ETV Bharat / state

ಸಿಎಂ ಬೊಮ್ಮಾಯಿ ಈ ಕೆಲಸ ಮಾಡಿದ್ರೆ 'ರಾಜಾಹುಲಿ' ಅಂತಾರಂತೆ ಸಿದ್ದರಾಮಯ್ಯ! - ಬಸವರಾಜ ಬೊಮ್ಮಾಯಿಗೆ ರಾಜಾಹುಲಿ ಬಿರುದು

ವಿವಾದಿತ 'ನಾಯಿಮರಿ' ಹೇಳಿಕೆಯ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

siddaramaiah
ಸಿದ್ದರಾಮಯ್ಯ
author img

By

Published : Jan 6, 2023, 8:43 AM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಧಾನಿ ನರೇಂದ್ರ ಮೋದಿಯವರ ಎದುರು ಧೈರ್ಯದಿಂದ ಮಾತನಾಡಿ ರಾಜ್ಯಕ್ಕೆ ನ್ಯಾಯ ಕೊಡಿಸಲಿ. ಆಗ ನಾನು ‘ನಾಯಿ ಮರಿ’ ಎಂದು ಹೇಳಿರುವುದನ್ನು ವಾಪಸ್​ ಪಡೆಯುತ್ತೇನೆ. ಅಷ್ಟೇ ಅಲ್ಲ, ಅವರಿಗೆ ‘ರಾಜಾ ಹುಲಿ’ ಎನ್ನುವ ಬಿರುದು ಕೊಡುತ್ತೇನೆ ಅಂತಾ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕಾರ್ಪೊರೇಟ್ ತೆರಿಗೆ, ಸುಂಕ, ಪೆಟ್ರೋಲ್-ಡೀಸೆಲ್ ತೆರಿಗೆ, ಜಿಎಸ್​ಟಿ ಮೂಲಕ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸಂದಾಯವಾಗುತ್ತಿರುವ ಹಣ ಸುಮಾರು ರೂ.3.50 ಲಕ್ಷ ಕೋಟಿ, ರಾಜ್ಯಕ್ಕೆ ವಾಪಸ್​ ಬರುವುದು 50,000 ಕೋಟಿಗಿಂತಲೂ ಕಡಿಮೆ. ಈ ಅನ್ಯಾಯದ ವಿರುದ್ಧ ದನಿ ಎತ್ತುವ ಧಮ್ ಇದೆಯೇ?. ಮನಮೋಹನ್ ಸಿಂಗ್ ಸರ್ಕಾರ 2019ರಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನೀಡಿರುವ ಪಾಲು 39,000 ಕೋಟಿ ರೂ., ಕಳೆದ ವರ್ಷ ರಾಜ್ಯಕ್ಕೆ ಬಂದಿರುವ ಹಣ ರೂ.29,000 ಕೋಟಿ ರೂ., ಬಜೆಟ್ ಗಾತ್ರ ಹೆಚ್ಚಿದೆ, ತೆರಿಗೆ ಸಂಗ್ರಹ ಹೆಚ್ಚಿದೆ, ರಾಜ್ಯದ ಪಾಲು ಕಡಿಮೆಯಾಗಿದೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಪ್ರಾಯೋಜಿತ ಯೋಜನೆಗಳು ಮತ್ತು ಜಿಎಸ್‌ಟಿ ಪರಿಹಾರದಿಂದ ಬಂದಿರುವ ಹಣ 30,000 ಕೋಟಿ ರೂ., ಈ ವರ್ಷ ಕೇಂದ್ರ ನೀಡಿರುವುದು 20,106 ಕೋಟಿ ರೂ., ವರ್ಷದಿಂದ ವರ್ಷಕ್ಕೆ ರಾಜ್ಯದ ಪಾಲು ಕಡಿಮೆಯಾಗುತ್ತಿರುವುದು ಯಾಕೆ ಮುಖ್ಯಮಂತ್ರಿಗಳೇ?. 2017ರಿಂದ ಮೇಕೆದಾಟು, 2020 ರಿಂದ ಮಹದಾಯಿ ಮತ್ತು 2021ರಿಂದ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡದೆ ಸತಾಯಿಸುತ್ತಿದೆ. ಮಹದಾಯಿ ಬಗ್ಗೆ ಇತ್ತೀಚೆಗೆ ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಇದರ ವಿರುದ್ಧ ಧ್ವನಿ ಎತ್ತುವವರು ಯಾರು? ಎಂದು ಕೇಳಿದ್ದಾರೆ.

ಇದನ್ನೂ ಓದಿ: ಸಿಎಂಗೆ ನಾಯಿಮರಿ ಹೇಳಿಕೆ ವಿವಾದ.. ಧೈರ್ಯ ಇರಬೇಕೆಂಬ ಅರ್ಥದಲ್ಲಿ ಮಾತನಾಡಿದ್ದೆ : ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯದ ವಿಮಾನ ನಿಲ್ದಾಣ, ಬಂದರುಗಳು ಅದಾನಿ ಕಂಪನಿಗೆ ಮಾರಾಟ ಮಾಡಲಾಗುತ್ತಿದೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಅದೇ ಸಾಲಿಗೆ ಸೇರಲಿದ. ಈಗ ರಾಜ್ಯದ ನಂದಿನಿ ಡೈರಿ ಮೇಲೆ ಕಣ್ಣು ಬಿದ್ದಿದೆ. ರಾಜ್ಯದಲ್ಲಿರುವುದು ಜನರ ಸರ್ಕಾರವೇ?. ಕೇಂದ್ರದ ಏಜಂಟ್ ಸರ್ಕಾರವೇ?. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನದ ಆಶ್ವಾಸನೆಯಷ್ಟೇ ಲಾಭ. ಈ ವರೆಗೆ ಪೈಸೆ ಹಣ ನೀಡಿಲ್ಲ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳೆಲ್ಲವೂ ಕೇಂದ್ರ ಅನುದಾನ ಬಿಡುಗಡೆ ಮಾಡದೆ ಇರುವ ಕಾರಣಕ್ಕೆ ಕುಂಟುತ್ತಾ ಸಾಗಿದೆ. ಇದನ್ನು ಪ್ರಶ್ನಿಸುವ ಶಕ್ತಿ ಯಾರಿಗಿದೆ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರ ವಿವಾದಿತ ಹೇಳಿಕೆ: ವಿಜಯನಗರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಿಮರಿ ಇದ್ದಂತೆ ಇರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿದ್ದರ ಹಿಂದೆ ಸದುದ್ದೇಶವಿದೆ: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.