ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಫೆಬ್ರವರಿ 17ರಂದು ಸಂಜೆ ನಗರದ ಖಾಸಗಿ ಹೋಟೆಲ್ದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಫೆ.17ರಂದು ಬೆಳಗ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮೇಲೆ ಕೈಗೊಳ್ಳಬೇಕಾದ ಚರ್ಚೆ ಹಾಗೂ ಸರ್ಕಾರದ ವಿರುದ್ಧ ಕೈಗೊಳ್ಳುವ ಹೋರಾಟದ ಬಗ್ಗೆ ಒಂದು ಸಂಜೆ ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ.
ಶಾಸಕರು ಸಂಸದರು ರಾಜ್ಯಸಭೆ ಸದಸ್ಯರು ಹಾಗೂ ವಿಧಾನಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಬಜೆಟ್ ಸಂದರ್ಭ ಕೈಗೊಳ್ಳಬಹುದಾದ ಚರ್ಚೆಗಳ ಕುರಿತು ಸಿದ್ದರಾಮಯ್ಯ ಎಂದು ಸದಸ್ಯರಿಂದ ಸಲಹೆ ಸೂಚನೆ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ 15 ನೇ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಸಭೆ ಕರೆದಿರುವ ಸಿದ್ದರಾಮಯ್ಯ ಇದರ ಜೊತೆ ಹಲವು ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಬಿ ಕೆ ಹರಿಪ್ರಸಾದ್ ,ಯುಟಿ ಖಾದರ್ ಕೆ ಗೋವಿಂದರಾಜ್, ಎಂ ಬಿ ಪಾಟೀಲ್ , ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ , ಸಲೀಂ ಅಹಮ್ಮದ್, ಧ್ರುವನಾರಾಯಣ್ ಸೇರಿದಂತೆ ಹಲವರು ಭಾಗಿಯಾಗಲ್ಲಿದ್ದಾರೆ. ಶಾಸಕಾಂಗ ಪಕ್ಷದ ಎಲ್ಲ ಸದಸ್ಯರುಗಳು ಹಾಗೂ ಬಾಹ್ಯ ಬೆಂಬಲಿತ ಸದಸ್ಯರು ಸಭೆಗೆ ತಪ್ಪದೆ ಹಾಜರಾಗುವಂತೆ ಆದೇಶ ಹೊರಡಿಸಿದ್ದಾರೆ.
ಪ್ರಕಾಶ್ ಮೋಹನ್ ಆಗಮನ: ಇಂದು ರಾಜ್ಯಕ್ಕೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಪ್ರಕಾಶ್ ಮೋಹನ್ ಆಗಮಿಸಲಿದ್ದಾರೆ. ಇಂದು ಸಂಜೆ 6.50ಕ್ಕೆ ಆಗಮಿಸಲಿದ್ದು, ಮೂರು ದಿನಗಳ ಕಾಲ ರಾಜ್ಯದಲ್ಲಿ ಠಿಕಾಣಿ ಹೂಡಲಿರುವ ಸ್ಕ್ರೀನಿಂಗ್ ಕಮಿಟಿ ಸದಸ್ಯರು, ನಾಳೆ ರಾಜ್ಯ ಕಾಂಗ್ರೆಸ್ ಸಭೆಯಲ್ಲಿ ಸರಣಿ ಸಭೆ ನಡೆಸಲಿದ್ದಾರೆ.
ಟಿಕೆಟ್ ಆಯ್ಕೆ ಎಚ್ಚರಿಕೆ ನಡೆ: ಟಿಕೆಟ್ ಆಯ್ಕೆ ವಿಚಾರದಲ್ಲಿ ಎಐಸಿಸಿ ಎಚ್ಚರಿಕೆಯ ನಡೆ ಇಟ್ಟಿದೆ. ಡಿಕೆಶಿ ಹಾಗೂ ಸಿದ್ದು ಅಭಿಪ್ರಾಯಕ್ಕಿಂತ ಹಿರಿಯ ಅಭಿಪ್ರಾಯಕ್ಕೆ ಹೆಚ್ಚಿನ ಮನ್ನಣೆ ಸಿಗುವ ಸಾಧ್ಯತೆ ಇದೆ. ಹಿರಿಯ ನಾಯಕರ ಅಭಿಪ್ರಾಯ ಪಡೆದ ಬಳಿಕ ಡಿಕೆಶಿ, ಸಿದ್ದರಾಮಯ್ಯರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರುಗಳ ಜತೆಗೆ ಪ್ರತ್ಯೇಕ ಸಭೆ ನಡೆಸಲಿರುವ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷರು, ರಾಜ್ಯ ನಾಯಕರಾದ ರಾಮಲಿಂಗರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಧೃವನಾರಾಯಣ್ , ಸತೀಶ್ ಜಾರಕಿಹೊಳಿ ಜತೆಗೆ ಪ್ರತ್ಯೇಕ ಸಭೆ ಮಾಡಲಿದ್ದಾರೆ.
ಇದಾದ ಮೇಲೆ ಎಐಸಿಸಿ ಸದಸ್ಯರು ಹಾಗೂ 5 ಜನ ರಾಜ್ಯ ಸಹ ಉಸ್ತುವಾರಿಗಳ ಜತೆಗೆ ಪ್ರತ್ಯೇಕ ಸಭೆ ಮಾಡುವರು. ಬಳಿಕ ಮಾರ್ಗರೇಟ್ ಆಳ್ವ ಹಾಗೂ ವೀರಪ್ಪ ಮೋಹ್ಲಿ, ಬಿ.ಕೆ ಹರಿಪಸ್ರಾದ್,ಎಂ ಬಿ ಪಾಟೀಲ್, ಡಾ ಜಿ ಪರಮೇಶ್ವರ್ , ಕೆ ಎಚ್ ಮುನಿಯಪ್ಪ ದಿನೇಶ್ ಗುಂಡೂರಾವ್ ಅವರು ಸೇರಿದಂತೆ ಹಿರಿಯ ನಾಯಕರ ಅಭಿಪ್ರಾಯ ಪಡೆದ ಬಳಿಕ, ಸ್ಕ್ರೀನಿಂಗ್ ಕಮಿಟಿ ಶಾಸಕ ಹಾಗೂ ಪರಿಷತ್ ಸದಸ್ಯರ ಜತೆಗೆ ಸಭೆ ನಡೆಸಲಿದೆ.ಫೆಬ್ರವರಿ 14 ರಂದು ಕೆಪಿಸಿಸಿ ಪದಾಧಿಕಾರಿಗಳ ಹಾಗೂ ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಸಮಿತಿ ಅಧ್ಯಕ್ಷರು ಸಭೆ ನಡೆಸುವವರು.
ಇದನ್ನೂಓದಿ:ಸರ್ಕಾರದ ಬಜೆಟ್ ಜಾಹೀರಾತು ಆಗಿರುತ್ತದೆ, ನಾನು ಅದರಲ್ಲಿ ಭಾಗವಹಿಸುವುದಿಲ್ಲ: ಹೆಚ್ ಡಿ ಕುಮಾರಸ್ವಾಮಿ