು ಕಿಡಿಕಾರಿದ್ದಾರೆ. ಮುಲಾಜಿಲ್ಲದೆ ಸಿಆರ್ ಪಿಎಫ್ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

ಕನ್ನಡದಲ್ಲೂ ಸಿಆರ್‌ಪಿಎಫ್ ಪರೀಕ್ಷೆ ಬರೆಯುವಂತಾಗಬೇಕು-ಸಿದ್ದರಾಮಯ್ಯ: ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಜ್ಞಾನ, ಅರ್ಹತೆ ಇರುವ ಕನ್ನಡಿಗರು ಉದ್ಯೋಗ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

  • ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ @narendramodi ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ @BSBommai ಅವರು ಮತ್ತು @BJP4Karnataka ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು.
    5/5#ಭಾಷಾತಾರತಮ್ಯ pic.twitter.com/ZYMUgBDoXw

    — Siddaramaiah (@siddaramaiah) April 10, 2023 " class="align-text-top noRightClick twitterSection" data=" ">

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಪ್ರವೇಶಿಸಿ ಈ ಅನ್ಯಾಯವನ್ನು ಸರಿಪಡಿಸಬೇಕು. ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದಿದ್ದಾರೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೇ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ. ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.

ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ದೆಹಲಿಯಲ್ಲಿ ಯಡಿಯೂರಪ್ಪ ಹೇಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.