ETV Bharat / state

ಪರಿಷತ್​ ಚುನಾವಣೆ:  ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ

author img

By

Published : Jun 17, 2020, 12:02 PM IST

ವಿಧಾನಪರಿಷತ್ ಚುನಾವಣೆಯಲ್ಲಿ ಎರಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸುವ ಅವಕಾಶ ವಿಧಾನಸಭೆ ಸದಸ್ಯರಿಗೆ ಇದ್ದು, 40ಕ್ಕೂ ಹೆಚ್ಚು ಆಕಾಂಕ್ಷಿಗಳು ಇರುವ ಹಿನ್ನೆಲೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಸಲುವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

Siddaramaiah
ಸಿದ್ದರಾಮಯ್ಯ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲು ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ನಾಳೆ ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಸಭೆ ಕರೆದಿದ್ದಾರೆ. ಜೂನ್ 29ರಂದು ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಎರಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸುವ ಅವಕಾಶ ವಿಧಾನಸಭೆ ಸದಸ್ಯರಿಗೆ ಇದ್ದು, 40ಕ್ಕೂ ಹೆಚ್ಚು ಆಕಾಂಕ್ಷಿಗಳು ಇರುವ ಹಿನ್ನೆಲೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಸಲುವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

CLP meeting
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಆಹ್ವಾನ ಪ್ರತಿ

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್​ಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿಂದ ಅಂತಿಮವಾಗಿ ಅಧಿಕೃತ ಇಬ್ಬರ ಆಯ್ಕೆಯ ಪ್ರಕಟಣೆ ಹೊರಬೀಳಲಿದೆ. ಈ ಹಿನ್ನೆಲೆ ನಾಳೆ ನಡೆಯುವ ಸಭೆಯಲ್ಲಿ ಎಲ್ಲಾ ಶಾಸಕರು ವಿಧಾನಪರಿಷತ್ ಸದಸ್ಯರು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಉಪಸ್ಥಿತರಿರಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.