ETV Bharat / state

ಔಷಧಿ-ಚಿಕಿತ್ಸೆ ಮೂಲಕ ಕೊರೊನಾ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ : ಸಿದ್ದರಾಮಯ್ಯ

author img

By

Published : May 22, 2021, 7:38 PM IST

ಮೇ ಮೊದಲ ವಾರದಲ್ಲಿ 49,000 ಇದ್ದ ಕೊರೊನಾ ಸೋಂಕಿತರ ಸಂಖ್ಯೆ, ಲಾಕ್​ಡೌನ್​ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಸಿಎಂ ಕೊಚ್ಚಿಕೊಂಡರು. ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು ಮಾತ್ರ ಅವರು ಹೇಳಿಲ್ಲ ಎಂದು ರಾಜ್ಯಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹೌಹಾರಿದ್ದಾರೆ..

siddaramaiah
siddaramaiah

ಬೆಂಗಳೂರು : ಕೊರೊನಾ ತಪಾಸಣೆ ಕಡಿಮೆ ಮಾಡಿ ಸೋಂಕು ಇಳಿಮುಖವಾಗುತ್ತಿದೆ ಎಂದು ಹೇಳುತ್ತಿರುವ ಬಿಜೆಪಿ ಸರ್ಕಾರ ಕೊಲೆಗಡುಕತನ ತೋರಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಟ್ವೀಟ್ ಮೂಲಕ ಈ ಗಂಭೀರ ಆರೋಪ ಮಾಡಿರುವ ಅವರು, ಕೊರೊನಾ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು. ಸಿಎಂ ಬಿ ಎಸ್​ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂಬ ಮುಖ್ಯಮಂತ್ರಿ ಅವರ ಸುಳ್ಳು ಪ್ರಚಾರಕ್ಕೆ ಕಾರಣ, ರೋಗ ಲಕ್ಷಣಗಳಿಲ್ಲದವರ ( ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ ಬಿಜೆಪಿ ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ? ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ ಕೊರೊನಾ ಸೋಂಕು ಹರಡಿಸುವ ಸಾಧ್ಯತೆ ಇದೆ. ಲಾಕ್​ಡೌನ್ ಹೊರತಾಗಿಯೂ ಕೊರೊನಾ ನಿಯಂತ್ರಣಕ್ಕೆ ಬರದೆ ಇರಲು ಬಿಜೆಪಿ ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ ಕೊರೊನಾ ಸೋಂಕಿತರ ಸಂಖ್ಯೆ, ಲಾಕ್​ಡೌನ್​ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಸಿಎಂ ಕೊಚ್ಚಿಕೊಂಡರು. ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು ಮಾತ್ರ ಅವರು ಹೇಳಿಲ್ಲ. ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ ಬಿಎಸ್​ವೈ ಅವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು ಒತ್ತಾಯಿಸುತ್ತೇನೆ. ಕೊರೊನಾವನ್ನು ಔಷಧಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.